ಬ್ರೇಕಿಂಗ್ ನ್ಯೂಸ್
11-07-26 08:40 pm HK News Staffer ಕ್ರೈಂ
ಬೆಂಗಳೂರು, ಜುಲೈ 11: ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ತ್ರಿವಳಿ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಟಿಗೇಪಾಳ್ಯದಲ್ಲಿ ವ್ಯಕ್ತಿಯೊಬ್ಬ ತನ್ನ ತಾಯಿ, ಅಜ್ಜಿ ಹಾಗೂ ಮಾವನನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಮೃತ ಆರೋಪಿಯನ್ನು ಪ್ರಶಾಂತ್ (34) ಎಂದು ಗುರುತಿಸಲಾಗಿದ್ದು, ಆತ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಮೃತಪಟ್ಟವರಲ್ಲಿ ತಾಯಿ ಮಂಗಳಮ್ಮ (55), ಅಜ್ಜಿ ನಂಜಮ್ಮ (65) ಹಾಗೂ ಮಾವ ಸತೀಶ್ (50) ಸೇರಿದ್ದಾರೆ. ಮಂಗಳಮ್ಮ ಗಾರ್ಮೆಂಟ್ಸ್ ಉದ್ಯೋಗಿಯಾಗಿದ್ದರೆ, ನಂಜಮ್ಮ ಪೌರಕಾರ್ಮಿಕರಾಗಿದ್ದರು. ಸತೀಶ್ ಪ್ಲಂಬರ್ ಆಗಿ ಕೆಲಸ ಮಾಡುತ್ತಿದ್ದರು.
ಮನೆಯಲ್ಲೇ ನಡೆದ ರಕ್ತರಂಜಿತ ಘಟನೆ
ಕೊಟ್ಟಿಗೇಪಾಳ್ಯದ ಗಣೇಶ ದೇವಸ್ಥಾನದ ಸಮೀಪದ ಮನೆಯಲ್ಲಿ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಶಾಂತ್ ಮೊದಲು ಮನೆಯ ಮುಖ್ಯದ್ವಾರದ ಬಳಿ ತಾಯಿ ಮಂಗಳಮ್ಮ ಹಾಗೂ ಅಜ್ಜಿ ನಂಜಮ್ಮ ಅವರನ್ನು ಮಾರಕಾಸ್ತ್ರದಿಂದ ಹತ್ಯೆಗೈದಿದ್ದಾನೆ. ಬಳಿಕ ಮನೆಯ ಮತ್ತೊಂದು ಕೊಠಡಿಯಲ್ಲಿ ಇದ್ದ ಮಾವ ಸತೀಶ್ ಅವರ ಮೇಲೂ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.
ಹತ್ಯೆ ಬಳಿಕ ಪ್ರಶಾಂತ್ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯರು ಆತನನ್ನು ತಡೆದು ಮನೆಯೊಳಗಿನ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ ಎನ್ನಲಾಗಿದೆ. ನಂತರ ಆತ ಅಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೌಟುಂಬಿಕ ಕಲಹವೇ ಕಾರಣವೇ?
ಪ್ರಾಥಮಿಕ ತನಿಖೆಯಲ್ಲಿ ಕುಟುಂಬದೊಳಗಿನ ಮನಸ್ತಾಪವೇ ಘಟನೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಪ್ರಶಾಂತ್ ಹಾಗೂ ಕುಟುಂಬ ಸದಸ್ಯರ ನಡುವೆ ಕೆಲಕಾಲದಿಂದ ಭಿನ್ನಾಭಿಪ್ರಾಯಗಳಿದ್ದವು ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ, ನಿಖರ ಕಾರಣ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.
ತನಿಖೆ ಆರಂಭಿಸಿದ ಪೊಲೀಸರು
ಮಾಹಿತಿ ತಿಳಿಯುತ್ತಿದ್ದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸ್ಥಳದಲ್ಲಿನ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ. ಪ್ರಕರಣದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಈ ಘಟನೆ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿರುವ ದುರಂತವಾಗಿ ಪರಿಣಮಿಸಿದ್ದು, ಕೊಟ್ಟಿಗೇಪಾಳ್ಯ ಹಾಗೂ ಸುತ್ತಮುತ್ತಲಿನ ನಿವಾಸಿಗಳನ್ನು ಬೆಚ್ಚಿಬೀಳಿಸಿದೆ. ಪೊಲೀಸರು ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm