ಬ್ರೇಕಿಂಗ್ ನ್ಯೂಸ್
16-06-26 08:32 pm HK News Staffer ಕ್ರೈಂ
ನಾಗ್ಪುರ, ಜೂನ್ 16: ಭಾರತೀಯ ವಾಯುಪಡೆ ಅಧಿಕಾರಿಯೊಬ್ಬರ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದಲ್ಲದೆ, ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಸಂತ್ರಸ್ತ ಮಹಿಳೆ (24) ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದು, ಆಕೆಯ ಹಳೆಯ ಸಹಪಾಠಿ ಅಯಾಜ್ ತಾಜ್ ಮದಾರೆ (26) ಎಂಬಾತ ಆಸ್ತಿ ವ್ಯವಹಾರದ ನೆಪದಲ್ಲಿ ಹೋಟೆಲ್ ಒಂದಕ್ಕೆ ಕರೆಸಿಕೊಂಡಿದ್ದ. ಅಲ್ಲಿ ಮಹಿಳೆಗೆ ಅಮಲು ಪದಾರ್ಥ ಬೆರೆಸಿದ ಜ್ಯೂಸ್ ನೀಡಿ, ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಈ ಸಂದರ್ಭದ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಚಿತ್ರೀಕರಿಸಿಕೊಂಡು ಬ್ಲಾಕ್ಮೇಲ್ ಮಾಡಿದ್ದಾಗಿ ದೂರು ನೀಡಲಾಗಿದೆ.
ಆರೋಪಿ ಅಯಾಜ್ ಅಶ್ಲೀಲ ವಿಡಿಯೋಗಳನ್ನು ಇಟ್ಟುಕೊಂಡು ಮಹಿಳೆಯನ್ನು ಬ್ಲ್ಯಾಕ್‌ಮೇಲ್ ಮಾಡಿದ್ದು, ಹಲವು ಬಾರಿ ಲೈಂಗಿಕ ಶೋಷಣೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಆಕೆಯಿಂದ ಬರೋಬ್ಬರಿ 3.09 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದಾನೆ. ಮೇ 2025 ರಲ್ಲಿ ಆರೋಪಿಯು ಮಹಿಳೆಯನ್ನು ಕಲ್ಮೇಶ್ವರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ತನ್ನ ಸಹಚರರಾದ ಅಮೀನ್ ಶೇಖ್ ಮತ್ತು ಹಜರತ್ ಮೌಲಾನಾ ಎಂಬವರ ಜೊತೆ ಸೇರಿ ಬಲವಂತ ಮತಾಂತರಿಸಲು ವಿಧಿ ವಿಧಾನಗಳನ್ನು ನೆರವೇರಿಸಿದ್ದಾನೆ. ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯು 'ನನ್ನನ್ನು ಬಿಟ್ಟುಬಿಡಿ' ಎಂದು ಗೋಗರೆಯುತ್ತಿದ್ದರೂ, ಆರೋಪಿ ಆಕೆಯ ಕೈಗಳನ್ನು ಬಲವಂತವಾಗಿ ಹಿಡಿದು ಧಾರ್ಮಿಕ ಶ್ಲೋಕಗಳನ್ನು ಪಠಿಸುತ್ತಿರುವುದು ಕಂಡುಬಂದಿದೆ.
ಇತ್ತೀಚೆಗೆ ಕರ್ತವ್ಯ ಮುಗಿಸಿ ಮನೆಗೆ ಮರಳಿದ ತನ್ನ ಪತಿಗೆ ಮಹಿಳೆ ಈ ಎಲ್ಲಾ ವಿಷಯಗಳನ್ನು ತಿಳಿಸಿದ್ದು, ತಕ್ಷಣವೇ ಸೋನೆಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಅತ್ಯಾಚಾರ, ಸುಲಿಗೆ, ಬಲವಂತದ ಧರ್ಮಾಂತರ ಹಾಗೂ ಮಹಾರಾಷ್ಟ್ರದ ಬ್ಲ್ಯಾಕ್ ಮ್ಯಾಜಿಕ್ (ಮಾಟಮಂತ್ರ ನಿಷೇಧ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಪ್ರಮುಖ ಆರೋಪಿ ಅಯಾಜ್ ಮದಾರೆ ಮತ್ತು ಅಮೀನ್ ಶೇಖ್‌ನನ್ನು ಬಂಧಿಸಲಾಗಿದ್ದು, ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ತಲೆಮರೆಸಿಕೊಂಡ ಮೂರನೇ ಆರೋಪಿ ಹಜರತ್ ಮೌಲಾನಾ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm