ಬ್ರೇಕಿಂಗ್ ನ್ಯೂಸ್
05-08-26 04:29 pm HK News Staffer ಕ್ರೈಂ
ಬೆಂಗಳೂರು, ಆಗಸ್ಟ್ 05: ಕಾಡಾನೆಯೊಂದಿಗೆ ಸೆಲ್ಫಿ ತೆಗೆಯುವ ಹುಚ್ಚು ಬೆಂಗಳೂರಿನ ಉದ್ಯಮಿಯೊಬ್ಬರ ಜೀವವನ್ನೇ ಬಲಿ ಪಡೆದಿದೆ. ಆರಂಭದಲ್ಲಿ 'ಆನೆ ಹಠಾತ್ ದಾಳಿ ಮಾಡಿದೆ' ಎಂದು ಹೇಳಲಾಗಿದ್ದರೂ, ಅರಣ್ಯ ಇಲಾಖೆಯ ತನಿಖೆಯಲ್ಲಿ ಕಾಡಾನೆಯ ಸಮೀಪ ಹೋಗಿ ಸೆಲ್ಫಿ ತೆಗೆಯಲು ಯತ್ನಿಸಿದ್ದೇ ದುರಂತಕ್ಕೆ ಕಾರಣ ಎಂಬ ಸತ್ಯ ಬಹಿರಂಗವಾಗಿದೆ.
ಮೃತರನ್ನು ಬೆಂಗಳೂರು ರಾಜರಾಜೇಶ್ವರಿ ನಗರದ ನಿವಾಸಿ, 52 ವರ್ಷದ ಉದ್ಯಮಿ ನರೇಂದ್ರ ಶಿಂಧೆ ಎಂದು ಗುರುತಿಸಲಾಗಿದೆ. ಅವರು ತಮ್ಮ 10 ಮಂದಿ ಸ್ನೇಹಿತರೊಂದಿಗೆ ರೆಸಾರ್ಟ್‌ಗೆ ತೆರಳಿದ್ದು, ಅಲ್ಲಿಂದ ಮೂರು ಕಾರುಗಳಲ್ಲಿ ಹಿಂದಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಸೆಲ್ಫಿ ತೆಗೆಯಲು ಕಾರಿನಿಂದ ಇಳಿದಿದ್ದ ಉದ್ಯಮಿ;
ಕನಕಪುರ ವನ್ಯಜೀವಿ ಅಭಯಾರಣ್ಯದ ಬಸವನಬೆಟ್ಟ ಸಮೀಪದ ಕರಬಗೆರೆ ಕೆರೆಯ ಬಳಿ ಘಟನೆ ನಡೆದಿದೆ. ಸೋಲಿಗೆರೆ-ಹರಿಹರ ಗ್ರಾಮಗಳ ನಡುವಿನ ಅರಣ್ಯ ರಸ್ತೆಯಲ್ಲಿ ಕಾರುಗಳನ್ನು ನಿಲ್ಲಿಸಿದ ಬಳಿಕ ನರೇಂದ್ರ ಶಿಂಧೆ ಕೆಳಗಿಳಿದಿದ್ದರು. ಮೊದಲಿಗೆ ಸ್ನೇಹಿತರು, ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಇಳಿದಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ ಎಂದು ಹೇಳಿದ್ದರು. ಆದರೆ ಸ್ಥಳ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಈ ವಾದವನ್ನು ತಳ್ಳಿಹಾಕಿದ್ದಾರೆ.
ಆನೆಯತ್ತ ಬೆನ್ನು ಮಾಡಿ ಸೆಲ್ಫಿ... ಕ್ಷಣಾರ್ಧದಲ್ಲಿ ದಾಳಿ;
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಕೆರೆಯ ಸಮೀಪ ನಿಂತಿದ್ದ ಕಾಡಾನೆಯೊಂದಿಗೆ ಫೋಟೊ ಅಥವಾ ಸೆಲ್ಫಿ ತೆಗೆಯಲು ಶಿಂಧೆ ಕಾರಿನಿಂದ ಇಳಿದಿದ್ದರು. ಆನೆಯತ್ತ ಬೆನ್ನು ಮಾಡಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಆನೆಯ ದಂತಗಳು ಶಿಂಧೆ ಅವರ ಸೊಂಟ ಹಾಗೂ ಬೆನ್ನಿಗೆ ತಾಗಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದ ಅವರು ಸಮೀಪದ ಕೆರೆಯಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಕಾಡಾನೆ ದಾಳಿ ನಡೆಸಿದ ಕ್ಷಣದಿಂದ ಕೇವಲ 3 ರಿಂದ 5 ಸೆಕೆಂಡುಗಳಲ್ಲೇ ಈ ದುರಂತ ಸಂಭವಿಸಿರಬಹುದು ಎಂದು ಅರಣ್ಯ ಇಲಾಖೆ ಅಂದಾಜಿಸಿದೆ.
ಘಟನೆ ಬಳಿಕ ಸ್ನೇಹಿತರು ಸ್ಥಳೀಯರ ನೆರವಿನಿಂದ ಮೃತದೇಹವನ್ನು ಕೆರೆಯಿಂದ ಹೊರತೆಗೆದು ಬೆಂಗಳೂರಿಗೆ ಕೊಂಡೊಯ್ಯಲು ಯತ್ನಿಸಿದ್ದರು. ಆದರೆ ಅರಣ್ಯ ಸಿಬ್ಬಂದಿ ಗೇಟ್‌ನಲ್ಲಿ ವಾಹನ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದ್ದು, ಬಳಿಕ ತನಿಖೆ ಆರಂಭಿಸಲಾಯಿತು.
'ಇದು ಮೊದಲ ಘಟನೆ' ಎಂದ ಅರಣ್ಯ ಇಲಾಖೆ;
ರಾಮನಗರ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ. ರಾಮಕೃಷ್ಣಪ್ಪ ಮಾತನಾಡಿ, ಘಟನಾ ಸ್ಥಳದಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ. ಕಾರು ನಿಲ್ಲಿಸಿದ್ದ ಸ್ಥಳದಿಂದ ಕೆರೆಯವರೆಗೆ ಸುಮಾರು 50 ಮೀಟರ್ ದೂರವಿದ್ದು, ಕಾಡಾನೆ ದಾಳಿ ನಡೆಸಿದಾಗ ತಪ್ಪಿಸಿಕೊಳ್ಳಲು ಯಾವುದೇ ಅವಕಾಶ ಇರಲಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ, ಈ ಅರಣ್ಯ ಪ್ರದೇಶದಲ್ಲಿ ಸೆಲ್ಫಿ ಅಥವಾ ಫೋಟೊ ತೆಗೆಯಲು ಹೋಗಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ಮೊದಲ ಪ್ರಕರಣ ಇದಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
ಸಾರ್ವಜನಿಕರಿಗೆ ಅರಣ್ಯ ಇಲಾಖೆಯ ಎಚ್ಚರಿಕೆ;
ಘಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿರುವ ಅರಣ್ಯ ಇಲಾಖೆ, ವನ್ಯಜೀವಿಗಳ ಸಮೀಪ ಹೋಗುವುದು, ಸೆಲ್ಫಿ ಅಥವಾ ಫೋಟೊ ತೆಗೆಯಲು ಪ್ರಯತ್ನಿಸುವುದು ಜೀವಕ್ಕೆ ಅಪಾಯಕಾರಿಯಾಗಬಹುದು. ಕಾಡು ಪ್ರಾಣಿಗಳಿಂದ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದು ಮನವಿ ಮಾಡಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm