ಬ್ರೇಕಿಂಗ್ ನ್ಯೂಸ್
09-07-26 05:34 pm HK News Staffer ಕ್ರೈಂ
ಮಂಗಳೂರು, ಜುಲೈ 9: ಬೆಂಗಳೂರಿನ ಹೊಸಕೋಟೆಯಲ್ಲಿರುವ ಬಹುರಾಷ್ಟ್ರೀಯ ಉತ್ಪಾದನಾ ಸಂಸ್ಥೆಯೊಂದರಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಮಂಗಳೂರಿನ 28 ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವೀಧರ ಯುವಕನಿಗೆ ವಂಚಕರು ಬರೋಬ್ಬರಿ ₹2.90 ಲಕ್ಷ ರೂಪಾಯಿ ಪಡೆದು ವಂಚಿಸಿದ ಘಟನೆ ನಡೆದಿದೆ.
ಕೇವಲ ಒಂದು ತಿಂಗಳ ಅವಧಿಯಲ್ಲಿ ಸಂತ್ರಸ್ತನನ್ನು ಹಂತ ಹಂತವಾಗಿ ನಂಬಿಸಿ, ಬಲೆಯಲ್ಲಿ ಸಿಲುಕಿಸಿ ಹಣ ಪೀಕಿಸಿಕೊಂಡಿದ್ದಾರೆ. ಕಳೆದ ಮೇ 27ರಂದು 'ಪ್ರವೀಣ್' ಎಂಬ ಹೆಸರಿನಲ್ಲಿ ಕರೆ ಮಾಡಿದ್ದ ವ್ಯಕ್ತಿ ತಾನು ಜಾಬ್ ಏಜೆನ್ಸಿಯ ಪ್ರತಿನಿಧಿ ಎಂದು ಹೇಳಿಕೊಂಡಿದ್ದು, ಇಂಟರ್ವ್ಯೂ ಫೀಸ್ ಎಂದು ₹2,000 ಪಾವತಿಸಲು ತಿಳಿಸಿದ್ದಾನೆ. ಆನಂತರ, ಮೇ 29 ಮತ್ತು ಜೂನ್ 1 ರಂದು ಕರೆ ಮಾಡಿ ನಂಬಿಕೆ ಹುಟ್ಟಿಸಿದ್ದು ಸಂತ್ರಸ್ತನಿಗೆ ವಿಡಿಯೋ ಇಂಟರ್ವ್ಯೂ ಲಿಂಕ್ ಕಳುಹಿಸಿ, ನೈಜ ಎನ್ನುವಂತೆ ಸಂದರ್ಶನ ನಡೆಸಿದ್ದಾರೆ. ಜೂನ್ 1 ರಂದು ನೀವು ಕೆಲಸಕ್ಕೆ ಆಯ್ಕೆಯಾಗಿದ್ದೀರಿ ಎಂದು ಹೇಳಿ ನಂಬಿಸಿದ್ದಾರೆ.
ಆಬಳಿಕ ಕೆಲಸ ಸಿಕ್ಕ ಖುಷಿಯಲ್ಲಿದ್ದ ಯುವಕನಿಂದ ಪ್ರೊಸೆಸಿಂಗ್ ಫೀಸ್ ಹೆಸರಲ್ಲಿ ₹20,000, ಗೇಟ್ ಪಾಸ್ ಶುಲ್ಕದ ಹೆಸರಲ್ಲಿ ₹27,600, ಮತ್ತು ವೈದ್ಯಕೀಯ ತಪಾಸಣೆ ಹೆಸರಿನಲ್ಲಿ ₹40,000 ದೋಚಿದ್ದಾರೆ. ಇದಾದ ಮೇಲೂ ಬೇರೆ ಬೇರೆ ಕಾರಣ ನೀಡಿ ಹಣ ಪೀಕಿಸುತ್ತಲೇ ಇದ್ದರು. ಇವರು ಪದೇ ಪದೇ ಹಣ ಕೇಳುತ್ತಿದ್ದರಿಂದ ಜೂನ್ 27ರಂದು ಅನುಮಾನಗೊಂಡ ಯುವಕ, ನಿಮ್ಮ ಒಟ್ಟು ಪ್ರಕ್ರಿಯೆಯನ್ನು ರದ್ದುಗೊಳಿಸಲು ಕೇಳಿಕೊಂಡಿದ್ದಾನೆ. ಅಷ್ಟರಲ್ಲಿ ವಂಚಕರು ಮತ್ತೊಂದು ಪ್ಲಾನ್ ಮಾಡಿದ್ದಾರೆ. ಕಟ್ಟಿರುವ ಎಲ್ಲಾ ಹಣ ರಿಫಂಡ್ ಆಗಬೇಕಾದರೆ ₹15,579 ಕ್ಯಾನ್ಸಲೇಶನ್ ಫೀಸ್ ಕಟ್ಟಬೇಕು ಎಂದು ಹೇಳಿ ಆ ಹಣವನ್ನೂ ಪಡೆದು ಸಂಪರ್ಕ ಕಡಿತಗೊಳಿಸಿದ್ದಾರೆ.
ತಾನು ವಂಚನೆಗೆ ಒಳಗಾಗಿರುವುದನ್ನು ಅರಿತ ಇಂಜಿನಿಯರ್ ತಕ್ಷಣ ರಾಷ್ಟ್ರೀಯ ಸೈಬರ್ ಕ್ರೈಂ ಹೆಲ್ಪ್ ಲೈನ್‌ಗೆ ದೂರು ನೀಡಿದ್ದಾರೆ. ಬಳಿಕ ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm