ಬ್ರೇಕಿಂಗ್ ನ್ಯೂಸ್
24-07-26 02:18 pm HK News Staffer ಕ್ರೈಂ
ಕಾಸರಗೋಡು, ಜುಲೈ 24: 4 ವರ್ಷಗಳ ಹಿಂದೆ ಕುಂಬಳೆಯಲ್ಲಿ ಬಸ್ ಮಾಲೀಕರೊಬ್ಬರ ಮನೆಗೆ ನುಗ್ಗಿ, ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಂಧಿಸಲಾಗಿದೆ. ಪುತ್ತೂರು ಸಂಪ್ಯ ನಿವಾಸಿ ಅಜೀಜ್ ಅಲಿಯಾಸ್ ಅಬ್ದುಲ್ ಅಜೀಜ್ (58) ಬಂಧಿತ ಆರೋಪಿ.
2012ರ ಡಿಸೆಂಬರ್ 22ರಂದು ಕುಂಬಳೆಯ ಅನಿಲ್ ಕುಂಬ್ಳೆ ರಸ್ತೆಯ ಸಮೀಪವಿರುವ ಮಂಗಳೂರಿನಲ್ಲಿ ಬಸ್ ಆಪರೇಟರ್ ಆಗಿದ್ದ ರಾಜೇಶ್ ಶೆಣೈ ಎಂಬವರ ಮನೆಗೆ ಮುಸುಕುಧಾರಿ ದರೋಡೆಕೋರರ ತಂಡ ಸಂಜೆ ಏಳು ಗಂಟೆ ವೇಳೆಗೆ ನುಗ್ಗಿತ್ತು. ಬಂದೂಕು ತೋರಿಸಿ ಮನೆಯವರನ್ನು ಬೆದರಿಸಿದ ದರೋಡೆಕೋರರು, ರಾಜೇಶ್ ಶೆಣೈ ಅವರ ಮುಖಕ್ಕೆ ಯಾವುದೋ ದ್ರವ ಸಿಂಪಡಿಸಿ ಪ್ರಜ್ಞೆ ತಪ್ಪಿಸಿದ್ದರು. ಬಳಿಕ ಕುಟುಂಬದ ಇತರ ಸದಸ್ಯರ ಕೈಕಾಲುಗಳನ್ನು ಕಟ್ಟಿ ಹಾಕಿ, ಬಾಯಿಗೆ ಪ್ಲಾಸ್ಟರ್ ಅಂಟಿಸಿ 42 ಪವನ್ (366 ಗ್ರಾಂ) ಚಿನ್ನಾಭರಣ ಹಾಗೂ 25 ಸಾವಿರ ರೂ. ನಗದನ್ನು ದೋಚಿ ಪರಾರಿಯಾಗಿದ್ದರು.
ಬೆಳಕಿಗೆ ಬಂದಿದ್ದು ಹೇಗೆ?
ಅದೇ ದಿನ ರಾತ್ರಿ ರಾಜೇಶ್ ಶೆಣೈ ಅವರ ಕುಟುಂಬದ ಸ್ನೇಹಿತೆ ಡಾ. ವಾಣಿ ಅವರು ತಮ್ಮ ನೂತನ ಮನೆಯ ಗೃಹಪ್ರವೇಶದ ಆಮಂತ್ರಣ ನೀಡಲೆಂದು ಮನೆಗೆ ಬಂದಿದ್ದರು. ಈ ವೇಳೆ ಮನೆಯವರನ್ಬು ಕಟ್ಟಿ ಹಾಕಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಂದು ಈ ಘಟನೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಸಂಚಲನ ಮೂಡಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಒಟ್ಟು 15 ಆರೋಪಿಗಳಿರುವುದನ್ನು ಗುರುತಿಸಿದ್ದರು. ಈ ಪೈಕಿ 10 ಮಂದಿ ಬಂಧನವಾಗಿದ್ದರೆ, ಒಬ್ಬ ಮೃತಪಟ್ಟಿದ್ದ. ಅಬ್ದುಲ್ ಅಜೀಜ್ ಸೇರಿದಂತೆ ನಾಲ್ವರು ತಲೆಮರೆಸಿಕೊಂಡಿದ್ದರು. ಕೆಲವು ವರ್ಷಗಳ ಕಾಲ ಅವಿತುಕೊಂಡಿದ್ದ ಅಬ್ದುಲ್ ಅಜೀಜ್ ಬಳಿಕ ಅಪರಾಧ ಚಟುವಟಿಕೆಯಿಂದ ದೂರವಿದ್ದು ಪುತ್ತೂರಿನಲ್ಲಿ ಜೀವನ ಮಾಡಿಕೊಂಡಿದ್ದ. ಇತರ ಆರೋಪಿಗಳ ವಿರುದ್ಧ ಕಾಸರಗೋಡು ಕೋರ್ಟಿನಲ್ಲಿ ವಿಚಾರಣೆ ಮುಂದುವರಿದಿದೆ.
ಇದೇ ವೇಳೆ, ಕಾಸರಗೋಡು ಅಪರಾಧ ವಿಭಾಗದ ಡಿವೈಎಸ್ಪಿ ಮಧುಸೂದನನ್ ನಾಯರ್ ಅವರ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ಗುರುವಾರ ಪುತ್ತೂರಿನ ಸಂಪ್ಯದಲ್ಲಿ ಕಾರ್ಯಾಚರಣೆ ನಡೆಸಿ ಅಜೀಜ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಕಾರ್ಯಾಚರಣೆಯಲ್ಲಿ ಇನ್ಸ್ಪೆಕ್ಟರ್ಗಳಾದ ಶ್ರೀಕುಮಾರ್, ಸಂಜಯ್, ಎಸ್ಐಗಳಾದ ರವೀಂದ್ರನ್, ಪ್ರಮೋದ್, ವಿನೋದ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಪ್ರಕರಣದ ಇನ್ನುಳಿದ ಮೂವರು ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm