ಬ್ರೇಕಿಂಗ್ ನ್ಯೂಸ್
24-06-26 05:57 pm HK News Staffer ಕ್ರೈಂ
ಲಕ್ನೋ, ಜೂನ್ 24: ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಸಂಗ್ರಹದಲ್ಲಿ 200 ಕೋಟಿ ಗೋಲ್ಮಾಲ್ ಆಗಿದೆಯೆಂಬ ವರದಿಗಳ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡವು 150 ಪುಟಗಳ ಪ್ರಾಥಮಿಕ ವರದಿಯನ್ನು ಉತ್ತರ ಪದೇಶ ಸರ್ಕಾರಕ್ಕೆ ಸಲ್ಲಿಸಿದೆ. ಮೂಲಗಳ ಪ್ರಕಾರ, ಅಯೋಧ್ಯೆ ಶ್ರೀರಾಮ ತೀರ್ಥಕ್ಷೇತ್ರ ಟ್ರಸ್ಟ್‌ನ ಯಾರಿಗೂ ಕ್ಲೀನ್ ಚಿಟ್ ನೀಡಿಲ್ಲ. ಜೊತೆಗೆ, 20ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಶಿಫಾರಸು ಮಾಡಿದೆ.
ಇದಲ್ಲದ, ಕಾಶಿ ವಿಶ್ವನಾಥ ಮಂದಿರದ ಮಾದರಿಯಲ್ಲಿ ಅಯೋಧ್ಯೆ ಆಡಳಿತದ ಮೇಲ್ವಿಚಾರಣೆಗೆ ಪ್ರತ್ಯೇಕ ಟ್ರಸ್ಟ್ ಪುನಾರಚಿಸಿ ಸಿಇಒ
ಮಾದರಿಯಲ್ಲಿ ಆಡಳಿತಾಧಿಕಾರಿ ನೇಮಕ ಮಾಡುವಂತೆ ಸೂಚಿಸಿದೆ. ಅಯೋಧ್ಯೆ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸಹಾಯಕ ರಾಮಶಂಕರ್ ಆಲಿಯಾಸ್ ಚಿನ್ನು ನಿವಾಸದಲ್ಲಿ 2 ಕೋಟಿ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣ ವಶಪಡಿಸಿರುವುದನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮಂದಿರದಲ್ಲಿ 200 ಕೋಟಿ ರೂ. ಕಳವಾಗಿರುವ ಬಗ್ಗೆಯೂ ಅಂದಾಜಿಸಲಾಗಿದೆ.
ಇದು ಗೌಪ್ಯ ತನಿಖೆಯ ಪ್ರಾಥಮಿಕ ವರದಿಯಾಗಿದ್ದರಿಂದ ತನಿಖೆಯಲ್ಲಿ ಕಂಡುಬಂದ ಅಂಶಗಳನ್ನು ತನಿಖಾ ತಂಡ ಬಹಿರಂಗ ಮಾಡಿಲ್ಲ. ಹಾಗೆಯೇ ದೇಣಿಗೆ ಸಂಗ್ರಹ, ಎಣಿಕೆ ಹಾಗೂ ಮೇಲ್ವಿಚಾರಣೆಯಲ್ಲಿ ಲೋಪ ಎಸಗಿದವರ ವಿರುದ್ಧ ಕ್ರಮ ಜರುಗಿಸಲು ಶಿಫಾರಸು ಮಾಡಲಾಗಿದೆ. ಇದೇ ವೇಳೆ, ಒಂದು ವಾರದೊಳಗಾಗಿ ಅಂತಿಮ ವರದಿಯನ್ನು ಸಲ್ಲಿಸುವುದಾಗಿ ಲಖ್ನೋ ವಿಭಾಗದ ಆಯುಕ್ತ ವಿಜಯ್ ವಿಶ್ವಾಸ್ ನೇತೃತ್ವದ ಮೂವರು ಸದಸ್ಯರ ವಿಶೇಷ ತನಿಖಾ ತಂಡ ತಿಳಿಸಿದೆ.
ಅಯೋಧ್ಯೆ ರಾಮ ಮಂದಿರದ ದೇಣಿಗೆ ದುರುಪಯೋಗವಾಗಿದೆ ಎಂದು ಆರೋಪ ಭಾರೀ ವಿವಾದ ರೂಪ ಪಡೆಯುತ್ತಿದ್ದಂತೆ ಉತ್ತರ ಪ್ರದೇಶ ಸರ್ಕಾರ ತನಿಖಾ ತಂಡವನ್ನು ನೇಮಿಸಿ ವರದಿ ಸಲ್ಲಿಸಲು ಸೂಚಿಸಿತ್ತು. ಆದರೆ ತನಿಖಾ ವರದಿ ಬಗ್ಗೆ ಆಕ್ಷೇಯ ವ್ಯಕ್ತಪಡಿಸಿರುವ ಎಸ್ಪಿ ನಾಯಕ ದೀಪಕ್ ರಂಜನ್, ತನಿಖೆಯಲ್ಲಿ ಕೆಳಮಟ್ಟದ ವ್ಯಕ್ತಿಗಳನ್ನು ಮಾತ್ರ ಗುರಿಯಾಗಿಸಲಾಗಿದೆ. ಉನ್ನತ ಹಾಗೂ ಪ್ರಭಾವಿ ವ್ಯಕ್ತಿಗಳ ಬಗ್ಗೆ ತನಿಖೆ ನಡೆಸುವ ಗೊಡವೆಗೆ ಹೋಗಿಲ್ಲ. ಆದ್ದರಿಂದ ತನಿಖಾ ವರದಿಯಲ್ಲಿ ತಮಗೆ ವಿಶ್ವಾಸವಿಲ್ಲ ಎಂದು ಹೇಳಿದ್ದಾರೆ.
ತನಿಖಾ ವರದಿಯು ಅಯೋಧ್ಯೆ ರಾಮಮಂದಿರದ ಮೇಲ್ವಿಚಾರಣೆ ವ್ಯವಸ್ಥೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟಿಸಿದೆ. ಟ್ರಸ್ಟ್ ಅಧಿಕಾರಿಗಳು ಹುಂಡಿ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿರುವುದು ಗೋಚರಿಸಿರುವುದನ್ನು ಬೊಟ್ಟು ಮಾಡಿದೆ. ಅಲ್ಲದೆ, ದೇಗುಲಕ್ಕೆ ಟ್ರಸ್ಟ್ ಸಂಬಂಧಿಗಳೇ ಅಧಿಕಾರಿಗಳಾಗಿ ನೇಮಕವಾಗಿದ್ದು ಇವರಿಗೆ ಹಣ ಎಣಿಕೆ ಸಿಬ್ಬಂದಿ ನಡುವೆ ಸಂಪರ್ಕ ಇರುವ ಬಗ್ಗೆ ಪರಿಶೀಲಿಸಲಾಗಿದೆ. ಪ್ರಕರಣದ ಸಮಗ್ರ ತನಿಖೆಗಾಗಿ ಹೆಚ್ಚುವರಿ ಸಮಯವನ್ನೂ ಎಸ್‌ಐಟಿ ಕೇಳಿದ್ದು ಇದೇ ವೇಳೆ, ಕಾಣಿಕೆ ನಗದು ಎಣಿಸುತ್ತಿದ್ದ 40ಕ್ಕೂ ಹೆಚ್ಚು ಸಿಬ್ಬಂದಿಯನ್ನು ಪ್ರಕರಣ ಹೊರಬಂದ ಬಳಿಕ ಕೆಲಸದಿಂದ ತೆಗೆದು ಹಾಕಲಾಗಿದೆ. ಅಯೋಧ್ಯೆ ಮಂದಿರ ಹೆಸರಲ್ಲಿ ದೇಶಾದ್ಯಂತ ದೇಣಿಗೆ ಸಂಗ್ರಹ ಮಾಡಲಾಗಿದ್ದು 3500 ಕೋಟಿಗೂ ಹೆಚ್ಚು ಹಣ ಸಂಗ್ರಹವಾಗಿದೆ ಎನ್ನಲಾಗಿತ್ತು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm