ಬ್ರೇಕಿಂಗ್ ನ್ಯೂಸ್
29-07-26 10:45 pm HK News Desk ಕ್ರೈಂ
ಮಂಗಳೂರು, ಜುಲೈ 29: ಮಾದಕ ದ್ರವ್ಯ ಮುಕ್ತ ಮಂಗಳೂರು ನಿರ್ಮಾಣದ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಸುಮಾರು ರೂ 82 ಕೋಟಿ ಮೌಲ್ಯದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿಯೊಂದಿಗೆ ಬುಧವಾರ ವೈಜ್ಞಾನಿಕವಾಗಿ ನಾಶಪಡಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ನಗರದ ಮುಲ್ಕಿ ಬಳಿಯ ಕೊಳ್ನಾಡು ಇಂಡಸ್ಟ್ರಿಯಲ್ ಪ್ರದೇಶದಲ್ಲಿರುವ 'ರಾಮ್ಕಿ ಎನರ್ಜಿ ಅಂಡ್ ಎನ್ವಿರಾನ್‌ಮೆಂಟ್ ಲಿಮಿಟೆಡ್' ಸಂಸ್ಥೆಯ ಘಟಕದಲ್ಲಿ 'ಡ್ರಗ್ ಡಿಸ್ಪೋಸಲ್ ಕಮಿಟಿ' ಸಮಕ್ಷಮ ಪರಿಸರ ಸ್ನೇಹಿ ಹಾಗೂ ವೈಜ್ಞಾನಿಕ ವಿಧಾನದಲ್ಲಿ ಈ ವಿಲೇವಾರಿ ಪ್ರಕ್ರಿಯೆ ನೆರವೇರಿತು.
ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ 16 ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 59 ಎನ್.ಡಿ.ಪಿ.ಎಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಪ್ತಿ ಮಾಡಲಾಗಿದ್ದ ಮಾದಕ ವಸ್ತುಗಳನ್ನು ಈ ಸಂದರ್ಭದಲ್ಲಿ ನಾಶ ಮಾಡಲಾಯಿತು.

ನಾಶಪಡಿಸಲಾದ ಮಾದಕ ದ್ರವ್ಯಗಳ ವಿವರ:
ಗಾಂಜಾ: 450 ಕೆ.ಜಿ
ಎಂ.ಡಿ.ಎಂ.ಎ (MDMA): 43 ಕೆ.ಜಿ 260 ಗ್ರಾಂ
ಹೈಡ್ರೋ ವೀಡ್ ಗಾಂಜಾ: 880 ಗ್ರಾಂ
ಭಾಂಗ್: 1 ಕೆ.ಜಿ 200 ಗ್ರಾಂ
ಚರಸ್: 80 ಗ್ರಾಂ
(ಒಟ್ಟು ಅಂದಾಜು ಮೌಲ್ಯ: ರೂ 82 ಕೋಟಿ)
ಮಂಗಳೂರು ಪೂರ್ವ ಠಾಣೆ (2024): ದಾಖಲಾಗಿದ್ದ ಬೃಹತ್ ಪ್ರಕರಣಕ್ಕೆ ಸಂಬಂಧಿಸಿದ ರೂ 75 ಕೋಟಿ ಮೌಲ್ಯದ 37 ಕೆಜಿಎಂಡಿಎಂಎ.
ಮುಲ್ಕಿ ಪೊಲೀಸ್ ಠಾಣೆ (2025): ದಾಖಲಾಗಿದ್ದ ಪ್ರಕರಣದ ಸುಮಾರು ರೂ 4.47 ಕೋಟಿ ಮೌಲ್ಯದ 4 ಕೆ.ಜಿ ಎಂಡಿಎಂಎ.
ಕೊಣಾಜೆ ಪೊಲೀಸ್ ಠಾಣೆ: ವಶಪಡಿಸಿಕೊಂಡಿದ್ದ ರೂ 20 ಲಕ್ಷ ಮೌಲ್ಯದ 106 ಕೆ.ಜಿ ಗಾಂಜಾ.
ಮೂಡಬಿದಿರೆ ಪೊಲೀಸ್ ಠಾಣೆ: ಜಪ್ತಿ ಮಾಡಿದ್ದ ರೂ 36 ಲಕ್ಷ ಮೌಲ್ಯದ 111 ಕೆ.ಜಿ ಗಾಂಜಾ.

2026ನೇ ಸಾಲಿನಲ್ಲಿ ಇದುವರೆಗೆ ಮಂಗಳೂರು ನಗರ ಪೊಲೀಸರು ಮಾದಕ ದ್ರವ್ಯ ಜಾಲದ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ದಾಖಲಾದ ಎನ್ಡಿಪಿಎಸ್ ಪ್ರಕರಣಗಳು 87 ಆಗಿದ್ದು, 157 ಪೆಡ್ಲರ್‌ಗಳನ್ನು ಬಂಧಿಸಲಾಗಿತ್ತು. ಇವರಿಂದ ರೂ 8,18,30,130 ಮೌಲ್ಯದ 148 ಕೆ.ಜಿ 615 ಗ್ರಾಂ ಗಾಂಜಾ, 7 ಕೆ.ಜಿ 165 ಗ್ರಾಂ ಎಂಡಿಎಂಎ, 1 ಕೆ.ಜಿ 705 ಗ್ರಾಂ ಹೈಡ್ರೋ ವೀಡ್ ಗಾಂಜಾ ವಶಪಡಿಸಲಾಗಿತ್ತು. ಡ್ರಗ್ಸ್ ಸೇವನೆಗೆ ಸಂಬಂಧಿಸಿದಂತೆ 463 ವ್ಯಕ್ತಿಗಳ ವಿರುದ್ಧ ಒಟ್ಟು 356 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

2024ಕ್ಕೆ ಹೋಲಿಸಿದರೆ ಈ ಬಾರಿ ನಾಶಪಡಿಸಲಾದ ಡ್ರಗ್ಸ್ ಗಣನೀಯವಾಗಿ ಹೆಚ್ಚಿರುವುದು ಗಮನಾರ್ಹವಾಗಿದೆ. 2024ರಲ್ಲಿ ಅಂದಾಜು 6.80 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಲಾಗಿತ್ತು. ಆದರೆ 2026ರ ಕಾರ್ಯಾಚರಣೆಯಲ್ಲಿ ಸುಮಾರು 495 ಕೆ.ಜಿ. ಮಾದಕ ದ್ರವ್ಯಗಳನ್ನು, ಅಂದಾಜು ₹82 ಕೋಟಿ ಮೌಲ್ಯದ ವಸ್ತುಗಳನ್ನು ವೈಜ್ಞಾನಿಕವಾಗಿ ಸುಟ್ಟು ನಾಶಪಡಿಸಲಾಗಿದೆ. ಇದು ಮಂಗಳೂರು ನಗರ ಪೊಲೀಸರು ಡ್ರಗ್ಸ್ ವಿರುದ್ಧ ನಡೆಸುತ್ತಿರುವ ನಿರಂತರ ಕಾರ್ಯಾಚರಣೆಯ ತೀವ್ರತೆ ಹಾಗೂ ದೊಡ್ಡ ಪ್ರಮಾಣದ ಡ್ರಗ್ಸ್ ಜಾಲವನ್ನು ಭೇದಿಸಿರುವುದಕ್ಕೆ ಸಾಕ್ಷಿಯಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm