ಬ್ರೇಕಿಂಗ್ ನ್ಯೂಸ್
17-08-26 09:39 pm HK News Desk ಕ್ರೈಂ
ಬಂಟ್ವಾಳ, ಆ.17 ಮೊಮ್ಮಗನೇ ತನ್ನ ಅಜ್ಜಿಯ ಕೈಯಲ್ಲಿದ್ದ ಎರಡು ಚಿನ್ನದ ಬಳೆಗಳನ್ನು ಮುಖಕ್ಕೆ ಬಟ್ಟೆ ಸುತ್ತಿಕೊಂಡು ಎಳೆದೊಯ್ದು ಸುಲಿಗೆ ಮಾಡಿ ಪೊಲೀಸರ ತನಿಖೆಯಲ್ಲಿ ಸಿಕ್ಕಿದ್ದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ತೆಂಕಕಜೆಕಾರು ಎಂಬಲ್ಲಿ ನಡೆದಿದೆ.
ಗ್ರಾಮದ ಉದ್ದದ ಗುಡ್ಡೆ ಎಂಬಲ್ಲಿ ಪ್ರಕರಣದ ಪಿರ್ಯಾದಿದಾರರಾದ ಸಾದಿಕ್ ಎಂಬವರ ತಾಯಿ ಅವ್ವಮ್ಮ (82) ಎಂಬವರು ಆಗಸ್ಟ್ 14ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಯಾರೋ ಅಪರಿಚಿತ ವ್ಯಕ್ತಿಯೋರ್ವ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಮನೆಯೊಳಗೆ ಬಂದು ಪಿರ್ಯಾದಿದಾರರ ತಾಯಿಯ ಎರಡು ಕೈಯಲ್ಲಿದ್ದ ಸುಮಾರು 5,00,000/- ಮೌಲ್ಯದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲತ್ಕಾರವಾಗಿ ಎಳೆದುಕೊಂಡು ಹೋಗಿದ್ದು, ಈ ವೇಳೆ ಸದ್ರಿಯವರ ಕೈಗೆ ರಕ್ತಗಾಯವಾಗಿರುವ ಬಗ್ಗೆ ಸಾದಿಕ್ ಎಂಬವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ: 70/2026, ಕಲಂ: 309(6) BNS- 2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆಗಸ್ಟ್ 16 ರಂದು ಪ್ರಕರಣದ ಆಪಾದಿತನಾದ ಹಾಗೂ ಸದ್ರಿ ಅವ್ವಮ್ಮ (82) ಎಂಬವರ ಮೊಮ್ಮಗನಾದ ಬಂಟ್ವಾಳ ತೆಂಕಕಜೆಕಾರು ನಿವಾಸಿ ಶಬೀರ್ (33) ಎಂಬಾತನನ್ನು ಬಂಧಿಸಿ ಆತನಿಂದ ಎರಡು ಚಿನ್ನದ ಬಳೆಗಳನ್ನು ಸ್ವಾಧೀನಪಡಿಸಲಾಗಿದೆ.
ಪತ್ತೆ ಕಾರ್ಯದಲ್ಲಿ ಬೆಳ್ತಂಗಡಿ ಪೊಲೀಸ್ ಉಪಾಧೀಕ್ಷಕ ಶ್ರೀಮತಿ ರೋಹಿಣಿ ಸಿ.ಕೆ ಅವರ ನೇತೃತ್ವದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿ.ಪಿ.ಐ ರವಿ ಬಿ.ಎಸ್, ಪುಂಜಾಲಕಟ್ಟೆ ಠಾಣಾ ಪಿ.ಎಸ್.ಐ ರಾಜೇಶ್ ಕೆ.ವಿ, ಸಿಬ್ಬಂದಿಗಳಾದ ಎಎಸ್ಐ ಬೆನ್ನಿಚ್ಚನ್, ಪ್ರವೀಣ್ ಮೂರುಗೋಳಿ, ರಾಜೇಶ್, ವಿಜಯ್ ಕುಮಾರ್, ರಾಹುಲ್ ರಾವ್, ನಾಗರಾಜ್, ರಜಿತ್, ಬಸವರಾಜ್, ಸತೀಶ್, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಕರ್ತವ್ಯ ನಿರ್ವಹಿಸಿರುತ್ತಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm