ಬ್ರೇಕಿಂಗ್ ನ್ಯೂಸ್
17-06-26 01:41 pm HK News Staffer ಕ್ರೈಂ
ಉಳ್ಳಾಲ, ಜೂ.17: ನಾಲ್ಕು ಮುಸ್ಲಿಂ ಯುವತಿಯರು ಚಲಿಸುತ್ತಿದ್ದ ಸ್ಕೂಟರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಘಟನೆ ನಿನ್ನೆ ರಾತ್ರಿ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ. ಯುವತಿಯರು ಹೆಲ್ಮೆಟ್ ಧರಿಸದೆ ಸ್ಕೂಟರಲ್ಲಿ ನಾಲ್ವರು ಸವಾರಿ ಮಾಡಿ ಹುಚ್ಚಾಟ ಮೆರೆದಿದ್ದಲ್ಲದೆ, ರಸ್ತೆ ಬದಿಗೆ ಬಿದ್ದಿರುವ ಘಟನೆಯ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಿನ್ನೆ ರಾತ್ರಿ ಒಂಭತ್ತು ಗಂಟೆ ಸುಮಾರಿಗೆ ತೊಕ್ಕೊಟ್ಟು ಒಳಪೇಟೆಯ ಎಬಿಸಿ ಕ್ಲಬ್ ಬಳಿ ಘಟನೆ ನಡೆದಿದೆ. ಉಳ್ಳಾಲ ಮೇಲಂಗಡಿಯಿಂದ ಟಿ.ಸಿ ರೋಡ್ ಮಾರ್ಗವಾಗಿ ತೊಕ್ಕೊಟ್ಟು ಒಳಪೇಟೆಗೆ ಸ್ಕೂಟರಲ್ಲಿ ಬರುತ್ತಿದ್ದ ಯುವತಿಯರು ರಸ್ತೆಯ ಹಂಪ್ಸ್ ದಾಟುವಾಗ ನಿಯಂತ್ರಣ ತಪ್ಪಿದ್ದು, ಸ್ಕೂಟರನ್ನ ಎಬಿಸಿ ಕ್ಲಬ್ ಕಡೆಗೆ ನುಗ್ಗಿಸಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆಸಿ, ಕೆಳಗಡೆ ಬಿದ್ದಿದ್ದಾರೆ.




ಘಟನೆ ನಡೆದ ವೇಳೆ ಎಬಿಸಿ ಕ್ಲಬ್ ಒಳಗಡೆ ಸೇರಿದ್ದ ಯುವಕರು ಹೊರಗೆ ಓಡಿ ಬಂದಿದ್ದು, ಸ್ಕೂಟರಿಂದ ಕೆಳಗಡೆ ಬಿದ್ದಿದ್ದ ಯುವತಿಯರನ್ನ ಮೇಲಕ್ಕೆತ್ತಿ ಉಪಚರಿಸಿದ್ದಾರೆ.
ಘಟನೆಯ ವೀಡಿಯೋ ಸಿಸಿ ಕ್ಯಾಮೆರದಲ್ಲಿ ದಾಖಲಾಗಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ. ಉಳ್ಳಾಲ ಮೇಲಂಗಡಿಯ ಅಪ್ರಾಪ್ತ ಕಾಲೇಜು ಯುವತಿಯರು ಸ್ಕೂಟರಲ್ಲಿ ಸವಾರಿ ನಡೆಸಿರುವುದಾಗಿ ಮಾಹಿತಿ ಲಭಿಸಿದೆ. ಏನೋ ಅದೃಷ್ಟವಶಾತ್ ಘಟನೆಯಿಂದ ಸ್ಕೂಟರ್ ನಲ್ಲಿದ್ದ ಯುವತಿಯರು ಸೇರಿದಂತೆ ಪಾದಚಾರಿಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ.
ಘಟನೆಯಿಂದ ಎಬಿಸಿ ಕ್ಲಬ್ ಸದಸ್ಯರ ಎರಡು ದ್ವಿಚಕ್ರ ವಾಹನಗಳಿಗೆ ಹಾನಿಯುಂಟಾಗಿದೆ. ಸಂಚಾರಿ ನಿಯಮಗಳನ್ನ ಗಾಳಿಗೆ ತೂರಿ ಹುಚ್ಚಾಟ ಮೆರೆದ ಯುವತಿಯರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm