ಬ್ರೇಕಿಂಗ್ ನ್ಯೂಸ್
13-06-26 08:43 pm HK News Staffer ಕ್ರೈಂ
ಬೆಂಗಳೂರು, ಜೂನ್ 13: ನಿವೇಶನ ಇರುವುದಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಹಕಾರಿ ಬ್ಯಾಂಕಿನಿಂದ 70 ಲಕ್ಷ ರೂಪಾಯಿ ಸಾಲ ಪಡೆದು ಕಂತು ಪಾವತಿಸದೆ ವಂಚಿಸಿದ ಆರೋಪದಡಿ ಸಾಲಗಾರ ಹಾಗೂ ಮಾಜಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ ಮೂವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ನೀಡಿದ ದೂರಿನ ಮೇರೆಗೆ ಸಾಲ ಪಡೆದಿದ್ದ ಪ್ರಕಾಶ್, ಹೆಚ್. ರಘು ಎಂ. ಆರ್., ಅಂದಿನ ಶಾಖಾ ವ್ಯವಸ್ಥಾಪಕ (ಪ್ರಭಾರ) ನಾಗರಾಜು ವಿರುದ್ಧ ಪ್ರಕರಣ ದಾಖಲಾಗಿದೆ.
ಸಹಕಾರಿ ಬ್ಯಾಂಕ್ ಸದಸ್ಯನಾಗಿದ್ದ ಪ್ರಕಾಶ್, 2023ರಲ್ಲಿ ಒಂದು ಕೋಟಿ ರೂಪಾಯಿ ಸಾಲ ನೀಡುವಂತೆ ಅರ್ಜಿ ಹಾಕಿದ್ದರು. ಈ ಕುರಿತು ಆಡಳಿತ ಮಂಡಳಿಯು ಸಭೆ ನಡೆಸಿ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಕಾನೂನು ಅಭಿಪ್ರಾಯಕ್ಕೆ ಒಳಪಟ್ಟು ಮಂಜೂರು ಮಾಡಿತ್ತು. ದಾಖಲಾತಿ ಪರಿಶೀಲಿಸಿ ಸಾಲ ಮಂಜೂರು ಮಾಡದಂತೆ ಬ್ಯಾಂಕಿನ ಕಾನೂನು ಸಲಹೆಗಾರ ರಮೇಶ್ ವರದಿ ನೀಡಿದ್ದರು. ಈ ವರದಿಯನ್ನು ನಾಗರಾಜ್ ಅವರು ಆಡಳಿತ ಮಂಡಳಿ ಮುಂದೆ ಪ್ರಸ್ತಾಪಿಸದೆ ಎರಡನೇ ಕಾನೂನು ವರದಿಗಾಗಿ ಮತ್ತೋರ್ವ ಕಾನೂನು ಸಲಹೆಗಾರರನ್ನ ಸಂಪರ್ಕಿಸಿ ಅವರಿಂದ ತಮಗೆ ಪೂರಕ ರೀತಿ ವರದಿ ತರಿಸಿಕೊಂಡಿದ್ದರು.
ಸಾಲ ನೀಡುವಾಗ ಅರ್ಜಿದಾರರಿಂದ ಅಗತ್ಯ ದಾಖಲಾತಿ ಪಡೆಯದೆ 70 ಲಕ್ಷ ಸಾಲ ಮಂಜೂರು ಮಾಡಿದ್ದರು. ಸಾಲ ಪಡೆದ ಆರೋಪಿಯು ಮಾಸಿಕ ಕಂತು ಸರಿಯಾಗಿ ಕಟ್ಟದಿದ್ದಾಗ ಸಾಲ ಪಡೆಯಲು ಅಡ ಇಟ್ಟಿದ್ದ ನಿವೇಶನ ಪರಿಶೀಲನೆಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಕಳುಹಿಸಲಾಗಿತ್ತು.
ಪರಿಶೀಲನೆ ವೇಳೆ ನಿವೇಶನವು ಅರ್ಜಿದಾರನ ಮಾಲೀಕತ್ವ ನಿವೇಶನ ಇಲ್ಲದಿರುವುದು ಗೊತ್ತಾಗಿದೆ. ಆರೋಪಿ ಪ್ರಕಾಶ್, ನಿವೇಶನವಿದೆ ಎಂದು ರಮೇಶ್ ಎಂಬುವರಿಂದ ನಕಲಿ ಆರ್ ಟಿಸಿ ಸೃಷ್ಟಿಸಿದರೆ, ರಘು ಎಂಬಾತನ ಮೂಲಕ ಕ್ರಯಪತ್ರ ತಯಾರಿಸಿಕೊಂಡಿದ್ದರು. ಆರ್.ಆರ್. ನಗರದ ಜಿಬಿಎ ಸಿಬ್ಬಂದಿಗಳೊಂದಿಗೆ ಶಾಮೀಲಾಗಿ ನಕಲಿ ಬಿಬಿಎಂಪಿ ಖಾತಾ ಮಾಡಿಸಿಕೊಂಡು ನಿವೇಶನ ಕೊಳ್ಳಲು ಬ್ಯಾಂಕಿಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸಿರುವುದು ಕಂಡು ಬಂದಿದೆ.
ಜಾಗವೇ ಇಲ್ಲದ ನಿವೇಶನಕ್ಕೆ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕಿಗೆ ವಂಚನೆ ಮಾಡಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಪ್ರಸನ್ನ ಅವರು ಕೋರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ಧಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm