ಬ್ರೇಕಿಂಗ್ ನ್ಯೂಸ್
15-07-26 01:17 pm HK News Staffer ಕ್ರೈಂ
ಮಂಗಳೂರು,ಜು. 15: ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮುಕ್ಕ ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ, ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ (21) ಮೃತಪಟ್ಟ ವಿದ್ಯಾರ್ಥಿನಿ.
ಸುರತ್ಕಲ್ನ ಫ್ಲ್ಯಾಟ್ನಲ್ಲಿ ವಾಸವಿದ್ದು ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಮಹಾಲಕ್ಷ್ಮೀ, ತಾವು ವಾಸವಿದ್ದ ಕಟ್ಟಡದ ಐದನೇ ಮಹಡಿಗೆ ತೆರಳಿ ಅಲ್ಲಿಂದ ಜಿಗಿದಿದ್ದಾಳೆ. ತಕ್ಷಣ ಆಕೆಯನ್ನ ರಕ್ಷಿಸಲು ಪ್ರಯತ್ನಿಸಿದರೂ, ಗಂಭೀರ ಗಾಯಗಳಿಂದ ಮೃತಪಟ್ಟಿದ್ದಾಳೆ.
ಮಾಹಿತಿಯ ಪ್ರಕಾರ, ಮಹಾಲಕ್ಷ್ಮೀ ಈ ಹಿಂದೆಯೂ ಒಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರೆಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಆದರೆ, ಈ ಬಾರಿ ಆಕೆ ಇಂತಹ ಕಠಿಣ ನಿರ್ಧಾರ ಕೈಗೊಂಡಿರುವುದಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ವಿದ್ಯಾರ್ಥಿನಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಈ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಘಟನೆಯ ವೇಳೆ ಹುಬ್ಬಳ್ಳಿಯಿಂದ ಬಂದಿದ್ದ ಮಹಾಲಕ್ಷ್ಮೀ ಅವರ ಪೋಷಕರು ಕೂಡ ಫ್ಲ್ಯಾಟ್ನಲ್ಲೇ ಇದ್ದರು. ಅವರು ಮನೆಯಲ್ಲಿದ್ದಾಗಲೇ ಈ ದುರ್ಘಟನೆ ಸಂಭವಿಸಿರುವುದು ಕುಟುಂಬವನ್ನು ಆಘಾತಕ್ಕೀಡು ಮಾಡಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ವಿದ್ಯಾರ್ಥಿನಿ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ದೃಢಪಡಿಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.
ವೈದ್ಯಕೀಯ ಶಿಕ್ಷಣದ ಒತ್ತಡ, ಮಾನಸಿಕ ಆರೋಗ್ಯ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಶವಪರೀಕ್ಷೆ ವರದಿ ಹಾಗೂ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm