ಬ್ರೇಕಿಂಗ್ ನ್ಯೂಸ್
07-08-26 10:37 pm HK News Desk ಕ್ರೈಂ
ನವದೆಹಲಿ, ಆ.7: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮೂವರು ವಿಷಯ ತಜ್ಞರೇ ಲೀಕ್ ಮಾಡಿಸಿದ್ದಾರೆಂಬ ಅನುಮಾನ ವ್ಯಕ್ತವಾಗಿದ್ದು ಈ ಕುರಿತು ಸಿಬಿಐ ತನಿಖಾಧಿಕಾರಿಗಳು ಆರೋಪ ಪಟ್ಟಿಯಲ್ಲಿ ಗುರುತಿಸಿದ್ದಾರೆ.
ಸಿಬಿಐ ಆರೋಪಪಟ್ಟಿ ಪ್ರಕಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮೂವರು ವಿಷಯ ತಜ್ಞರಾದ ರಸಾಯನ ಶಾಸ್ತ್ರದ ಪಿ.ವಿ. ಕುಲಕರ್ಣಿ, ಭೌತಶಾಸ್ತ್ರದ ಮನೀಷಾ ಸಂಜಯ್ ಹವಾಲ್ದಾರ್ ಹಾಗೂ ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರದ ಮನೀಷಾ ಗುರುನಾಥ್ ಮಾಂಧರೆ ಅವರು NEET ಪ್ರಶ್ನೆಪತ್ರಿಕೆ ಸೋರಿಕೆಯ ಹಿಂದಿನ ಪ್ರಮುಖ ಮೂಲಗಳಾಗಿದ್ದರು ಎನ್ನಲಾಗಿದೆ. ಸಾರ್ವಜನಿಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಕುರಿತ ವಿಶೇಷ ತ್ವರಿತ ನ್ಯಾಯಾಲಯದ ಮುಂದೆ ಸಿಬಿಐ ವರದಿ ಸಲ್ಲಿಸಿದೆ.
ತನಿಖೆಯ ವೇಳೆ, ಈ ಮೂವರು ವಿಷಯ ತಜ್ಞರಿಗೆ ಅನುವಾದ ಮತ್ತು ಮರು ಅನುವಾದ ಸಂದರ್ಭದಲ್ಲಿ ಕರಡು ಕೆಲಸಕ್ಕಾಗಿ ಖಾಲಿ ಹಾಳೆಗಳನ್ನು ನೀಡಲಾಗಿತ್ತು. ಅದರಲ್ಲಿ ನಕಲು ಮಾಡಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಪ್ರಮುಖ ಆರೋಪಿ ಎಂದು ಹೇಳಲಾಗಿರುವ ಪಿ.ವಿ. ಕುಲಕರ್ಣಿ ಈ ಹಾಳೆಗಳನ್ನು ಬಳಸಿ ರಸಾಯನಶಾಸ್ತ್ರದ ಎಲ್ಲಾ 135 ಪ್ರಶ್ನೆಗಳನ್ನು ಚೀಟಿಗಳಲ್ಲಿ ಬರೆದುಕೊಂಡು, ಹೊರಗೆ ತೆಗೆದುಕೊಂಡು ಹೋಗಿದ್ದರು ಎಂದು ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ.
NTAಯ ಗೌಪ್ಯ ವಿಭಾಗಕ್ಕೆ ತಜ್ಞರು ಪ್ರವೇಶಿಸುವಾಗ ಅಥವಾ ಹೊರ ಬರುವಾಗ ಯಾವುದೇ ತಪಾಸಣೆ ಅಥವಾ ದೇಹ ತಪಾಸಣೆ ನಡೆಸಲಾಗುತ್ತಿರಲಿಲ್ಲ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ. ಕುಲಕರ್ಣಿ ಸುಲಭವಾದ ಪ್ರಶ್ನೆಗಳನ್ನು ನೆನಪಿಟ್ಟುಕೊಂಡು, ಹೋಟೆಲ್‌ಗೆ ಮರಳಿದ ಬಳಿಕ ಅವುಗಳನ್ನು ಬರೆದುಕೊಂಡಿದ್ದರು ಎಂದು ಅದು ತಿಳಿಸಿದೆ.
NTAಯ ಸಸ್ಯಶಾಸ್ತ್ರದ ಇಂಗ್ಲಿಷ್‌ನಿಂದ ಮರಾಠಿಗೆ ಅನುವಾದಕಿ ಹಾಗೂ ಪ್ರಾಣಿಶಾಸ್ತ್ರದ ಮರು ಅನುವಾದಕಿಯಾಗಿದ್ದ ಮನೀಷಾ ಮಾಂಧರೆ, ದಿನದ ಕೆಲಸ ಮುಗಿಸಿ ಹೋಟೆಲ್ ಕೊಠಡಿಗೆ ಮರಳಿದ ಬಳಿಕ NCERT ಪಠ್ಯಪುಸ್ತಕಗಳಲ್ಲಿನ ಸಂಬಂಧಿತ ಪ್ಯಾರಾಗಳನ್ನು ಗುರುತಿಸಿ ಲೀಕ್ ಆಗುವಂತೆ ಮಾಡಿದ್ದರು ಎಂದು ಆರೋಪಿಸಲಾಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm