ಬ್ರೇಕಿಂಗ್ ನ್ಯೂಸ್
29-06-26 09:32 am HK News Staffer ಕ್ರೈಂ
ಮಂಗಳೂರು, ಜೂನ್ 29: ಮುಂಬೈನಿಂದ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದ ಕೇರಳ ಮೂಲದ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ಲಕ್ಷಾಂತರ ಮೌಲ್ಯದ ಚಿನ್ನ ಮತ್ತು ನಗದು ಹಣವನ್ನು ಅಪಹರಿಸಿದ ಘಟನೆ ಪಣಂಬೂರು ಬಳಿಯ ಬೈಕಂಪಾಡಿ ಜಂಕ್ಷನ್ನಲ್ಲಿ ಇಂದು ನಸುಕಿನ ವೇಳೆಗೆ ನಡೆದಿದೆ.
ನಸುಕಿನ 3 ಗಂಟೆ ವೇಳೆಗೆ ಎರಡು ಇನೋವಾ ಮತ್ತು ಇನ್ನೊಂದು ಸ್ವಿಫ್ಟ್ ಕಾರಿನಲ್ಲಿ ಬಂದಿದ್ದ ಏಳೆಂಟು ಮಂದಿಯಿದ್ದ ತಂಡ ಏಕಾಏಕಿ ಚಿನ್ನದ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ, ಪತ್ನಿ ಹಾಗೂ ಮಗನ ಸಮೇತ ಕಾರಿನೊಂದಿಗೆ ಪರಾರಿಯಾದ ಸಿನಿಮಾ ಶೈಲಿಯ ದರೋಡೆ ನಡೆದಿದೆ. ಕೇರಳದ ಪಯ್ಯನ್ನೂರಿನ ನಿವಾಸಿ ಹಾಗೂ ಚಿನ್ನದ ವ್ಯಾಪಾರಿ ವಿಕಾಸ್ (42) ಅವರು ತನ್ನ ಪತ್ನಿ ಹಾಗೂ ಪುತ್ರನ ಜೊತೆಗೆ ಬಿಳಿ ಬಣ್ಣದ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಮುಂಬೈನಿಂದ ಕೇರಳಕ್ಕೆ ಹಿಂದಿರುಗುತ್ತಿದ್ದರು. ಬೈಕಂಪಾಡಿಯ ದ್ವಾರದ ಬಳಿ ಎರಡು ಇನ್ನೋವಾ ಕಾರುಗಳು ಹಾಗೂ ಸ್ವಿಫ್ಟ್ ಕಾರಿನಲ್ಲಿ ಬಂದ ಸುಮಾರು 7ರಿಂದ 8 ಮಂದಿ ಅಪರಿಚಿತರು ವಿಕಾಸ್ ಅವರ ಕಾರನ್ನು ಅಡ್ಡಗಟ್ಟಿದ್ದಾರೆ.
ವಿಕಾಸ್ ಅವರನ್ನು ಕಾರಿನಿಂದ ಕೆಳಗಿಳಿಸಿದ ದುಷ್ಕರ್ಮಿಗಳು, ಅವರ ಪತ್ನಿ ಮತ್ತು ಮಗನ ಸಮೇತ ಕಾರನ್ನು ಒಯ್ದಿದ್ದಾರೆ. ನಂತರ ಕುಳೂರು ಬಳಿ ಪತ್ನಿ, ಮಗನನ್ನು ಕೆಳಗಿಳಿಸಿ, ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದಾರೆ. ವಿಕಾಸ್ ಕೇರಳದ ಪಯ್ಯನ್ನೂರಿನಲ್ಲಿ ಚಿನ್ನದ ವ್ಯಾಪಾರ ನಡೆಸುತ್ತಿದ್ದು, ಮುಂಬೈ ಬಳಿಯ ಸಾಂಗ್ಲಿಯಲ್ಲಿ ಪರಿಚಯಸ್ಥರ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ವಾಪಸಾಗುತ್ತಿದ್ದರು. ಘಟನೆ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದ್ದು, 180 ಗ್ರಾಮ್ ಚಿನ್ನ ಮತ್ತು ನಗದು ಸಹಿತ ಸುಮಾರು 20 ಲಕ್ಷ ರು. ಮೌಲ್ಯದ ಸೊತ್ತು ಹೊತ್ತೊಯ್ದಿದ್ದಾರೆ ಎಂದು ವಿಕಾಸ್ ದೂರು ನೀಡಿದ್ದಾರೆ.
ಆದರೆ ಕೇರಳದ ಚಿನ್ನದ ವ್ಯಾಪಾರಿಗಳು ಮುಂಬೈನಲ್ಲಿ ಗಟ್ಟಿಗಳ ರೂಪದಲ್ಲಿ ಚಿನ್ನ ಖರೀದಿಸಿ ಒಯ್ಯುವುದು ಸಾಮಾನ್ಯವಾಗಿದ್ದು ದೊಡ್ಡ ಮೊತ್ತದ ಚಿನ್ನ ಕಳವಾಗಿರುವ ಸಾಧ್ಯತೆ ಇದೆ. ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
A Kerala-based gold trader travelling from Mumbai with his family was robbed in a dramatic highway heist near Panambur in the early hours of Monday. A gang allegedly intercepted their car, briefly abducted his wife and son, and fled with gold and cash worth around ₹20 lakh.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm