ಬ್ರೇಕಿಂಗ್ ನ್ಯೂಸ್
12-07-26 10:13 pm HK News Staffer ಕ್ರೈಂ
ಚಿಕ್ಕಬಳ್ಳಾಪುರ, ಜುಲೈ 12: ತಮ್ಮ ನೈಜ ಗುರುತನ್ನು ಮರೆಮಾಚಿ ಅಕ್ರಮವಾಗಿ ಪಡಿತರ ಚೀಟಿ ಮತ್ತು ಮತದಾರರ ಗುರುತಿನ ಚೀಟಿ ಪಡೆದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನೆಲೆಸಿದ್ದ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.
ಫರಾ ನಾಜ್ ಮತ್ತು ಆಕೆಯ ಮಗ ಮೊಹಮ್ಮದ್ ಫರ್ದೀನ್ ಎಂದು ಗುರುತಿಸಲಾದ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ, ವಿದೇಶಿಯರ ಕಾಯ್ದೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
'ಪಾಕಿಸ್ತಾನಿ ಪ್ರಜೆಗಳಾದ ಫರಾ ನಾಜ್ ಮತ್ತು ಅವರ ಮಗ ಮೊಹಮ್ಮದ್ ಫರ್ದೀನ್ ಅವರು ಪಡಿತರ ಚೀಟಿ ಮತ್ತು ಮತದಾರರ ಗುರುತಿನ ಚೀಟಿಯನ್ನು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ವಿಶ್ವಾಸಾರ್ಹ ಮೂಲಗಳಿಂದ ಲಭ್ಯವಾಗಿತ್ತು' ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ (ಯುಎಇ) ಕೆಲಸ ಮಾಡುತ್ತಿದ್ದ ಬಾಗೇಪಲ್ಲಿ ಮೂಲದ ಮೊಹಮ್ಮದ್ ಅಯೂಬ್ ಖಾನ್ ಅವರು, ಅಲ್ಲಿಯೇ ಪಾಕಿಸ್ತಾನದ ಪ್ರಜೆ ಫರಾ ನಾಜ್ ಅವರನ್ನು ವಿವಾಹವಾಗಿದ್ದರು. ದಂಪತಿಗೆ ನಾಲ್ವರು ಮಕ್ಕಳಿದ್ದು, ಅವರ ಪೈಕಿ ಮೊಹಮ್ಮದ್ ಫರ್ದೀನ್ ಪಾಕಿಸ್ತಾನದಲ್ಲಿ ಜನಿಸಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.
ಫರಾ ನಾಜ್ ಮತ್ತು ಮೊಹಮ್ಮದ್ ಫರ್ದೀನ್ ಪಾಕಿಸ್ತಾನಿ ಪ್ರಜೆಗಳಾಗಿದ್ದರೆ, ಮೊಹಮ್ಮದ್ ಅಯೂಬ್ ಖಾನ್ ಮತ್ತು ಆ ದಂಪತಿಯ ಇತರ ಮೂವರು ಮಕ್ಕಳು ಭಾರತೀಯ ಪ್ರಜೆಗಳಾಗಿದ್ದಾರೆ. ಕುಟುಂಬವು ಸದ್ಯ ಬಾಗೇಪಲ್ಲಿಯಲ್ಲಿ ವಾಸಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ದಾಖಲೆಗಳನ್ನು ಪರಿಶೀಲಿಸಿದ್ದು, 'ರಾಷ್ಟ್ರೀಯತೆಗೆ ಸಂಬಂಧಿಸಿದ ವಾಸ್ತವಿಕ ಸಂಗತಿಗಳನ್ನು ಮುಚ್ಚಿಡುವ ಮೂಲಕ ಪಡಿತರ ಚೀಟಿಯನ್ನು ಪಡೆಯಲಾಗಿದೆ' ಎಂದು ಅವರ ಚೀಟಿಯನ್ನು ರದ್ದುಪಡಿಸಿದ್ದಾರೆ. ಮತದಾರರ ಗುರುತಿನ ಚೀಟಿಯನ್ನು ಸಹ ಸಕ್ಷಮ ಪ್ರಾಧಿಕಾರ ರದ್ದುಗೊಳಿಸಿದೆ ಎಂದು ಎಸ್ಪಿ ಹೇಳಿದ್ದಾರೆ.
'ಬಾಗೇಪಲ್ಲಿಯ ತಹಸೀಲ್ದಾರ್ ನೀಡಿದ ದೂರಿನ ಆಧಾರದ ಮೇಲೆ, ಆರೋಪಿಗಳಾದ ಫರಾ ನಾಜ್ ಮತ್ತು ಮೊಹಮ್ಮದ್ ಫರ್ದೀನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ ಮತ್ತು ಮುಂದಿನ ತನಿಖೆ ನಡೆಯುತ್ತಿದೆ' ಎಂದು ಎಸ್ಪಿ ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm