ಬ್ರೇಕಿಂಗ್ ನ್ಯೂಸ್
07-07-26 08:07 pm HK News Staffer ಕ್ರೈಂ
ಬೆಂಗಳೂರು, ಜು.07: ಅಡಿಗೆ ವಿಚಾರದಲ್ಲಿ ಪತ್ನಿಯೊಂದಿಗೆ ಜಗವಡುವ ವೇಳೆ ಅಡ್ಡ ಬಂದ 11 ತಿಂಗಳ ಕಂದಮ್ಮಳನ್ನು ಸ್ವಂತ ಅಪ್ಪ ತನ್ನ ಕಾಲಿನಿಂದ ಒದ್ದು ಕೊಲೆಗೈದ ಘಟನೆ ಬೆಂಗಳೂರು ಹೊರವಲಯದ ಆವಲಹಳ್ಳಿಯ ಕಿತಗಾನೂರು ಗ್ರಾಮದಲ್ಲಿ ನಡೆದಿದೆ. ಹಾಸಿಗೆಯಿಂದ ಬಿದ್ದು ಸಂಭವಿಸಿದ ಸಾವು ಎಂದು ಬಿಂಬಿಸಲು ಯತ್ನಿಸಿದ ಹೆತ್ತವರ ಕ್ರೌರ್ಯ ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದೆ.
11 ತಿಂಗಳ ಮಗುವನ್ನು ಕೊಂದು, ಅದನ್ನು ಅಪಘಾತ ಎಂದು ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಮಗುವಿನ ತಂದೆ-ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಗುವಿನ ತಂದೆ ಶೇಖಪ್ಪ ಆರಂಭದಲ್ಲಿ, ಹಾಲುಣಿಸುತ್ತಿದ್ದ ವೇಳೆ ಪತ್ನಿ ವಿಜಯಲಕ್ಷ್ಮಿ ನಿದ್ರೆಗೆ ಜಾರಿದ್ದು, ಮಗು ಹಾಸಿಗೆಯಿಂದ ಕೆಳಗೆ ಬಿದ್ದು ಮೃತಪಟ್ಟಿದೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡ ತನಿಖೆ ಆರಂಭಿಸಿದ್ದರು.
ಆದರೆ, ಮರಣೋತ್ತರ ಪರೀಕ್ಷೆ ವರದಿ ಹಾಗೂ ತನಿಖೆಯಲ್ಲಿ ಅವರ ಹೇಳಿಕೆಗಳಿಗೆ ವಿರುದ್ಧವಾದ ಸಾಕ್ಷ್ಯಗಳು ದೊರೆತಿದ್ದು, ಬಳಿಕ ಇಬ್ಬರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರ.
ಜೂನ್ 9ರಂದು ಈ ಘಟನೆ ನಡೆದಿತ್ತು. ಮಗು ಅಸ್ವಸ್ಥಗೊಂಡ ಬಳಿಕ ಪೂರ್ವ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದರು.
ಜೂನ್ 22ರಂದು ಬಂದ ಮರಣೋತ್ತರ ಪರೀಕ್ಷೆ ವರದಿಯಲ್ಲಿ, ಮಗುವಿನ ದೇಹದೊಳಗಿನ ತೀವ್ರ ರಕ್ತಸ್ರಾವ ಮತ್ತು ಉಸಿರಾಟದ ತೊಂದರೆಯಿಂದ ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ. ಮಗುವಿನ ಮುಖ, ಎದೆ, ಕಾಲುಗಳು ಹಾಗೂ ಖಾಸಗಿ ಅಂಗಗಳ ಮೇಲೆ ಹಲವು ಗಾಯಗಳಿರುವುದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ರಾಯಚೂರು ಮೂಲದ ಶೇಖಪ್ಪ ಮತ್ತು ವಿಜಯಲಕ್ಷ್ಮಿ ದಂಪತಿ ಕಿತ್ತಗನೂರಿನ ಖಾಲಿ ಪ್ರದೇಶದಲ್ಲಿ ಶೆಡ್ ನಿರ್ಮಿಸಿಕೊಂಡು ವಾಸವಾಗಿದ್ದರು. ದಂಪತಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಇವರೊಂದಿಗೆ 11 ತಿಂಗಳ ಹೆಣ್ಣು ಮಗು ಕೂಡ ಇತ್ತು. ಜೂನ್ 9ರಂದು ರಾತ್ರಿ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಆಸ್ಪತ್ರೆಯಿಂದ ಮಗುವಿನ ಸಾವಿಗೆ ಸಂಬಂಧಿಸಿದಂತೆ ಮೆಡಿಕೋ ಲೀಗಲ್ ಕೇಸ್ (ಎಂಎಲ್‌ಸಿ) ವರದಿ ಬಂದಿತ್ತು. ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದಾಗ, ಮಗುವಿನ ಕಾಲು ಸೇರಿದಂತೆ ದೇಹದ ಹಲವು ಭಾಗಗಳಲ್ಲಿ ಗಂಭೀರ ಗಾಯಗಳು ಕಂಡುಬಂದಿದ್ದವು. ಆರಂಭದಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು.
ಪ್ರಾಥಮಿಕ ವಿಚಾರಣೆ ವೇಳೆ ಶೇಖಪ್ಪ ದಂಪತಿ, ಮಗು ಮಂಚದಿಂದ ಕೆಳಗೆ ಬಿದ್ದು ಗಾಯಗೊಂಡು ಮೃತಪಟ್ಟಿದೆ ಎಂದು ಹೇಳಿಕೆ ನೀಡಿದ್ದರು. ಆದರೆ ಜೂನ್ 22ರಂದು ಬಂದ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಮಗುವಿನ ದೇಹದ ಒಳಭಾಗದಲ್ಲಿ ತೀವ್ರ ರಕ್ತಸ್ರಾವವಾಗಿದ್ದು, ಬೆನ್ನು ಮೂಳೆ ಮುರಿದಿರುವುದು ಬೆಳಕಿಗೆ ಬಂದಿದೆ.
ಇದರ ಜೊತೆಗೆ ಸ್ಥಳೀಯರು ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಹಾಗೂ ಮಗುವಿನ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ ಪೊಲೀಸರು, ಪ್ರಕರಣವನ್ನು ಕೊಲೆ ಪ್ರಕರಣವಾಗಿ ದಾಖಲಿಸಿಕೊಂಡು ಶೇಖಪ್ಪನನ್ನು ಬಂಧಿಸಿದ್ದರು.
ವಿಚಾರಣೆ ವೇಳೆ ಶೇಖಪ್ಪ ಮಗುವಿನ ಸಾವಿಗೆ ತಾನೇ ಕಾರಣ ಎಂದು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿ ಅಡುಗೆ ಮಾಡಿಲ್ಲ ಎಂಬ ವಿಚಾರಕ್ಕೆ ಜಗಳ ನಡೆದಿದ್ದು, ಈ ವೇಳೆ ಅಡ್ಡ ಬಂದ ಮಗುವಿನ ಮೇಲೆ ಕೋಪದಲ್ಲಿ ಕಾಲಿಟ್ಟಿದ್ದಾಗಿ ಬಳಿಕ ಮಗುವನ್ನು ಹೊರಗೆ ಎಸೆದಿದ್ದಾಗಿ ಆರೋಪಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಮಗು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿತ್ತು ಎನ್ನಲಾಗಿದೆ.
ಈ ಪ್ರಕರಣದಲ್ಲಿ ಮಗುವಿನ ತಾಯಿ ವಿಜಯಲಕ್ಷ್ಮಿಯನ್ನು ಕೂಡ ಎರಡನೇ ಆರೋಪಿಯನ್ನಾಗಿ ಪರಿಗಣಿಸಲಾಗಿತ್ತು. ಆದರೆ ಇದೀಗ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆ ಮಾಡಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪ;
ವಿಚಾರಣೆ ವೇಳೆ ಪೊಲೀಸರು ತನಗೆ, ತನ್ನ ಪತಿ ಹಾಗೂ ಮೈದುನನಿಗೆ ಹಲ್ಲೆ ಮಾಡಿದ್ದಾರೆ. ಮಗುವಿನ ಕೊಲೆ ಆರೋಪವನ್ನು ಒಪ್ಪಿಕೊಳ್ಳುವಂತೆ ಒತ್ತಡ ಹೇರಿದ್ದಾರೆ. ಪತಿ ಜೈಲಿನಿಂದ ಬಿಡುಗಡೆಯಾದ ಬಳಿಕ ಹಣ ನೀಡುವುದಾಗಿ ಹೇಳಿ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ವಿಜಯಲಕ್ಷ್ಮಿ ಆರೋಪಿಸಿದ್ದಾರೆ.
ಆದರೆ ಈ ಆರೋಪಗಳನ್ನು ಪೊಲೀಸರು ತಳ್ಳಿಹಾಕಿದ್ದಾರೆ. ಮರಣೋತ್ತರ ಪರೀಕ್ಷಾ ವರದಿ ಹಾಗೂ ಲಭ್ಯವಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆಯೇ ಶೇಖಪ್ಪನನ್ನು ಬಂಧಿಸಲಾಗಿದೆ. ಯಾವುದೇ ರೀತಿಯ ಚಿತ್ರಹಿಂಸೆ ನೀಡಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ಮಾತನಾಡಿ, “ಮಗುವಿನ ಸಾವಿಗೆ ಸಂಬಂಧಿಸಿದಂತೆ ವೈಜ್ಞಾನಿಕ ಸಾಕ್ಷ್ಯಗಳು ಹಾಗೂ ಮರಣೋತ್ತರ ಪರೀಕ್ಷಾ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ. ವಿಜಯಲಕ್ಷ್ಮಿ ಮಾಡಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ಪ್ರಕರಣದ ತನಿಖೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.
ಸದ್ಯ 11 ತಿಂಗಳ ಕಂದಮ್ಮನ ಸಾವಿನ ಪ್ರಕರಣದಲ್ಲಿ ತಾಯಿ ಮಾಡಿರುವ ಆರೋಪ ಹಾಗೂ ಪೊಲೀಸರ ಪ್ರತಿಕ್ರಿಯೆಯಿಂದ ಪ್ರಕರಣ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದ್ದು, ತನಿಖೆಯ ಮುಂದಿನ ಹಂತದಲ್ಲಿ ಮತ್ತಷ್ಟು ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆಯಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm