ಬ್ರೇಕಿಂಗ್ ನ್ಯೂಸ್
06-08-26 11:47 am HK News Staffer ಕ್ರೈಂ
ಸುರತ್ಕಲ್, ಆ. 6: ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 15 ವರ್ಷದ ವಿದ್ಯಾರ್ಥಿಯೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸುರತ್ಕಲ್ ಸಮೀಪದ ಸೂರಿಂಜೆ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ. ಈತ ಸೂರಿಂಜೆ ಕೋಟೆ ಬೋಳ್ಳಾರು ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಓದಿನ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದ ವಿದ್ಯಾರ್ಥಿಯಾಗಿದ್ದ ಎಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಲಿಖಿತ್ ತನ್ನ ಸ್ನೇಹಿತರೊಂದಿಗೆ ಸೂರಿಂಜೆ ಮೈದಾನದಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಮೈದಾನದಲ್ಲೇ ಕುಸಿದು ಬಿದ್ದಿದ್ದಾನೆ. ಇದನ್ನು ಗಮನಿಸಿದ ಸ್ನೇಹಿತರು ಹಾಗೂ ಸ್ಥಳೀಯರು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಘಟನೆಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ಕಾರಣ ತಿಳಿಯುವ ಸಾಧ್ಯತೆ.ಹಠಾತ್ ಘಟನೆಯಿಂದ ಕುಟುಂಬಸ್ಥರು, ಶಾಲಾ ಶಿಕ್ಷಕರು, ಸಹಪಾಠಿಗಳು ಹಾಗೂ ಗ್ರಾಮಸ್ಥರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ.
ತಜ್ಞರು, ಕ್ರೀಡೆಯಲ್ಲಿ ತೊಡಗಿರುವ ಮಕ್ಕಳು ಮತ್ತು ಯುವಕರು ನಿಯಮಿತ ಆರೋಗ್ಯ ತಪಾಸಣೆ, ವಿಶೇಷವಾಗಿ ಹೃದಯದ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು, ಎದೆನೋವು, ಉಸಿರಾಟದ ತೊಂದರೆ, ತಲೆಸುತ್ತು ಅಥವಾ ಮೂರ್ಛೆ ಮುಂತಾದ ಲಕ್ಷಣಗಳನ್ನು ನಿರ್ಲಕ್ಷಿಸದಿರುವುದು ಅಗತ್ಯ ಎಂದು ಸಲಹೆ ನೀಡುತ್ತಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm