ಬ್ರೇಕಿಂಗ್ ನ್ಯೂಸ್
10-08-26 08:49 pm HK News Staffer ಕ್ರೈಂ
ಬೆಂಗಳೂರು , ಆಗಸ್ಟ್ 10: ನಗರದ ಏರ್‌ಪೋರ್ಟ್ ಸಮೀಪದ ತಾಜ್ ಹೋಟೆಲ್‌ನಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಮೃತ ಬಾಲಕಿಯರನ್ನು ಶೇಕ್ ಜೆಹರಾ (5) ಮತ್ತು ಶೇಕ್ ಜೋಯಾ (10) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಇಮ್ರಾನ್ ಎಂದು ಗುರುತಿಸಲಾಗಿದ್ದು, ತಾಜ್ ಹೋಟೆಲ್‌ನ ನಾಲ್ಕನೇ ಮಹಡಿಯ ಕೊಠಡಿಯಲ್ಲಿ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮಕ್ಕಳನ್ನು ಹತ್ಯೆಗೈಯುವ ಉದ್ದೇಶದಿಂದಲೇ ಇಮ್ರಾನ್ ಮುಂಚಿತವಾಗಿ ಹೋಟೆಲ್‌ನಲ್ಲಿ ಕೊಠಡಿ ಕಾಯ್ದಿರಿಸಿದ್ದ ಎನ್ನಲಾಗಿದೆ. ಕೃತ್ಯದ ಬಳಿಕ ಡೆತ್‌ನೋಟ್ ಬರೆದಿಟ್ಟು, ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಡೆತ್‌ನೋಟ್‌ನಲ್ಲಿ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಉಲ್ಲೇಖಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಇಮ್ರಾನ್ ಮೂಲತಃ ಬೆಂಗಳೂರಿನ ನಾಗವಾರದ ನಿವಾಸಿಯಾಗಿದ್ದು, ಖಾಸಗಿ ಕ್ಯಾಬ್ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಏರ್‌ಪೋರ್ಟ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಹತ್ಯೆಗೆ ನಿಖರ ಕಾರಣವೇನು, ಡೆತ್‌ನೋಟ್‌ನಲ್ಲಿರುವ ಮಾಹಿತಿ ಎಷ್ಟರ ಮಟ್ಟಿಗೆ ಸತ್ಯ ಹಾಗೂ ಕೃತ್ಯದ ಹಿಂದಿನ ಸಂಪೂರ್ಣ ಹಿನ್ನೆಲೆ ಏನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm