ಬ್ರೇಕಿಂಗ್ ನ್ಯೂಸ್
14-07-26 09:13 pm HK News Staffer ಕ್ರೈಂ
ಕಾರ್ಕಳ, ಜುಲೈ 14: ಮೊಬೈಲ್ ಫೋನ್‌ಗೆ ಬಂದ ಟ್ರಾಫಿಕ್ ಉಲ್ಲಂಘನೆಯ ನಕಲಿ ನೋಟಿಸ್ ಹಾಗೂ ‘mParivahan.apk’ ಎಂಬ ಲಿಂಕ್ ಒಂದನ್ನು ಡೌನ್‌ಲೋಡ್ ಮಾಡಿದ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಸೈಬರ್ ಖದೀಮರು ಬರೋಬ್ಬರಿ ₹6,83,599 ರೂಪಾಯಿ ಹಣವನ್ನು ದೋಚಿರುವ ಆಘಾತಕಾರಿ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಜೆಕಾರು ನಿವಾಸಿ ರತ್ನಾಕರ ಅಮೀನ್ ಸೈಬರ್ ವಂಚನೆಗೆ ಒಳಗಾದ ದುರ್ದೈವಿ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಐಟಿ ಆಕ್ಟ್ ಹಾಗೂ ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರ ರತ್ನಾಕರ ಅಮೀನ್ ಅವರು ಜುಲೈ 5 ರಂದು ಮಧ್ಯಾಹ್ನ ತಮ್ಮ ಮನೆಯಲ್ಲಿದ್ದಾಗ, ಅವರ ವಾಟ್ಸಾಪ್‌ಗೆ ‘ಪರಿವಾಹನ್’ (Parivahan) ಹೆಸರಿನ ಖಾತೆಯಿಂದ ಸಂದೇಶವೊಂದು ಬಂದಿತ್ತು. ಅದರಲ್ಲಿ ನಿಮ್ಮ ವಾಹನವು ಸಂಚಾರ ನಿಯಮ ಉಲ್ಲಂಘಿಸಿದೆ ಎಂದು ತಿಳಿಸಿ, ಅದಕ್ಕೆ ಸಂಬಂಧಿಸಿದ ದಂಡದ ನೋಟಿಸ್ ಇಲ್ಲಿದೆ ಎಂದು ನಂಬಿಸಿ ‘mParivahan.apk’ ಎಂಬ ಆಂಡ್ರಾಯ್ಡ್ ಅಪ್ಲಿಕೇಶನ್ ಫೈಲ್ ಅನ್ನು ಕಳುಹಿಸಲಾಗಿತ್ತು. ಇದನ್ನು ನಿಜವೆಂದು ನಂಬಿದ ರತ್ನಾಕರ್ ಅವರ ಮಗ, ಮೊಬೈಲ್‌ನಲ್ಲಿ ಆ ಎಪಿಕೆ (APK) ಫೈಲ್ ಅನ್ನು ಡೌನ್‌ಲೋಡ್ ಮಾಡಿಕೊಂಡಿದ್ದ.
ಅದೇ ದಿನ ರಾತ್ರಿ 8 ಗಂಟೆಗೆ ರತ್ನಾಕರ ಅವರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ಹಿಂದಿ ಭಾಷೆಯಲ್ಲಿ ಮಾತನಾಡಿದ್ದಾನೆ. “ನಿಮ್ಮ ಬ್ಯಾಂಕ್ ಖಾತೆ ಹಾಗೂ ಅದರಲ್ಲಿರುವ ಹಣ ಸುರಕ್ಷಿತವಾಗಿರಬೇಕಾದರೆ ತಕ್ಷಣವೇ ನಿಮ್ಮ ಗೂಗಲ್ ಪಿನ್ (Google PIN) ಸಂಖ್ಯೆಯನ್ನು ಬದಲಾಯಿಸಿ. ಇಲ್ಲದಿದ್ದರೆ ನಿಮ್ಮ ಖಾತೆಯಲ್ಲಿರುವ ಹಣ ಕ್ಷಣಾರ್ಧದಲ್ಲಿ ಕಡಿತಗೊಳ್ಳುತ್ತದೆ (Debit)” ಎಂದು ಹೆದರಿಸಿದ್ದಾನೆ. ಗಾಬರಿಗೊಂಡ ರತ್ನಾಕರ ಅವರು ‘ಹೌದು’ ಎಂದು ಹೇಳಿ ಕರೆ ಕಡಿತಗೊಳಿಸಿದ್ದಾರೆ. ಆದರೆ ಅಷ್ಟರಲ್ಲೇ ಇವರ ಫೋನ್ ನಿಯಂತ್ರಣ ವಂಚಕರ ಕೈಸೇರಿತ್ತು.
ಇದರಿಂದ ಹೆದರಿದ ರತ್ನಾಕರ ಅವರು ಜುಲೈ 8 ರಂದು ಬ್ಯಾಂಕಿಗೆ ತೆರಳಿ ತಮ್ಮ ಖಾತೆಯನ್ನು ಸುರಕ್ಷತೆಯ ದೃಷ್ಟಿಯಿಂದ ಅನ್‌ಬ್ಲಾಕ್ ಮಾಡಿಸಿಕೊಂಡಿದ್ದರು. ಆದರೆ, ಜುಲೈ 12 ರಂದು ರಾತ್ರಿ 9 ಗಂಟೆಯಿಂದ ರತ್ನಾಕರ ಅವರ ಮೊಬೈಲ್‌ಗೆ ಬ್ಯಾಂಕ್ ಖಾತೆಯಿಂದ ಸರಣಿ ಹಣ ಕಡಿತದ ಸಂದೇಶಗಳು ಬರಲಾರಂಭಿಸಿವೆ. ವಾಟ್ಸಾಪ್ ಹಾಗೂ ಮೊಬೈಲ್ ಫೋನ್ ಅನ್ನು ಹ್ಯಾಕ್ ಮಾಡಿದ್ದ ಖದೀಮರು ಮೊದಲ ಹಂತದಲ್ಲಿ ₹6,01,901 ರೂಪಾಯಿ ಹಣವನ್ನು ಎಗರಿಸಿದ್ದರು. ತಕ್ಷಣವೇ ರತ್ನಾಕರ ಅವರು ಸೈಬರ್ ಸಹಾಯವಾಣಿ ‘1930’ ಗೆ ಕರೆ ಮಾಡಿ ದೂರು ನೀಡಿದರೂ, ಮರುದಿನ ಜುಲೈ 13 ರಂದು ಬ್ಯಾಂಕಿಗೆ ತೆರಳಿ ಖಾತೆ ಪರಿಶೀಲಿಸಿದಾಗ, ವಂಚಕರು ಒಟ್ಟು ₹6,83,599 ಹಣವನ್ನು ವಿವಿಧ ಅಪರಿಚಿತ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಸಿರುವುದು ಬೆಳಕಿಗೆ ಬಂದಿದೆ. ರತ್ನಾಕರ ಅಮೀನ್ ನೀಡಿದ ದೂರಿನ ಮೇರೆಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm