ಬ್ರೇಕಿಂಗ್ ನ್ಯೂಸ್
06-08-26 09:31 pm HK News Staffer ಕ್ರೈಂ
ಬಳ್ಳಾರಿ, ಆ 06: ಸಿನಿಮೀಯ ರೀತಿಯಲ್ಲಿ ನಡೆದ ತ್ರಿಕೋನ ಪ್ರೇಮ ಪ್ರಕರಣದಲ್ಲಿ ಯುವತಿಯೊಬ್ಬರು ಹಳೆ ಲವರ್ ಕಾಟಕ್ಕೆ ಬೇಸತ್ತು ವಿಡಿಯೋ ಮಾಡಿ ಸೂಸೈಡ್ ಮಾಡಿಕೊಂಡಿರುವ ಘಟನೆ ಬಳ್ಳಾರಿ ನಗರದ ಕೌಲ್ ಬಜಾರ್‌ನಲ್ಲಿ ನಡೆದಿದೆ.
ಕೌಲ್ ಬಜಾರ್ ಏರಿಯಾದ ಫಿರ್ದೋಸ್ ಸೂಸೈಡ್ ಮಾಡಿಕೊಂಡಿರುವ ದುರ್ದೈವಿ. ಈಕೆ ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಮೃತ ಯುವತಿ ಫಿರ್ದೋಸ್ ಕೌಲಬಜಾರ್ ಏರಿಯಾದ ಅಜೀಂನನ್ನು ಪ್ರೀತಿ ಮಾಡ್ತಿದ್ಲು. ಆದರೆ ಅಜೀಂ ಪ್ರೀತಿಯ ಹೆಸರಲ್ಲಿ ತಲೆ ಕೆಡಿಸಿ ಅವಳನ್ನು ದುರುಪಯೋಗಪಡಿಸಿಕೊಂಡಿದ್ದ ಎನ್ನಲಾಗಿದೆ. ಕೆಲ ದಿನಗಳ ಬಳಿಕ ಅಜೀಂನ ವರ್ತನೆಯಿಂದ ಬೇಸರಗೊಂಡಿದ್ದ ಯುವತಿ ಆತನಿಂದ ದೂರ ಇದ್ದಳಂತೆ. ಅದಾದ ಬಳಿಕ ಯುವತಿ ಅಜೀಂ ಸ್ನೇಹಿತ ಸೋಹೈಲ್‌ನನ್ನು ಪ್ರೀತಿಸಲು ಶುರು ಮಾಡಿದ್ದಳು. ಅಲ್ಲದೇ ಮದುವೆ ಮಾಡಿಕೊಳ್ಳಲು ಮುಂದಾಗಿದ್ದರು. ಈ ಮದುವೆ ವಿಚಾರ ಗೊತ್ತಾಗ್ತಿದ್ದಂತೆಯೇ ತನ್ನ ಜೊತೆ ಇರುವ ಖಾಸಗಿ ಪೋಟೋ ವೈರಲ್ ಮಾಡುವುದಾಗಿ ಹಳೆ ಲವರ್ ಅಜೀಂ ಬೆದರಿಕೆ ಹಾಕಿದ್ದಾನೆ. ದಿಕ್ಕು ತೋಚದಂತಾಗಿ ಯುವತಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ವಿಡಿಯೋದಲ್ಲಿ ಆತ್ಮಹತ್ಯೆಗೆ ಕಾರಣವಾದವರಿಗೆ ಶಿಕ್ಷೆಯಾಗಲಿ ಎಂದು ಡೆತ್ ನೋಟ್ ಬರೆದಿಟ್ಟಿದ್ದಾಳೆ. ಯುವತಿ ಫಿರ್ದೋಸ್ ಸೂಸೈಡ್ ಮಾಡಿಕೊಳ್ಳುವ ಮುನ್ನ ಹೊಸ ಲವರ್ ಸೊಹೈಲ್‌ಗೆ ಕರೆ ಮಾಡಿ, ಅಜೀಂ ಜೊತೆಗೆ ನಡೆದಿದ್ದ ಘಟನೆ ಬಗ್ಗೆ ವಿವರಣೆ ನೀಡಿದ್ದಾಳೆ ಎನ್ನಲಾಗಿದೆ. ಸದ್ಯ ಯುವತಿ ಸಾವಿಗೆ ನ್ಯಾಯ ಒದಗಿಸಿ ಎಂದು ಕುಟುಂಬಸ್ಥರು ಕೌಲಬಜಾರ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಇದೀಗ ಇಬ್ಬರು ಲವರ್‌ಗಳು ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm