ಬ್ರೇಕಿಂಗ್ ನ್ಯೂಸ್
11-08-26 05:28 pm HK News Staffer ಕ್ರೈಂ
ಕಾರ್ಕಳ, ಆ.11: ಫೇಸ್‌ಬುಕ್ ಜಾಹೀರಾತು ಮತ್ತು ವಾಟ್ಸ್‌ಆ್ಯಪ್ ಗ್ರೂಪ್‌ಗಳ ಮೂಲಕ ಶೇರ್ ಮಾರ್ಕೆಟ್ ಹಾಗೂ ಐಪಿಒ ಹೂಡಿಕೆಯಲ್ಲಿ ದುಪ್ಪಟ್ಟು ಲಾಭ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹32,68,000 ಹಣವನ್ನು ಪಡೆದು ವಂಚಿಸಿರುವ ಆಘಾತಕಾರಿ ಘಟನೆ ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಲಕ್ಷ್ಮಣ್ ಎಂಬವರಿಗೆ ಜುಲೈ 17 ರಂದು ಫೇಸ್‌ಬುಕ್‌ನಲ್ಲಿ ವೀಡಿಯೊ ಜಾಹೀರಾತೊಂದು ಬಂದಿತ್ತು. ಅದರಲ್ಲಿ ‘JB (Julius Baer VIP Group)’ ಹಾಗೂ ‘5paisa’ ಆ್ಯಪ್‌ಗಳ ಮೂಲಕ ಹಣ ಹೂಡಿಕೆ ಮಾಡಿದರೆ ಶೇರ್ ಮಾರ್ಕೆಟ್‌ನಲ್ಲಿ ದ್ವಿಗುಣ ಲಾಭ ಗಳಿಸಬಹುದು ಎಂದು ಭರವಸೆ ನೀಡಲಾಗಿತ್ತು. ವೀಡಿಯೊದಲ್ಲಿದ್ದ ಲಿಂಕ್ ಕ್ಲಿಕ್ ಮಾಡಿದಾಗ ಲಕ್ಷ್ಮಣ್ ಅವರು ‘JB (Julius Baer VIP Group)’ ಮತ್ತು ‘5paisa’ ಎಂಬ ಹೆಸರಿನ ವಾಟ್ಸ್‌ಆ್ಯಪ್ ಗ್ರೂಪ್‌ಗಳಿಗೆ ಜಾಯಿನ್ ಆಗಿದ್ದರು.
ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿದ್ದ ಅಪರಿಚಿತ ವ್ಯಕ್ತಿಗಳು ಹೆಚ್ಚಿನ ಲಾಭಾಂಶ ತಂದುಕೊಡುವ ಶೇರುಗಳು ಹಾಗೂ IPO ಗಳಲ್ಲಿ ಹೂಡಿಕೆ ಮಾಡುವಂತೆ ಪ್ರಚೋದಿಸಿದ್ದರು. ಅವರ ಮಾತು ನಂಬಿದ ಲಕ್ಷ್ಮಣ್ ಅವರು ಜುಲೈ 17 ರಿಂದ ಆಗಸ್ಟ್ 04, 2026 ರ ವರೆಗಿನ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು ₹32,68,000/- ಹಣವನ್ನು ಅಪರಿಚಿತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು.
ಹಣ ವರ್ಗಾವಣೆಯಾದ ಬಳಿಕ ಅಪರಿಚಿತ ವ್ಯಕ್ತಿಗಳು ಹೂಡಿಕೆ ಮಾಡಿದ ಅಸಲು ಹಣವನ್ನಾಗಲಿ ಅಥವಾ ಭರವಸೆ ನೀಡಿದ್ದ ಲಾಭಾಂಶವನ್ನಾಗಲಿ ನೀಡದೆ ನಂಬಿಸಿ ಮೋಸ ಮಾಡಿದ್ದಾರೆ. ಈ ಕುರಿತು ಸಂತ್ರಸ್ತ ಲಕ್ಷ್ಮಣ್ ನೀಡಿದ ದೂರಿನನ್ವಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm