ಬ್ರೇಕಿಂಗ್ ನ್ಯೂಸ್
06-08-26 10:05 am HK News Staffer ಕ್ರೈಂ
ಮಂಗಳೂರು, ಆಗಸ್ಟ್ 6: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಕೇರಳದ ಕೊಚ್ಚಿಯಲ್ಲಿ ಬಲೆಗೆ ಕೆಡವಿದ್ದಾರೆ.
ತಲೆಮರೆಸಿಕೊಂಡ ಆರೋಪಿಗಳೆಂದು ಘೋಷಿಸಲ್ಟಟ್ಟಿದ್ದ ಸುಳ್ಯ ತಾಲೂಕಿನ ಕಲ್ಲುಮುಟ್ಲು ನಿವಾಸಿ ಉಮರ್ ಫಾರೂಕ್ ನನ್ನು ಕೊಚ್ಚಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. 2022ರ ಜುಲೈ 26ರಂದು ರಾತ್ರಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯಾಗಿತ್ತು. ಪಿಎಫ್ಐ ಸಂಘಟನೆ ಕಾರ್ಯಕರ್ತರು ಹಿಂದು ನಾಯಕರ ಹತ್ಯೆ ಸಂಚಿನ ಭಾಗವಾಗಿ ಪ್ರವೀಣ್ ಕೊಲೆ ಮಾಡಿದ್ದರು ಎಂದು ಎನ್ಐಎ ತನಿಖೆಯಲ್ಲಿ ತಿಳಿಸಿತ್ತು. ಪ್ರಕರಣದಲ್ಲಿ 20ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದು ಆರು ಮಂದಿ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರು. ಅವರ ಪತ್ತೆಗಾಗಿ ಮಾಹಿತಿ ಕೊಟ್ಟವರಿಗೆ ತಲಾ ಎರಡು ಲಕ್ಷದ ಬಹುಮಾನ ಘೋಷಿಸಲಾಗಿತ್ತು.
ಒಬ್ಬೊಬ್ಬರನ್ನೇ ಎನ್ಐಎ ಬಲೆಗೆ ಕೆಡವಿದ್ದು ಇತ್ತೀಚೆಗೆ ಜುಲೈ 11ರಂದು ಇಬ್ಬರು ಆರೋಪಿಗಳಾದ ನೌಷದ್ ಹಾಗು ನಾಸೀರ್ ನನ್ನು ಎನ್ಐಎ ಬಂಧಿಸಿತ್ತು. ವಿಚಾರಣೆ ಸಂದರ್ಭದಲ್ಲಿ ಉಮ್ಮರ್ ಫಾರೂಕ್ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳ ತಂಡ ಕೇರಳದ ಕೊಚ್ಚಿಯಲ್ಲಿ ಅಡಗಿ ಕುಳಿತಿದ್ದ ಉಮ್ಮರ್ ಫಾರೂಕ್ ನನ್ನು ಸೆರೆಹಿಡಿದಿದೆ. ಕೃತ್ಯ ಎಸಗಿದ ಪ್ರಮುಖ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ಉಮ್ಮರ್ ಫಾರೂಕ್ ಸಹಕರಿಸಿದ್ದ ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಕರಣದ 13ನೇ ಆರೋಪಿಯೆಂದು ಗುರುತಿಸಲಾಗಿತ್ತು. ಎರಡು ವರ್ಷ ತಲೆಮರೆಸಿಕೊಂಡ ಬಳಿಕ ಕೊಚ್ಚಿಯಲ್ಲಿ ವಾಸ್ತವ್ಯ ಹೂಡಿ ಅಲ್ಲಿಯೇ ಕೆಲಸಕ್ಕೂ ಸೇರಿಕೊಂಡಿದ್ದ ಎನ್ನುವ ಮಾಹಿತಿ ಲಭಿಸಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm