ಬ್ರೇಕಿಂಗ್ ನ್ಯೂಸ್
01-08-26 02:50 pm HK News Staffer ಕ್ರೈಂ
ಮೂಡುಬಿದಿರೆ, ಆ. 1: ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಣಿಲ್‌ನಲ್ಲಿ ಯುವಕನೊಬ್ಬ ತನ್ನ ಅಕ್ಕನಿಗೆ ವಿಡಿಯೋ ಕರೆ ಮಾಡಿ ಮಾತನಾಡುತ್ತಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ ಅಬುಸಾಲಿ ಇಸ್ಮಾಯಿಲ್ ಅವರ ಪುತ್ರ ಸಯ್ಯದ್ ಅನ್ವರ್ (25) ಎಂದು ಗುರುತಿಸಲಾಗಿದೆ.
ಅನ್ವರ್ ಕಳೆದ ಕೆಲವು ಸಮಯದಿಂದ ಬೆಳುವಾಯಿಯ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಎರಡು ವರ್ಷದ ಮಗುವಿನೊಂದಿಗೆ ವಾಸವಾಗಿದ್ದರು. ಮೀನಿನ ಟೆಂಪೋ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸಯ್ಯದ್ ಅನ್ವರ್, ಕಳೆದ ಕೆಲವು ದಿನಗಳಿಂದ ಉದ್ಯೋಗವಿಲ್ಲದೆ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಇದೇ ವೇಳೆ ಕೌಟುಂಬಿಕ ಕಲಹದಿಂದ ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದುಬಂದಿದೆ.
ಪತಿ-ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿದ್ದು, ಈ ವಿಚಾರವಾಗಿ ಪೊಲೀಸ್ ಠಾಣೆಯವರೆಗೂ ಪ್ರಕರಣ ಹೋಗಿತ್ತು ಎನ್ನಲಾಗಿದೆ. ಗುರುವಾರ ಮತ್ತೆ ದಂಪತಿ ನಡುವೆ ಜಗಳವಾಗಿದ್ದು, ಬಳಿಕ ಪತ್ನಿ ಮಗುವಿನೊಂದಿಗೆ ತವರು ಮನೆಗೆ ತೆರಳಿದ್ದರು. ಇದರಿಂದ ಮನನೊಂದ ಅನ್ವರ್, ಅಕ್ಕನಿಗೆ ವಿಡಿಯೋ ಕರೆ ಮಾಡಿ ಪತ್ನಿ ಕಡೆಯವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಬಳಿಕ ಕರೆ ಮುಂದುವರಿದಿರುವಾಗಲೇ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ.
ಅನ್ವರ್ ಅವರ ಸಂಬಂಧಿಕರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm