ಬ್ರೇಕಿಂಗ್ ನ್ಯೂಸ್
07-08-26 06:00 pm HK News Staffer ಕ್ರೈಂ
ಉಡುಪಿ, ಆಗಸ್ಟ್ 07: ಕೆಲ ದಿನಗಳ ಹಿಂದೆ ಅಷ್ಟೇ ಕುಂದಾಪುರದಲ್ಲಿ ನಡೆದಿದ್ದ ಶೂಟೌಟ್ ಪ್ರಕರಣ ಇನ್ನೂ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಗುಂಡಿನ ದಾಳಿ ಸಂಭವಿಸಿದೆ. ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಶೂಟೌಟ್ ನಡೆದಿದ್ದು, ಕಾಂಗ್ರೆಸ್ ಮುಖಂಡ ಹಾಗೂ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ (55) ಅವರನ್ನು ದುಷ್ಕರ್ಮಿಗಳು ಹಾಡಹಗಲೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕಾಪು ತಾಲೂಕಿನ ಮುದರಂಗಡಿಯಲ್ಲಿ ನಡೆದಿದೆ.
ಶುಕ್ರವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಡಿಸೋಜಾ ಅವರ ಕಚೇರಿ ಬಳಿ ಈ ಭೀಕರ ಘಟನೆ ನಡೆದಿದೆ.
ಮೂರು ಸುತ್ತು ಗುಂಡಿನ ದಾಳಿ;
ಬೈಕ್‌ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಡೇವಿಡ್ ಅವರ ಮೇಲೆ ಅತ್ಯಂತ ಸಮೀಪದಿಂದ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಒಂದು ಗುಂಡು ಹಣೆಗೆ ತಗುಲಿದ್ದು, ಇನ್ನೆರಡು ಗುಂಡುಗಳು ಕೈಗೆ ತಗುಲಿವೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಮೃತದೇಹವನ್ನು ಮೊದಲು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯಲಾಗಿದ್ದು, ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ.
ವೈಯಕ್ತಿಕ ದ್ವೇಷವೇ ಕಾರಣವೇ?
ಗುಂಡಿನ ದಾಳಿಯ ಹಿಂದಿನ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ವೈಯಕ್ತಿಕ ದ್ವೇಷ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ನಡೆದ ತಕ್ಷಣ ಪಡುಬಿದ್ರೆ ಮತ್ತು ಶಿರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹರಿರಾಮ್ ಶಂಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದು, ಆರೋಪಿಗಳ ಬಂಧನಕ್ಕಾಗಿ ವ್ಯಾಪಕ ಬಲೆ ಬೀಸಲಾಗಿದೆ.
ಕೆಲ ದಿನಗಳ ಹಿಂದೆ ಅಷ್ಟೇ ಕುಂದಾಪುರದ ಬಾರ್ಕೂರು ಬಳಿ ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸ್ಥಳೀಯ ಉದ್ಯಮಿ ಐವನ್ ರಿಚರ್ಡ್ ಮೇಲೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ಆ ಪ್ರಕರಣದ ತನಿಖೆ ಇನ್ನೂ ಮುಂದುವರಿದಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆ ಘಟನೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಮುಖಂಡ ಹಾಗೂ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದು ಜಿಲ್ಲೆಯಲ್ಲಿ ಕಾನೂನು-ಸುವ್ಯವಸ್ಥೆ ಕುರಿತು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm