ಬ್ರೇಕಿಂಗ್ ನ್ಯೂಸ್
02-07-26 08:40 pm HK News Staffer ಕ್ರೈಂ
ಉಡುಪಿ, ಜು. 2: ಶಂಕರಪುರ ಸಮೀಪದ ಕುರ್ಕಾಲು ಪೆಟ್ರೋಲ್ ಬಂಕ್‌ನಲ್ಲಿ ಏಕೋ ಸ್ಪೋರ್ಟ್ ಕಾರಿಗೆ 4,711ರೂ. ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಪರಾರಿಯಾಗಿದ್ದ ಮೂವರು ಯುವಕರನ್ನ ಶಿರ್ವ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಶಿರ್ವದ ಕೋಟೆಕಾರ ನಿವಾಸಿ ಮೊಹಮ್ಮದ್ ರಿಯಾಜ್ (26), ಶಿರ್ವದ ಭೂತಬೆಟ್ಟು ನಿವಾಸಿ ಮೊಹಮ್ಮದ್ ಅಫ್ರಾಜ್ (23) ಹಾಗೂ ಉಡುಪಿಯ ಅಂಬಾಗಿಲು ನಿವಾಸಿ ಆಶಿಲ್ (21) ಎಂದು ಗುರುತಿಸಲಾಗಿದೆ.

ಜೂನ್ 27ರಂದು ರಾತ್ರಿ ಸುಮಾರು 9.10ಕ್ಕೆ ಕಾಪು ತಾಲೂಕಿನ ಕುರ್ಕಾಲು ಗ್ರಾಮದ ಸುಭಾಷ್ ನಗರದ ಪೆಟ್ರೋಲ್ ಪಂಪ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿಯಲ್ಲಿ ದೃಶ್ಯ ಸೆರೆಯಾಗಿತ್ತು.
4,711 ರೂ.ಗೆ ಡೀಸೆಲ್ ತುಂಬಿದ ಬಳಿಕ ಸಿಬ್ಬಂದಿ ಕ್ಯೂಆರ್ ಕೋಡ್ ತೋರಿಸಿದ್ದಾನೆ. ಆರೋಪಿಗಳು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಂತೆ ನಾಟಕವಾಡಿ, ಬಿಲ್ ನೀಡುವಂತೆ ಕೇಳಿದ್ದಾರೆ. ಸಿಬ್ಬಂದಿ ಬಿಲ್ ಕೊಡುವಷ್ಟರಲ್ಲಿ ಹಣ ಪಾವತಿಸದೇ ಪರಾರಿಯಾಗಿದ್ರು.
ತಾಂತ್ರಿಕ ಮಾಹಿತಿ, ಕಾರ್ ನಂಬರ್ ಆಧರಿಸಿ ಕಾರ್ಕಳ ಡಿವೈಎಸ್‌ಪಿ ವಿಜಯ ಪ್ರಸಾದ್, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಮಾರ್ಗದರ್ಶನದಲ್ಲಿ, ಶಿರ್ವ ಪಿಎಸ್‌ಐ ಮಂಜುನಾಥ ಮರಬಾಡ, ಪಿಎಸ್‌ಐ ಲೋಹಿತ್ ಕುಮಾರ್ ಸಿ.ಎಸ್. ಹಾಗೂ ಸಿಬ್ಬಂದಿಗಳಾದ ಹರ್ಷ ಭಟ್, ಬಸವರಾಜ್ ಮತ್ತು ದಾರಿಯಪ್ಪ ತಂಡ ಬೆಂಗಳೂರಿನಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿದೆ.
ಪ್ರಕರಣಕ್ಕೆ ಬಳಸಲಾಗಿದ್ದ ಫೋರ್ಡ್ ಎಕೋಸ್ಪೋರ್ಟ್ ಕಾರನ್ನು ವಶಕ್ಕೆ ಪಡೆದಿದ್ದು, ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm