ಬ್ರೇಕಿಂಗ್ ನ್ಯೂಸ್
03-07-26 06:59 pm HK News Staffer ಕ್ರೈಂ
ಹಾಸನ, ಜುಲೈ 3: ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸರು ಹಾಸನದಾನದಲ್ಲಿ ಬಂದಿಸಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದ ಪೊಲೀಸರು, ತಮ್ಮನ ಮದುವೆಯ ಖುಷಿಯಲ್ಲಿದ್ದಾಗಲೇ ಕೆರೆಹಳ್ಳಿಯನ್ನ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.
ಮುಸ್ಲಿಂ ಧರ್ಮಗುರುಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಮಾಜಿಕ ಹೋರಾಟಗಾರ ಅಬ್ದುಲ್ ರಜಾಕ್ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ, ಹಾಸನದ ಕೆರೆಹಳ್ಳಿ ಗ್ರಾಮದಲ್ಲಿರುವ ಪುನೀತ್ ನಿವಾಸಕ್ಕೆ ತೆರಳಿ ಬಂಧಿಸಿದ್ದಾರೆ.
ಬಂಧನದ ವೇಳೆ ಸರ್ಕಾರದ ವಿರುದ್ಧ ಕಿಡಿ ;
ಬಂಧನದ ವೇಳೆ ಮಾತನಾಡಿದ ಪುನೀತ್ ಕೆರೆಹಳ್ಳಿ, ತಮ್ಮ ವಿರುದ್ಧ ರಾಜಕೀಯ ಪ್ರೇರಿತ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಪಿಸಿದರು. "ನನಗೆ ಜೀವ ಬೆದರಿಕೆ ಇದೆ. ಅಬ್ದುಲ್ ರಜಾಕ್ ವಿರುದ್ಧ ನಾನು ಮೊದಲೇ ದೂರು ನೀಡಿದ್ದೇನೆ. ಅವನನ್ನು ಬಂಧಿಸದೇ ನನ್ನನ್ನೇ ಬಂಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ," ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕರೆದೊಯ್ಯುತ್ತಿದ್ದ ವೇಳೆ ಅವರ ತಾಯಿ ಭಾವುಕರಾಗಿ ಕಣ್ಣೀರಿಟ್ಟ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದ್ದು, ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.
ಸದ್ಯ ಪ್ರಕರಣದ ತನಿಖೆಯನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಮುಂದುವರಿಸಿದ್ದು, ದೂರಿನಲ್ಲಿ ಉಲ್ಲೇಖಿಸಿರುವ ಆರೋಪಗಳ ಕುರಿತು ದಾಖಲೆಗಳು ಹಾಗೂ ಇತರೆ ಸಾಕ್ಷ್ಯಗಳ ಪರಿಶೀಲನೆ ನಡೆಯುತ್ತಿದೆ.




ಈ ಹಿಂದೆ ಜಾತಿ ನಿಂದನೆ ಮತ್ತು ಜೀವ ಬೆದರಿಕೆಗೆ ಸಂಬಂಧಿಸಿದಂತೆ ಇದೇ ಪುನೀತ್ ಹಾಗೂ ಅವರ ಬಂಬಲಿಗ ಗೋಪಿ ವಿರುದ್ಧ ಕೋಲಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿದಂತೆ ಹೈಕೋರ್ಟ್ ತಡೆ ನೀಡಿ ಆದೇಶಿಸಿತ್ತು. ಇದಕ್ಕೂ ಮುನ್ನ ವಿಚಾರಣಾಧೀನ ನ್ಯಾಯಾಲಯದ ವಿಚಾರಣೆ ರದ್ದುಗೊಳಿಸುವಂತೆ ಕೋರಿ ಅವರು ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದರು.
ಎಸ್‌ಎಸ್‌ಆರ್ ಬಡಾವಣೆಯಲ್ಲಿ ಮಾಂಸದಂಗಡಿ ಮಾಲೀಕನಿಗೆ ಪುನೀತ್ ಮತ್ತವರ ಗುಂಪು ಬೈದು ತೊಂದರೆ ಕೊಡುತ್ತಿತ್ತು. ಅದನ್ನು ನಾನು ಪ್ರಶ್ನಿಸಿದರೆ ನೀನ್ಯಾರು? ಎಂದು ನನ್ನನ್ನು ದಬಾಯಿಸಿದ್ದರು. ಆಗ ನಾನು ದಲಿತ ಸಂಘಟನೆಯ ಮುಖಂಡ ಎಂದು ಹೇಳಿದ್ದಾಗಿ ದೂರಿನಲ್ಲಿ ಎಂ.ವಿ.ನಾಗರಾಜ್ ಅವರು ತಿಳಿಸಿದ್ದಾರೆ. ಅಲ್ಲದೇ ನನ್ನ ಜಾತಿ ಹೆಸರು ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದರು. ನಂತರ ವಾದ ವಿವಾದ ಆಲಿಸಿದ ಕೋರ್ಟ್ ಈ ಪ್ರಕರಣದಲ್ಲಿ ಎಫ್‌ಐಆರ್ ಆಗದಂತೆ ತಡೆ ನೀಡಿತ್ತು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm