ಬ್ರೇಕಿಂಗ್ ನ್ಯೂಸ್
14-08-26 10:22 am HK News Staffer ಕ್ರೈಂ
ಉಡುಪಿ, ಆ.14: ಅಧಿಕ ಬಡ್ಡಿ ವಿಧಿಸಿ ಸಾಲ ನೀಡಿ, ಕಂತು ಪಾವತಿಸದೇ ಇದ್ದುದಕ್ಕೆ ಕಿರುಕುಳ ನೀಡಿದ್ದಲ್ಲದೆ, ಬಲವಂತವಾಗಿ ದ್ವಿಚಕ್ರ ವಾಹನ ಕಸಿದು ಹಲ್ಲೆ ನಡೆಸಿದ ಆರೋಪದಲ್ಲಿ ಮಂಗಳೂರಿನ ಫೈನಾನ್ಸ್ ಸಂಸ್ಥೆಯ ಮೂವರು ಸಿಬ್ಬಂದಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕುಳಾಯಿ ನಿವಾಸಿ ಸಂದೀಪ್ ಶೆಟ್ಟಿ, ಕಾವೂರಿನ ವಿಜೀತ್ ಶೆಟ್ಟಿ ಹಾಗೂ ಮಳವೂರಿನ ಸಂಪತ್ ಬಂಧಿತ ಆರೋಪಿಗಳು.
ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜಾಲು ಪರಿಸರದಲ್ಲಿ ಈ ಫೈನಾನ್ಸ್ ಸಂಸ್ಥೆಯು ಅಧಿಕ ಬಡ್ಡಿ ದರದಲ್ಲಿ ಸಾಲ ನೀಡುತ್ತಿತ್ತು. ಸಾಲದ ಕಂತು ಬಾಕಿ ಉಳಿದಾಗ ಸಾರ್ವಜನಿಕರನ್ನು ಪೀಡಿಸುತ್ತಿದ್ದರೆಂದು ಆರೋಪಿಸಲಾಗಿದೆ. ಇತ್ತೀಚೆಗೆ ಸಾಲದ ಕಂತು ಬಾಕಿ ಇಟ್ಟ ಕಾರಣಕ್ಕೆ ಕುಂಜಾಲಿನ ಗಣೇಶ್ ಗಾಣಿಗ ಎಂಬವರ ಮೋಟಾರು ಸೈಕಲನ್ನು ಬಲವಂತವಾಗಿ ಕಸಿದುಕೊಂಡು ಹೋಗಿದ್ದರು. ಇದನ್ನು ಪ್ರಶ್ನಿಸಿದ ಜಾಮೀನುದಾರ ರಾಜೇಶ್ ನಾಯ್ಕ್ ಅವರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು.
ರಾಜೇಶ್ ನಾಯ್ಕ್ ನೀಡಿದ ದೂರಿನನ್ವಯ ‘ಸಾಲಕ್ಕೆ ಅಧಿಕ ಬಡ್ಡಿ ವಿಧಿಸುವುದನ್ನು ನಿಷೇಧಿಸುವ ಕಾಯ್ದೆ-2004’ ರ ಕಲಂ 3 ಮತ್ತು 4ರ ಅಡಿಯಲ್ಲಿ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬೆನ್ನತ್ತಿದ ಪೊಲೀಸರು ಆರೋಪಿಗಳಾದ ಸಂದೀಪ್ ಶೆಟ್ಟಿ ಹಾಗೂ ವಿಜೀತ್ ಶೆಟ್ಟಿಯನ್ನು ಆಗಸ್ಟ್ 6ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ ಸಂಪತ್ನನ್ನು ಆಗಸ್ಟ್ 13ರಂದು ಬಂಧಿಸಲಾಗಿದೆ. ಆರೋಪಿಗಳು ಬಲವಂತವಾಗಿ ಕಸಿದುಕೊಂಡಿದ್ದ ಮೋಟಾರು ಸೈಕಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm