ಬ್ರೇಕಿಂಗ್ ನ್ಯೂಸ್
09-07-26 09:11 pm HK News Staffer ಕ್ರೈಂ
ಬೆಂಗಳೂರು, ಜುಲೈ 09: ಶಾಲೆಯಲ್ಲಿ ನಡೆದ ಘಟನೆಯಿಂದ ನೊಂದ ಅಪ್ರಾಪ್ತ ಬಾಲಕಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಆನೇಕಲ್ ತಾಲೂಕಿನ ಮರಸೂರು ಗ್ರಾಮದಲ್ಲಿ ನಡೆದಿದೆ.
8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮರಸೂರು ಗ್ರಾಮದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬುಧವಾರ ಶಾಲೆಗೆ ಗೈರಾಗಿದ್ದ ವಿದ್ಯಾರ್ಥಿನಿ, ತಡರಾತ್ರಿ ಮನೆಯಲ್ಲಿ ಆತ್ಮಹತ್ಯೆಗೂ ಮುನ್ನ ಎರಡು ಡೆತ್ ನೋಟ್ ಬರೆದಿಟ್ಟಿದ್ದಾಳೆ.
ಮರಸೂರು ಸರ್ಕಾರಿ ಪ್ರೌಢಶಾಲಾ ಶಿಕ್ಷಕಿಯೊಬ್ಬರಿಗೆ ಅಡ್ಡ ಹೆಸರು ಇಟ್ಟ ವಿಚಾರವಾಗಿ ವಿದ್ಯಾರ್ಥಿನಿಗೆ ಮಂಗಳವಾರ ಶಿಕ್ಷಕಿ ಬುದ್ಧಿ ಹೇಳಿದ್ದರಂತೆ. ಇದರಿಂದ ನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು ಅದರಲ್ಲಿ, ‘ಶಾಲೆಯಲ್ಲಿ ನಡೆದ ಘಟನೆ ನನಗೆ ತುಂಬಾ ನೋವು ತಂದಿದೆ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಈ ಅವಮಾನ ಸಹಿಸಿಕೊಂಡು ಬದುಕಲು ಆಗುತ್ತಿಲ್ಲ. ಮನಸ್ಸಿಗೆ ತುಂಬಾ ನೋವಾಗಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ’ ಎಂದು ವಿದ್ಯಾರ್ಥಿನಿ ಬರೆದಿದ್ದಾಳೆ.
‘ಅಮ್ಮ, ಅಕ್ಕ, ತಂಗಿ, ತಮ್ಮ ಯಾರದ್ದೂ ತಪ್ಪಿಲ್ಲ. ನನ್ನ ಅಮ್ಮನನ್ನು ಯಾರು ಕೂಡ ಬೈಯ್ಯಬೇಡಿ. ಎಲ್ಲರೂ ನನ್ನನ್ನು ಕ್ಷಮಿಸಿ. ನನಗೆ ಈ ಭೂಮಿ ಮೇಲೆ ಬದುಕುವ ಅರ್ಹತೆ ಇಲ್ಲ’ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾಳೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸೂರ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡೆತ್‌ನೋಟ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಿದ್ಯಾರ್ಥಿನಿಯ ಸಾವಿನ ಕುರಿತು ತನಿಖೆ ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಶಾಲೆಗೆ ಪೋಷಕರು ಆಗಮಿಸಿ, ಆಕ್ರೋಶ ಹೊರಹಾಕಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm