ಬ್ರೇಕಿಂಗ್ ನ್ಯೂಸ್
15-08-26 06:11 pm HK News Staffer ಕ್ರೈಂ
ಚಾಮರಾಜನಗರ, ಆ.15: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹನೂರು ತಾಲೂಕಿನ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಮತ್ತು ಶಂಕಿತ ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆ ಬಳಿಕ ಆಕ್ರೋಶಗೊಂಡ ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರು ಅರಣ್ಯ ಇಲಾಖೆಯ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದು, ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಬೇಟೆಗೆ ತೆರಳಿದ್ದ ಆರೋಪ ; ಅರಣ್ಯ ಸಿಬ್ಬಂದಿಯಿಂದ ಗುಂಡಿನ ದಾಳಿ
ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶಕ್ಕೆ ಮೂವರು ವ್ಯಕ್ತಿಗಳು ಅಕ್ರಮವಾಗಿ ಪ್ರವೇಶಿಸಿ ಕಾಡುಪ್ರಾಣಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಬೇರ್ಪಡಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಗಸ್ತಿನಲ್ಲಿದ್ದ ಕಾವೇರಿ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಈ ವೇಳೆ ಅರಣ್ಯ ಸಿಬ್ಬಂದಿ ಶಸ್ತ್ರಾಸ್ತ್ರಗಳನ್ನು ಕೆಳಗಿಟ್ಟು ಶರಣಾಗುವಂತೆ ಸೂಚಿಸಿದ್ದರು ಎಂದು ಹೇಳಲಾಗಿದೆ. ಆದರೆ, ಮೂವರು ಅರಣ್ಯ ಸಿಬ್ಬಂದಿ ಮೇಲೆಯೇ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ಅರಣ್ಯ ಸಿಬ್ಬಂದಿ ನಡೆಸಿದ ಪ್ರತಿದಾಳಿ ಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಗುಂಡಿನ ಚಕಮಕಿಯಲ್ಲಿ ಮೃತಪಟ್ಟವರನ್ನು ಹನೂರು ತಾಲೂಕಿನ ತೋಮಿಯರ್ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲಾಗಿದೆ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಮೃತರ ಸಂಬಂಧಿಕರು ಹಾಗೂ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಬಳಿಕ ಹನೂರು ತಾಲೂಕಿನ ಶಾಗ್ಯ DRFO ಕಚೇರಿಗೆ ನುಗ್ಗಿದ ಗುಂಪು ಕಚೇರಿಯ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಅಸಮಾಧಾನ ವ್ಯಕ್ತಪಡಿಸಿದೆ. ಘಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

‘ಅವರು ಬೇಟೆಗಾರರಲ್ಲ, ಕೃಷಿಕರು’ ಎಂದ ಕುಟುಂಬಸ್ಥರು;
ಮೃತರ ಕುಟುಂಬಸ್ಥರು ಅರಣ್ಯ ಇಲಾಖೆಯ ಕ್ರಮವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. “ದನ ಮೇಯಿಸಲು ಹೋಗಿದ್ದರು. ಪ್ರಾಣಿಗಳನ್ನು ಬೇಟೆ ಮಾಡಿದ್ದಾರೆ ಎಂಬುದಕ್ಕೆ ಯಾವ ಸಾಕ್ಷಿ ಇದೆ? ಅವರು ಕೃಷಿಕರು. ಒಂದು ವೇಳೆ ಬೇಟೆಗೆ ಹೋಗಿದ್ದರೂ ಅವರನ್ನು ಬಂಧಿಸಬಹುದಿತ್ತು. ಗುಂಡಿಕ್ಕುವ ಅಗತ್ಯವೇನಿತ್ತು?” ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತರಬೇತಿಯಲ್ಲಿರುವ ಗಾರ್ಡ್ಗಳಿಂದ ಈ ಕಾರ್ಯ ನಡೆದಿದೆ ಎಂದು ಆರೋಪಿಸಿರುವ ಕುಟುಂಬಸ್ಥರು, ಘಟನೆಯ ಕುರಿತು ಸಂಪೂರ್ಣ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಮೈಸೂರಿಗೆ ಮೃತದೇಹ ರವಾನೆ
ಮೃತ ಮೂವರ ಶವಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕುಟುಂಬ ಸದಸ್ಯರು ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಒಂದೆಡೆ ಅರಣ್ಯ ಇಲಾಖೆ, ಮೂವರು ಶಂಕಿತರು ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಲಾಗಿದೆ ಎಂದು ಹೇಳುತ್ತಿದ್ದರೆ, ಮತ್ತೊಂದೆಡೆ ಮೃತರ ಕುಟುಂಬಸ್ಥರು ಅವರು ಕೃಷಿಕರಾಗಿದ್ದು, ಬೇಟೆಗೆ ತೆರಳಿದ್ದರು ಎಂಬ ಆರೋಪಕ್ಕೆ ಸಾಕ್ಷ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ. ಹೀಗಾಗಿ ಗುಂಡಿನ ಚಕಮಕಿ ನಡೆದ ನಿಖರ ಸಂದರ್ಭ, ಗುಂಡಿನ ದಾಳಿ ಮೊದಲು ಯಾರಿಂದ ನಡೆಯಿತು, ಮೃತರು ನಿಜವಾಗಿಯೂ ಬೇಟೆಯಲ್ಲಿ ತೊಡಗಿದ್ದರೇ ಹಾಗೂ ಅರಣ್ಯ ಸಿಬ್ಬಂದಿಯ ಕ್ರಮ ಕಾನೂನುಬದ್ಧವಾಗಿತ್ತೇ ಎಂಬ ಅಂಶಗಳು ತನಿಖೆಯಿಂದ ಸ್ಪಷ್ಟವಾಗಬೇಕಿದೆ.
ಘಟನೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಶನಿವಾರ ಅವರು ಬೆಂಗಳೂರಿನಲ್ಲಿ ಮಾತನಾಡಿ, ಚಾಮರಾಜನಗರ ಅರಣ್ಯದಲ್ಲಿ ಎನ್ ಕೌಂಟರ್ ನಡೆದಿದೆಎಂಬ ಬಗ್ಗೆ ನನಗೆ ಬೆಳಗ್ಗೆ ಐದು ಗಂಟೆಗೆ ಮಾಹಿತಿ ತಲುಪಿದೆ. ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಿದ್ದೇವೆ. ತನಿಖೆಯಲ್ಲಿ ಏನು ವಾಸ್ತವಾಂಶ ಎಂಬುವುದು ಪತ್ತೆಯಾಗಲಿದೆ ಎಂದರು.
ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ತನಿಖೆಗೆ ನೀಡಲಾಗಿದೆ. ಮ್ಯಾಜಿಸ್ಟ್ರೇಟ್ ತನಿಖೆ ಬಳಿಕ ಎಲ್ಲ ಮಾಹಿತಿಗಳು ತಿಳಿದು ಬರಲಿದೆ ಎಂದು ಅವರು ಹೇಳಿದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am