ಬ್ರೇಕಿಂಗ್ ನ್ಯೂಸ್
17-07-26 08:11 pm HK News Staffer ಕ್ರೈಂ
ಮಂಗಳೂರು, ಜುಲೈ 17 : ನಗರದ ಉರ್ವ ಮಾರ್ಕೆಟ್ ಬಳಿಯ ಮಠದಕಣಿ ಮನೆಯಲ್ಲಿ ಜುಲೈ 11ರಂದು ಮನೆಯ ಬಾಗಿಲು ಒಡೆದು ಚಿನ್ನಾಭರಣ ಕಳವುಗೈದ ಘಟನೆ ನಡೆದಿದ್ದು ಪ್ರಕರಣ ಬೆನ್ನತ್ತಿದ ಬರ್ಕೆ ಠಾಣೆ ಪೊಲೀಸರು ನೇಪಾಳ ಮೂಲದ ಮೂವರು ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ.
ನೇಪಾಳದ ಚೈನ್ ಪುರ್ ಜಿಲ್ಲೆಯ ಕೇತ್ ಕೊಟ್ ಗ್ರಾಮದ ನಿವಾಸಿ ತಿಲಕ್ ಕುಮಾರ್ ಖಡ್ಕ @ ತಿಲಕ್ ಖಡ್ಕ (36), ಬಜಂಗ್ ಜಿಲ್ಲೆಯ ನಿವಾಸಿ ಅಶೋಕ್ ರಾಜ್ @ ಅಶೋಕ್ ಸಿಂಗ್ @ ಅಶೋಕ್ ಸಿಂಗ್ ಠಾಕುರಿ (33), ಕೈಲಾಲಿ ಜಿಲ್ಲೆಯ ನಿವಾಸಿ ದೀಪೆಂದರ್ ರಸೈಲಿ (25) ಬಂಧಿತರು.
ಜುಲೈ 11ರಂದು ಸಂಜೆ 5.30 ಗಂಟೆಗೆ ಉರ್ವಾ ಮಠದಕಣಿಯಲ್ಲಿ ಮನೆಗೆ ಲಾಕ್ ಮಾಡಿಕೊಂಡು ಬಂಟ್ವಾಳ ತಾಲೂಕಿನ, ವಿಟ್ಲ ಕಡಂಬು ಎಂಬಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದು ಮರುದಿನ ಬೆಳಗ್ಗೆ ಬಂದು ನೋಡಿದಾಗ ಕಳವಾಗಿತ್ತು. ಮನೆಯ ಹಿಂದಿನ ಬಾಗಿಲು ಒಡೆದು ಯಾರೋ ಕಳ್ಳರು ಮನೆಯಲ್ಲಿದ್ದ ಸುಮಾರು 64 ಗ್ರಾಂ ತೂಕದ ಚಿನ್ನಾಭರಣ ಹಾಗೂ ರೂ. 25,000/- ಸೇರಿದಂತೆ ಒಟ್ಟು 8,57,000/- ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿರುವುದು ಕಂಡುಬಂದಿತ್ತು. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 70/2026 ಕಲಂ:331(4), 305 BNS ರಂತೆ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು.

ಬರ್ಕೆ ಪೊಲೀಸರು ಜುಲೈ 17 ರ ಬೆಳಗ್ಗಿನ ಜಾವ ನೇಪಾಳ ಮೂಲದ ಮೂರು ಜನ ಕುಖ್ಯಾತ ಮನೆಗಳ್ಳರನ್ನು ಬೋಳೂರಿನಲ್ಲಿ ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ ಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಆರೋಪಿತರ ಬಳಿಯಿಂದ ಕಳವುಗೈದ ಎಲ್ಲ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಇದಲ್ಲದೆ, ಮಹಾರಾಷ್ಟ್ರ ರಾಜ್ಯದ ನಾಸಿಕ್ ನಗರದಲ್ಲಿ ಕಳ್ಳತನ ಮಾಡಿದ 790 ಗ್ರಾಂ ಬೆಳ್ಳಿ ಆಭರಣಗಳು ಸೇರಿದಂತೆ ಸುಮಾರು 10 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿರುತ್ತಾರೆ.
ಈ ಹಿಂದೆ 2026ನೇ ಮಾರ್ಚ್ ತಿಂಗಳಿನಲ್ಲಿ ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನಕ್ಕೆ ಪ್ರಯತ್ನಿಸಿದ್ದು, ಯಾವುದೇ ವಸ್ತುಗಳು ಕಳವಾಗಿರುವುದಿಲ್ಲ. ಅಲ್ಲದೆ ರಾಜ್ಯದ ಬೆಂಗಳೂರು, ದಾವಣಗೆರೆ, ಉಡುಪಿ ಸೇರಿದಂತೆ ಹಲವಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಮಾರು 15ಕ್ಕೂ ಹೆಚ್ಚು ಮನೆ ಕಳ್ಳತನ ಮಾಡಿದ್ದು ಇವರ ಮೇಲೆ ಪ್ರಕರಣ ದಾಖಲಾಗಿರುತ್ತದೆ. ಅಲ್ಲದೆ ತಮಿಳುನಾಡು, ದೆಹಲಿ, ಹರ್ಯಾಣ ರಾಜ್ಯಗಳಲ್ಲಿ ಆರೋಪಿತರ ಮೇಲೆ ಪ್ರಕರಣ ದಾಖಲಾಗಿದ್ದು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm