ಬ್ರೇಕಿಂಗ್ ನ್ಯೂಸ್
17-07-26 12:58 pm HK News Staffer ಕ್ರೈಂ
ಮಂಗಳೂರು, ಜುಲೈ 17: ಬಿಸಿ ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿ ಚೇತನ್ ಗೌಡನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಹೊರ ವಲಯದ ಪಚ್ಚನಾಡಿಯಲ್ಲಿ ಇಂದು ಬೆಳಗ್ಗೆ ಇಲಿ ಪಾಷಾಣ ಸೇವಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ನಿನ್ನೆ ರಾತ್ರಿ ಯುವತಿ ತಂದೆ ಮತ್ತು ತನ್ನ ಹೆತ್ತವರಿಗೆ ಕರೆ ಮಾಡಿದ್ದ ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ತಾನು ಕೂಡ ಸಾಯೋದಾಗಿ ಹೇಳಿ ಬಳಿಕ ತನ್ನ ಫೋನ್ ಸ್ವಿಚ್ ಆಫ್ ಮಾಡಿದ್ದ. ಆತನ ಪತ್ತೆಗಾಗಿ ಬಂಟ್ವಾಳ ಪೊಲೀಸರು ಬೆನ್ನು ಬಿದ್ದಿದ್ದರು. ರಾತ್ರಿಯೇ ತುಂಬೆ ಟೋಲ್ ಗೇಟ್ ನಲ್ಲಿ ಆತನಿದ್ದ ಕಾರು ಪಾಸ್ ಆಗಿರುವುದನ್ನು ಪತ್ತೆ ಮಾಡಿದ್ದರು. ಇದರಂತೆ, ಮಂಗಳೂರಿನಲ್ಲಿ ಆರೋಪಿ ಅಡಗಿಕೊಂಡಿರುವ ಮಾಹಿತಿ ಇತ್ತು.
ಇಂದು ಬೆಳಗ್ಗೆ ಪಚ್ಚನಾಡಿಯಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ಸ್ಥಳೀಯರ ಮೊಬೈಲ್ ಪಡೆದು ಫೋನ್ ಕರೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ, ಸ್ಥಳೀಯರು ಪ್ರಶ್ನಿಸಿ ಬಿಸಿ ರೋಡಿನಲ್ಲಿ ಯುವತಿ ಕೊಂದವನು ಎಂಬುದನ್ನು ಪತ್ತೆ ಮಾಡಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಬಂದು ವಿಚಾರಣೆ ನಡೆಸಿದಾಗ ಇಲಿಪಾಷಾಣ ಸೇವಿಸಿರುವುದಾಗಿ ತಿಳಿಸಿದ್ದು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದಕ್ಷಿಣ ಕನ್ನಡ ಎಸ್ಪಿ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.



“ಆರೋಪಿ ಚೇತನ್ ಮೃತ ಲಾವಣ್ಯಳಿಗೆ ದೂರದ ಸಂಬಂಧಿಯಾಗಿದ್ದು, ಆಕೆಯನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ. ಆದರೆ ಲಾವಣ್ಯ ಈತನ ಪ್ರೀತಿಯನ್ನು ನಿರಾಕರಿಸಿದ್ದರಿಂದ ಆಕ್ರೋಶಗೊಂಡು, ಬ್ಯಾಗ್ನಲ್ಲಿ ತಂದಿದ್ದ ತಲ್ವಾರ್ನಿಂದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಕಡಿದು ಹತ್ಯೆ ಮಾಡಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ. ಬಂಟ್ವಾಳ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿದ್ದು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ಲಾವಣ್ಯ (21) ಬಂಟ್ವಾಳ ತಾಲೂಕಿನ ಕಕ್ಯಪದವು ನಿವಾಸಿ ಬಾಳಪ್ಪ ಗೌಡ ಎಂಬವರ ಮಗಳಾಗಿದ್ದು ಕಲ್ಲಡ್ಕ ಖಾಸಗಿ ನರ್ಸಿಂಗ್ ಹೋಮ್ ನಲ್ಲಿ ಮೆಡಿಕಲ್ ಸ್ಟೋರ್ ನಲ್ಲಿ ಕೆಲಸಕ್ಕಿದ್ದಳು. ನಿನ್ನೆ ಸಂಜೆ ಎಂದಿನಂತೆ ಮನೆಗೆ ಹಿಂತಿರುಗಲು ಬಿಸಿ ರೋಡ್ ಬಸ್ ನಿಲ್ದಾಣಕ್ಕೆ ಬಂದಿದ್ದಾಗ ಚೇತನ್ ಹಿಂಬಾಲಿಸಿ ಬಂದು ತಲವಾರಿನಲ್ಲಿ ಕಡಿದು ಹೋಗಿದ್ದ. ಸಾರ್ವಜನಿಕರ ಎದುರಲ್ಲೇ ನಡೆದ ಕೃತ್ಯ ಇಡೀ ಜಿಲ್ಲೆಯನ್ನು ಬೆಚ್ಚಿ ಬೀಳಿಸಿತ್ತು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm