ಬ್ರೇಕಿಂಗ್ ನ್ಯೂಸ್
26-06-26 04:26 pm HK News Staffer ಕ್ರೈಂ
ಮಂಗಳೂರು, ಜೂನ್ 26: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಜಾಲದ ವಿರುದ್ಧ ಮಂಗಳೂರು ನಗರ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿಯ ಆಧಾರದ ಮೇಲೆ ಜೂನ್ 25ರಂದು ಕುಳಾಯಿಗುಡ್ಡೆ ಪರಿಸರದಲ್ಲಿರುವ ಬಾಡಿಗೆ ಮನೆಯ ಮೇಲೆ ದಾಳಿ ನಡೆಸಿದ ಸಿಸಿಬಿ ತಂಡ, ಆರೋಪಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು (26) ಎಂಬಾತನನ್ನು ಬಂಧಿಸಿದೆ.
2.10 ಲಕ್ಷ ರೂ. ಮೌಲ್ಯದ ಸೊತ್ತು ವಶಕ್ಕೆ
ದಾಳಿಯ ವೇಳೆ ಆರೋಪಿಯಿಂದ ಸುಮಾರು 15 ಗ್ರಾಂ ಎಂಡಿಎಂಎ ಮಾದಕವಸ್ತು, ಒಂದು ಮೊಬೈಲ್ ಫೋನ್, ಡಿಜಿಟಲ್ ತೂಕಮಾಪನ ಯಂತ್ರ ಹಾಗೂ ಡ್ರಗ್ಸ್ ಪ್ಯಾಕಿಂಗ್ಗೆ ಬಳಸುತ್ತಿದ್ದ ಜಿಪ್ ಲಾಕ್ ಕವರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹2,10,500 ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ವಿದ್ಯಾರ್ಥಿಗಳೇ ಟಾರ್ಗೆಟ್!
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಹೊರಗಿನಿಂದ ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು, ಕುಳಾಯಿಗುಡ್ಡೆಯಲ್ಲಿರುವ ತನ್ನ ಬಾಡಿಗೆ ಮನೆಯಿಂದ ಸಾರ್ವಜನಿಕರು ಹಾಗೂ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎನ್ನುವುದು ಬೆಳಕಿಗೆ ಬಂದಿದೆ.
ಬಂಧಿತ ಆರೋಪಿ ಮನು ವಿರುದ್ಧ ಈ ಹಿಂದೆಯೇ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ. ಪಣಂಬೂರು ಹಾಗೂ ಬಜಪೆ ಪೊಲೀಸ್ ಠಾಣೆಗಳಲ್ಲಿ ಎನ್ಡಿಪಿಎಸ್ ಪ್ರಕರಣಗಳು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಮಸೀದಿಗೆ ಕಲ್ಲು ತೂರಾಟ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದರೂ ಮತ್ತೆ ಮಾದಕವಸ್ತು ದಂಧೆಯಲ್ಲಿ ತೊಡಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಇನ್ನಷ್ಟು ಆರೋಪಿಗಳಿಗಾಗಿ ಬಲೆ
ಈ ಯಶಸ್ವಿ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ನಡೆಸಿದ್ದು, ಈ ಡ್ರಗ್ಸ್ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಉಳಿದ ಆರೋಪಿಗಳ ಪತ್ತೆಗಾಗಿ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm