ಬ್ರೇಕಿಂಗ್ ನ್ಯೂಸ್
29-06-26 06:45 pm HK News Staffer ಕ್ರೈಂ
ಮಂಗಳೂರು, ಜೂನ್ 29: ಸುರತ್ಕಲ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು ಆಸುಪಾಸಿನಲ್ಲಿ ಜೂನ್ 26 ಮತ್ತು 27ರಂದು ಮುಂಜಾನೆ ಎರಡು ಮನೆಗಳಲ್ಲಿ ನಡೆದ ಮಹಿಳೆಯರ ಸರ ಸುಲಿಗೆ ಪ್ರಕರಣದಲ್ಲಿ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಜೂನ್ 26ರಂದು ಮುಂಜಾನೆ 02 ಗಂಟೆ ವೇಳೆಗೆ ಸುರತ್ಕಲ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು ಅಜಾದ್ ನಗರದ 2ನೇ ಬ್ಲಾಕ್ ನಲ್ಲಿರುವ ಶ್ರೀಮತಿ ಜಾಹೀದ್ ಎಂಬವರು ತನ್ನ ಮನೆಯ ಬೆಡ್ ರೂಮ್ ನಲ್ಲಿ ಮಲಗಿದ್ದಾಗ, ಕಿಟಿಕಿ ಮೂಲಕ ಕೈ ಹಾಕಿದ ವ್ಯಕ್ತಿಯೊಬ್ಬ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಸೆಳೆದು ಸುಲಿಗೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ, ಕರಿಮಣಿ ಸರ ತುಂಡಾಗಿದ್ದು, ಸುಮಾರು 20,000/-ಮೌಲ್ಯದ ಕರಿಮಣಿ ಸರದ ತುಂಡನ್ನು ಆರೋಪಿ ಸೆಳೆದುಕೊಂಡು ಹೋಗಿದ್ದ. ಉಳಿದ ಕರಿಮಣಿ ಸರ ಮಹಿಳೆ ಬಳಿಯೇ ಉಳಿದಿದ್ದು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ರೀತಿ ಮರುದಿನ 27ರಂದು ಮುಂಜಾನೆ 05 ಗಂಟೆಯಿಂದ 05-15 ಗಂಟೆ ನಡುವೆ ಸುರತ್ಕಲ್ ಠಾಣೆ ವ್ಯಾಪ್ತಿಯ ಚೊಕ್ಕಬೆಟ್ಟು 8ನೇ ಬ್ಲಾಕ್ ನಲ್ಲಿ ಫಯಾಜ್ ಎಂಬವರು ಮಸೀದಿಗೆ ಪ್ರಾರ್ಥನೆಗೆಂದು ಹೋದಾಗ ತನ್ನ ಮನೆಯ ಬಾಗಿಲನ್ನು ಮುಚ್ಚಿ ಹೋಗಿದ್ದರು. ಅದೇ ವೇಳೆಗೆ ಕಳ್ಳನೊಬ್ಬ ಬಾಗಿಲನ್ನು ತೆರೆದು ಮನೆಯ ಒಳಗೆ ನುಗ್ಗಿದ್ದು ಬೆಡ್ ರೂಮ್ ನಲ್ಲಿ ಮಲಗಿದ್ದ ಶ್ರೀಮತಿ ಅಪ್ರೀನಾ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಕಿತ್ತುಕೊಳ್ಳಲು ಯತ್ನಿಸಿದಾಗ ಚಿನ್ನದ ಸರ ತುಂಡಾಗಿದ್ದು, ಸುಮಾರು 1,00,000/-ಮೌಲ್ಯದ ಚಿನ್ನದ ಸರವನ್ನು ಆರೋಪಿ ಸೆಳೆದುಕೊಂಡು ಹೋಗಿದ್ದ. ಚಿನ್ನದ ಸಣ್ಣ ತುಂಡು ಹಾಗೂ ಪೆಂಡೆಂಟ್ ಮಹಿಳೆ ಬಳಿ ಉಳಿದಿತ್ತು. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಎರಡೂ ಸುಲಿಗೆ ಪ್ರಕರಣಗಳನ್ನು ತನಿಖೆ ನಡೆಸಿದ ಸುರತ್ಕಲ್ ಪೊಲೀಸರು ಆರೋಪಿ ಕಾಟಿಪಳ್ಳ 2ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಅಬ್ದುಲ್ ಜಾಫರ್ (28) ನನ್ನು ಜೂನ್ 29ರಂದು ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿಯಲ್ಲಿ ಚಿನ್ನಾಭರಣಗಳನ್ನು ಮಾರಾಟ ಮಾಡಲು ಒಯ್ಯುತ್ತಿದ್ದಾಗ ದಸ್ತಗಿರಿ ಮಾಡಿದ್ದಾರೆ. ಆರೋಪಿತನಿಂದ ಎರಡೂ ಕಳವು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಚಿನ್ನಾಭರಣಗಳನ್ನು ಯಥಾಸ್ಥಿತಿಯಲ್ಲಿ ಸ್ವಾಧೀನಪಡಿಸಲಾಗಿದೆ.
ಆರೋಪಿ ಮೊಹಮ್ಮದ್ ಅಬ್ದುಲ್ ಜಾಫರ್ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೊ.ನಂ. 36/2025 ಕಲಂ: 326 (ಎಫ್), 324(5), 352, 351(3), 3(5) ಬಿ.ಎನ್.ಎಸ್ ಮತ್ತು ಉರ್ವಾ ಪೊಲೀಸ್ ಠಾಣೆ ಮೊ.ನಂ. 123/2018 ಕಲಂ: 341, 323, 504, 506 ಐಪಿಸಿ ಅಡಿ ಪ್ರಕರಣ ದಾಖಲಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm