ಬ್ರೇಕಿಂಗ್ ನ್ಯೂಸ್
28-07-26 07:07 pm HK News Staffer ಕ್ರೈಂ
ಮಂಗಳೂರು, ಜುಲೈ 28: ಬಿಸಿ ರೋಡ್ನಲ್ಲಿ ನಡೆದಿದ್ದ ಬಹುಚರ್ಚಿತ ಲಾವಣ್ಯ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹತ್ಯೆ ಆರೋಪಿ ಚೇತನ್ ಚಿಕಿತ್ಸೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕೊನೆಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸುಮಾರು 10 ದಿನಗಳ ಬಳಿಕ ಬಂಟ್ವಾಳ ನಗರ ಪೊಲೀಸರು ಆತನನ್ನು ಅಧಿಕೃತವಾಗಿ ವಶಕ್ಕೆ ಪಡೆದಿದ್ದಾರೆ.
ಲಾವಣ್ಯ ಹತ್ಯೆ ನಡೆದ ಬಳಿಕ ಆರೋಪಿ ಇಲಿ ಪಾಷಾಣ ಸೇವಿಸಿದ್ದಾನೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಆತನನ್ನು ಮೊದಲು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ಚಿಕಿತ್ಸೆ ಪೂರ್ಣಗೊಂಡ ಹಿನ್ನೆಲೆ ವೈದ್ಯರು ಡಿಸ್ಚಾರ್ಜ್ ಮಾಡಿದ್ದರು.
ಆಸ್ಪತ್ರೆಯಿಂದ ಬಿಡುಗಡೆಯಾದ ಕೂಡಲೇ ಬಂಟ್ವಾಳ ನಗರ ಪೊಲೀಸರು ಆರೋಪಿ ಚೇತನ್ನನ್ನು ವಶಕ್ಕೆ ಪಡೆದು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಕರಣದ ತನಿಖೆಯ ಅಗತ್ಯವನ್ನು ಪರಿಗಣಿಸಿದ ನ್ಯಾಯಾಲಯ, ಆರೋಪಿಯನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.


ಪೊಲೀಸ್ ಕಸ್ಟಡಿಗೆ ಪಡೆದ ಬಳಿಕ ತನಿಖಾಧಿಕಾರಿಗಳು ತಕ್ಷಣವೇ ಮಹಜರು ಪ್ರಕ್ರಿಯೆ ಆರಂಭಿಸಿದ್ದು, ಆರೋಪಿ ಚೇತನ್ನನ್ನು ಕೊಲೆ ನಡೆದ ಬಿಸಿ ರೋಡ್ ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಇದೇ ವೇಳೆ ಕೃತ್ಯ ನಡೆದ ಸಂದರ್ಭದ ಬಗ್ಗೆ ಆರೋಪಿ ಬಳಿ ಸ್ಥಳದಲ್ಲೇ ವಿವರವಾದ ವಿಚಾರಣೆ ನಡೆಸಲಾಗಿದೆ.
ತನಿಖೆಯ ಭಾಗವಾಗಿ ಘಟನೆಯ ಸಂಪೂರ್ಣ ಹಿನ್ನೆಲೆ, ಕೊಲೆಗೆ ಬಳಸಿದ ವಸ್ತುಗಳು, ಘಟನಾ ಕ್ರಮ ಹಾಗೂ ಇತರ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಕಾರ್ಯವನ್ನು ಪೊಲೀಸರು ಮುಂದುವರಿಸಿದ್ದಾರೆ. ಪ್ರಕರಣದ ಇನ್ನಷ್ಟು ಮಹತ್ವದ ಮಾಹಿತಿಗಳು ಪೊಲೀಸ್ ಕಸ್ಟಡಿ ವಿಚಾರಣೆಯಲ್ಲಿ ಹೊರಬರುವ ಸಾಧ್ಯತೆ ಇದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm