ಬ್ರೇಕಿಂಗ್ ನ್ಯೂಸ್
04-07-26 06:54 pm HK News Staffer ಕ್ರೈಂ
ಉಡುಪಿ, ಜುಲೈ 4: ಅಶ್ಲೀಲ ವಿಡಿಯೋಗಳಿವೆ ಎಂದು ಹೇಳಿ ಉದ್ಯಮಿಯೊಬ್ಬರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದಲ್ಲಿ ಪಡುಬಿದ್ರೆಯ ಮಹಿಳೆಯೊಬ್ಬಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಪಡುಬಿದ್ರೆ ಕಂಚಿನಡ್ಕ ಮಸೀದಿ ಸಮೀಪದ ನಿವಾಸಿ ಝೀನತ್ ಇಬ್ರಾಹೀಂ ಬಂಧಿತ ಆರೋಪಿ. ಉಡುಪಿ ಮೂಲದ ರಿಯಲ್ ಎಸ್ಟೆಟ್ ವ್ಯವಹಾರ ಮಾಡಿಕೊಂಡಿದ್ದ ಉದ್ಯಮಿಗೆ ಝೀನತ್ ಪರಿಚಯವಾಗಿದ್ದು, ಬಳಿಕ ಅವರಿಬ್ಬರು ಸೇರಿ ಜಂಟಿಯಾಗಿ ರಿಯಲ್ ಎಸ್ಟೇಟ್ ಕಚೇರಿ ಪ್ರಾರಂಭಿಸಿದ್ದರು. ಆ ವ್ಯಕ್ತಿ ಝೀನತ್ ಮಾತುಗಳನ್ನು ನಂಬಿ ಹೂಡಿಕೆ ಮಾಡುವ ಉದ್ದೇಶದಿಂದ 70 ಲಕ್ಷ ರೂ. ಆಕೆಗೆ ನೀಡಿದ್ದರು. ಈ ಹಣವನ್ನು ಝೀನತ್ ಜಮೀನು ಖರೀದಿಗೆ ಬಳಸದೇ ತನ್ನ ಸ್ವಂತ ಉದ್ದೇಶಗಳಿಗಾಗಿ ಬಳಸಿಕೊಂಡು ಮೋಸ ಮಾಡಿದ್ದಳು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಉದ್ಯಮಿ ಬಳಿಕ ತನ್ನ ಕಚೇರಿಯನ್ನು ಮುಚ್ಚುವ ಸಂದರ್ಭದಲ್ಲಿ ಅಲ್ಲಿದ್ದ ಕೆಲವು ರಹಸ್ಯ ಕಡತಗಳು ಮತ್ತು ಪೆನ್ ಡ್ರೈವ್ ಸಿಕ್ಕಿದ್ದು, ಅದರಲ್ಲಿ ಹಲವಾರು ಪ್ರಭಾವಿ ಗಣ್ಯ ವ್ಯಕ್ತಿಗಳ ಖಾಸಗಿ ಮತ್ತು ಅಶ್ಲೀಲ ಛಾಯಾಚಿತ್ರಗಳು ಹಾಗೂ ವಿಡಿಯೋಗಳು ಇರುವುದು ಕಂಡುಬಂದಿತ್ತು.
ಉದ್ಯಮಿ 70 ಲಕ್ಷ ರೂ. ವಾಪಸ್ ನೀಡುವಂತೆ ಝೀನತ್ ಳಲ್ಲಿ ಕೇಳಿದಾಗ, ಆಕೆ ಉದ್ಯಮಿಯ ಹೊಸ ಕಚೇರಿಗೆ ಬಂದು, ಮತ್ತಷ್ಟು ಹಣಕ್ಕೆ ಬೇಡಿಕೆ ಇಡಲು ಪ್ರಾರಂಭಿಸಿದಳು. ಹಣ ನೀಡದಿದ್ದರೆ ಉದ್ಯಮಿ ವಿರುದ್ದ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಳು. ಝೀನತ್ ತನ್ನ ಬಳಿ ಉದ್ಯಮಿಯ ಅಶ್ಲೀಲ ವಿಡಿಯೋಗಳಿವೆ ಎಂದು ಹೇಳಿ ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡತೊಡಗಿದ್ದಲ್ಲದೆ, ಅವರ ಪತ್ನಿ ಮಕ್ಕಳನ್ನು ಅಪಹರಿಸಿ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾಳೆ ಎಂದು ದೂರಲಾಗಿದೆ.
ಸಬೀನಾ ಇಲ್ಯಾಸ್ ಹಾಗೂ ಇತರರು ಝೀನತ್ ಳೊಂದಿಗೆ ಸೇರಿ ಬ್ಲ್ಯಾಕ್ ಮೇಲ್ ಮಾಡಿ ಅಕ್ರಮವಾಗಿ ಹಣ ವಸೂಲಿ ಮಾಡಿ ವಂಚನೆಯ ಜಾಲವನ್ನು ನಡೆಸುತ್ತಿರುವುದಾಗಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿ ದೂರು ನೀಡಿದ್ದಾರೆ.
ನಗರ ಠಾಣೆಯ ಎಸ್ಐ ಭರತೇಶ್ ಕಂಕಣವಾಡಿ ನೇತೃತ್ವದ ತಂಡವು ಝೀನತ್ ಳನ್ನು ಪಡುಬಿದ್ರೆಯ ಕಂಚಿನಡ್ಕ ಎಂಬಲ್ಲಿ ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ಐದು ದಿನಗಳ ಕಸ್ಟಡಿಗೆ ಪಡೆಯಲಾಗಿದೆ. ಇದೇ ರೀತಿ ಆರೋಪಿ ಝೀನತ್ ಳಿಂದ ಯಾರಿಗಾದರೂ ಮೋಸ ಮತ್ತು ವಂಚನೆ ಆಗಿದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm