ಬ್ರೇಕಿಂಗ್ ನ್ಯೂಸ್
27-07-26 11:47 am HK News Staffer ಕ್ರೈಂ
ಮಂಗಳೂರು, ಜುಲೈ 27: ಆಂಬುಲೆನ್ಸ್ ಮೂಲಕ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪ ಎದುರಿಸುತ್ತಿರುವ ಬೆಳ್ತಂಗಡಿಯ ಬಾಬಾ ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಬಂಧನ ಭೀತಿಯಿಂದ ದುಬೈಗೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣದ ನಾಲ್ಕನೇ ಆರೋಪಿಯಾಗಿರುವ ಜಲೀಲ್ಗಾಗಿ ಮಂಗಳೂರು ಸಿಸಿಬಿ ಪೊಲೀಸರು ತೀವ್ರ ಶೋಧ ಕಾರ್ಯ ಮುಂದುವರಿಸಿದ್ದು, ಆತನ ಚಲನವಲನಗಳ ಕುರಿತು ಮಹತ್ವದ ಮಾಹಿತಿ ಕಲೆಹಾಕುತ್ತಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಜುಲೈ 25ರಂದು ಸ್ನೇಹಿತರ ಸಹಾಯದಿಂದ ಜಲೀಲ್ ಬೆಂಗಳೂರಿನ ಮೂಲಕ ದುಬೈಗೆ ತೆರಳಿರುವ ಸಾಧ್ಯತೆ ಇದೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಈ ಬಗ್ಗೆ ಪ್ರಯಾಣದ ದಾಖಲೆಗಳು ಹಾಗೂ ಇತರ ತಾಂತ್ರಿಕ ಮಾಹಿತಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಇತ್ತೀಚೆಗೆ ಬಾಗಲಕೋಟೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸರು ಸುಮಾರು ₹5 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಮೂವರು ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಿದ್ದರು. ತನಿಖೆ ವೇಳೆ ಈ ಜಾಲದ ನಾಲ್ಕನೇ ಆರೋಪಿಯಾಗಿ ಜಲೀಲ್ ಹೆಸರು ಹೊರಬಂದಿದ್ದು, ಮೂವರು ಆರೋಪಿಗಳ ಬಂಧನವಾಗುತ್ತಿದ್ದಂತೆಯೇ ಆತ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆಂಬುಲೆನ್ಸ್ ಸಮೇತ ನಾಪತ್ತೆಯಾಗಿದ್ದಾನೆ.
ತನಿಖೆಯಲ್ಲಿ ಜಲೀಲ್ ಜಿಲ್ಲೆಯಲ್ಲಿ ಆಂಬುಲೆನ್ಸ್ ಬಳಸಿ ಡ್ರಗ್ಸ್ ಸರಬರಾಜು ಮಾಡುತ್ತಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಆತನ ಬಂಧನಕ್ಕಾಗಿ ಮಂಗಳೂರು ಸಿಸಿಬಿ ವಿಶೇಷ ತಂಡ ರಚಿಸಿ ವಿವಿಧ ಆಯಾಮಗಳಲ್ಲಿ ಶೋಧ ನಡೆಸುತ್ತಿದೆ. ವಿದೇಶಕ್ಕೆ ಪರಾರಿಯಾಗಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಂಬಂಧಿತ ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ಮಾಹಿತಿ ವಿನಿಮಯವೂ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಸಮಾಜ ಸೇವೆಯ ಮುಖವಾಡದ ಹಿಂದೆ ಡ್ರಗ್ಸ್ ಜಾಲ;
ಬೆಳ್ತಂಗಡಿಯಲ್ಲಿ ಸಮಾಜಸೇವಕ ಹಾಗೂ "ಆಂಬುಲೆನ್ಸ್ ಹೀರೋ" ಎಂಬ ಹೆಸರಿನಲ್ಲಿ ಗುರುತಿಸಿಕೊಂಡಿದ್ದ ಜಲೀಲ್ ಬಾಬಾ ವಿರುದ್ಧ ಇದೀಗ ಮಾದಕ ವಸ್ತು ಜಾಲದ ಗಂಭೀರ ಆರೋಪ ಕೇಳಿಬಂದಿದೆ. ಆಂಬುಲೆನ್ಸ್ ಸೇವೆಯ ಮುಖವಾಡದ ಹಿಂದೆ ಡ್ರಗ್ಸ್ ಸರಬರಾಜು ಜಾಲ ನಡೆಸುತ್ತಿದ್ದಾನೆ ಎಂಬ ಆರೋಪದ ಬೆನ್ನಲ್ಲೇ ಆತ ನಾಪತ್ತೆಯಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಜಿಲ್ಲೆಯ ಜನರಲ್ಲಿ ಉತ್ತಮ ವ್ಯಕ್ತಿಯೆಂಬ ಭಾವನೆ ಮೂಡಿಸಿಕೊಂಡಿದ್ದ ಜಲೀಲ್ ವಿರುದ್ಧ ಹೊರಬಿದ್ದಿರುವ ಆರೋಪಗಳು ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಆತನ ಬಂಧನಕ್ಕಾಗಿ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm