ಬ್ರೇಕಿಂಗ್ ನ್ಯೂಸ್
22-07-26 09:03 pm HK News Desk ಕ್ರೈಂ
ಮಂಗಳೂರು, ಜುಲೈ 22 ಮತದಾರರ ಪಟ್ಟಿಯ ದಾಖಲೆ ಪರಿಷ್ಕರಣೆ (SIR) ‘ಮಿಸ್‌ಮ್ಯಾಚ್’ ನೆಪ ಒಡ್ಡಿ, ನಕಲಿ APK ಫೈಲ್ ಕಳುಹಿಸಿ ಆ್ಯಪ್ ಡೌನ್‌ಲೋಡ್ ಮಾಡಿಸುವ ಮೂಲಕ 71 ವರ್ಷದ ಹಿರಿಯ ನಾಗರಿಕರೊಬ್ಬರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ ₹6,82,082 ರೂ. ಹಣವನ್ನು ಸೈಬರ್ ಕಳ್ಳರು ಎಗರಿಸಿರುವ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಜುಲೈ 17ರಂದು ಸಂತ್ರಸ್ತ 71 ವರ್ಷದ ವೃದ್ಧ ವ್ಯಕ್ತಿಯ ಮೊಬೈಲ್‌ಗೆ “ನಿಮ್ಮ SIR ಪರಿಶೀಲನೆ ಮಿಸ್ ಮ್ಯಾಚ್ ಆಗಿದೆ, ತಕ್ಷಣ 8638932992 ಸಂಖ್ಯೆಯನ್ನು ಸಂಪರ್ಕಿಸಿ” ಎಂದು ಮೆಸೇಜ್ ಬಂದಿತ್ತು. ಇದನ್ನು ನಂಬಿ ಜುಲೈ 18 ರಂದು ಸದ್ರಿ ಸಂಖ್ಯೆಗೆ ವಾಟ್ಸ್‌ಆ್ಯಪ್ ಮೆಸೇಜ್ ಮಾಡಿದ್ದು, 48 ಗಂಟೆಗಳಲ್ಲಿ ಸಂಪರ್ಕಿಸುವುದಾಗಿ ಸೈಬರ್ ವಂಚಕರಿಂದ ಮರುಪರಿಶೀಲನೆ ಸಂದೇಶ ಬಂದಿತ್ತು.
ಜುಲೈ 20ರಂದು ಸಂಜೆ +91 9101633409 ಸಂಖ್ಯೆಯಿಂದ ವಾಟ್ಸ್‌ಆ್ಯಪ್ ಕರೆ ಮಾಡಿದ ಅಪರಿಚಿತ ವ್ಯಕ್ತಿ ಮತದಾರರ ಪರಿಶೀಲನೆ ಲಿಂಕ್ ಕಳುಹಿಸಿ, SIR ಅಪ್ಡೇಟ್ ಮಾಡಲು ದಾಖಲೆಗಳ ವಿವರ ಪಡೆದಿದ್ದೇನೆ. ಪರಿಶೀಲನೆಯ 5 ರೂ. ಶುಲ್ಕ ಪಾವತಿಸುವಂತೆ ತಿಳಿಸಿದ್ದು, ಲಿಂಕ್ ಮೂಲಕ ಹಣ ಪಾವತಿಯಾಗದಿದ್ದಾಗ ಹೊಸ APK ಫೈಲ್ ಒಂದನ್ನು ಕಳುಹಿಸಿ ಡೌನ್‌ಲೋಡ್ ಮಾಡಲು ಹೇಳಿದ್ದ.
ಸಂತ್ರಸ್ತ ವ್ಯಕ್ತಿ APK ಫೈಲ್ ಡೌನ್‌ಲೋಡ್ ಮಾಡುತ್ತಿದ್ದಂತೆ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಜುಲೈ 21ರ ಬೆಳಗ್ಗೆ ಫೋನ್ ಆನ್ ಆಗದೇ ಇದ್ದಾಗ ಅನುಮಾನಗೊಂಡು ಬ್ಯಾಂಕ್ ಖಾತೆ ಪರಿಶೀಲಿಸಿದಾಗ, ಎಚ್‌ಡಿಎಫ್‌ಸಿ ಬ್ಯಾಂಕ್ ಕದ್ರಿ ಶಾಖೆಯಲ್ಲಿದ್ದ ಖಾತೆಯಿಂದ ಹಂತ ಹಂತವಾಗಿ ಒಟ್ಟು 6,82,082 ರೂ. ಕಡಿತಗೊಂಡಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಸೈಬರ್ ಕ್ರೈಂ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm