ಬ್ರೇಕಿಂಗ್ ನ್ಯೂಸ್
02-07-26 10:09 pm HK News Staffer ಕ್ರೈಂ
ಉಳ್ಳಾಲ, ಜು.02: ಮಂಗಳೂರಿಗೆ ಹೋಗಿ ಬರುತ್ತೇನೆಂದು ಹೇಳಿ ಹರೇಕಳದಿಂದ ನಾಪತ್ತೆಯಾಗಿದ್ದ ವಿವಾಹಿತ ವ್ಯಕ್ತಿಯೋರ್ವರ ಮೃತದೇಹ ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯಲ್ಲಿ ಗುರುವಾರ ಪತ್ತೆಯಾಗಿದೆ.
ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಕಿಸಾನ್ ನಗರದ ನಿವಾಸಿ ಮಹಮ್ಮದ್ ಅಶ್ರಫ್ (40) ಮೃತ ವ್ಯಕ್ತಿ. ಅಶ್ರಫ್ ಮಂಗಳವಾರ ಬೆಳಗ್ಗೆ ಮಂಗಳೂರಿಗೆ ಹೋಗಿ ಬರುತ್ತೇನೆಂದು ಹೇಳಿ ಮನೆಯಿಂದ ತೆರಳಿದ್ದರು. ಬಳಿಕ ಅಶ್ರಫ್ ತನ್ನ ಎರಡೂ ಮೊಬೈಲ್ ಗಳನ್ನ ಆಫ್ ಮಾಡಿಟ್ಟು ಸಂಪರ್ಕಕ್ಕೆ ಸಿಗದೆ ಇದ್ದು ಮನೆ ಮಂದಿ ಗಾಬರಿಗೊಂಡಿದ್ದರು. ಅಶ್ರಫ್ ಅವರ ತಮ್ಮ ಮಹಮ್ಮದ್ ಆಸೀಫ್ ಕೊಣಾಜೆ ಠಾಣೆಯಲ್ಲಿ ಅಶ್ರಫ್ ನಾಪತ್ತೆಯಾಗಿರುವ ಕುರಿತು ದೂರು ದಾಖಲಿಸಿದ್ದರು.
ಗುರುವಾರ ಬೆಳಗ್ಗೆ ಮಂಗಳೂರಿನ ತಣ್ಣೀರುಬಾವಿ ಸಮುದ್ರ ಕಿನಾರೆಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಮಹಮ್ಮದ್ ಅಶ್ರಪ್ ಅವರ ಶವವೆಂದು ಗುರುತಿಸಿದ್ದಾರೆ.
ಮೇಸ್ತ್ರಿ ವೃತ್ತಿ ನಡೆಸುತ್ತಿದ್ದ ಅಶ್ರಫ್ ಅವರಿಗೆ ಮದುವೆಯಾಗಿ ಅನೇಕ ವರ್ಷಗಳಾದರೂ ಮಕ್ಕಳಿರಲಿಲ್ಲವಂತೆ. ಅವರು ತಾಯಿ, ಪತ್ನಿ, ಇಬ್ಬರು ಸಹೋದರರು ಹಾಗೂ ಸಹೋದರಿಯರನ್ನ ಅಗಲಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm