ಬ್ರೇಕಿಂಗ್ ನ್ಯೂಸ್
18-08-26 03:00 pm HK News Staffer ಕ್ರೈಂ
ಬೆಂಗಳೂರು, ಆ.18: ಚಿಕ್ಕಬಾಣಾವರದಲ್ಲಿ ಗಂಡ ಹಾಗೂ ಮಗುವಿನ ಸಂಶಯಾಸ್ಪದ ಸಾವಿನ ಪ್ರಕರಣದಲ್ಲಿ ಪೊಲೀಸರು ಪತ್ನಿಯನ್ನೇ ಅರೆಸ್ಟ್ ಮಾಡಿದ್ದಾರೆ. ತನಿಖೆ ವೇಳೆ ಪ್ರಿಯಕರ ವಿನಯ್ ಜೊತೆ ಸೇರಿ ಗಂಡ ಹಾಗೂ ಮಗನನ್ನು ತಾನೇ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಪತ್ನಿ ಹರಿಣಿ ಬಾಯಿಬಿಟ್ಟಿದ್ದಾಳೆ.
ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರ ಸಮೀಪದ ಗುಡ್ಡೆ ಬಸವಪುರದಲ್ಲಿ ಅಭಿನಂದನ್ (33) ಹಾಗೂ ಆತನ 5 ವರ್ಷದ ಪುತ್ರ ಯದುವೀರ್ ಸೋಮವಾರ ಬೆಳಗ್ಗೆ ಅವರದೇ ಮನೆಯಲ್ಲಿ ಅನುಮಾನಾಸ್ಪದ ರೀತಿ ಮೃತಪಟ್ಟಿದ್ದು ಪತ್ತೆಯಾಗಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದಾಗ ಮೇಲ್ನೋಟಕ್ಕೆ ಕೊಲೆ ಎಂಬ ಶಂಕೆ ವ್ಯಕ್ತವಾಗಿತ್ತು. ಘಟನೆ ಸಂಬಂಧ ಮೃತನ ಪತ್ನಿ ಹರಿಣಿಯನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಕೊಲೆ ವಿಚಾರವನ್ನು ಹೇಳಿಕೊಂಡಿದ್ದಾಳೆ.
ಆಗಸ್ಟ್ 16ರ ಭಾನುವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಹರಿಣಿ ತನ್ನ ಪ್ರಿಯಕರ ವಿನಯ್‌ನನ್ನು ಮನೆಗೆ ಕರೆಸಿಕೊಂಡಿದ್ದಳು. ಇದೇ ವೇಳೆ ಹರಿಣಿ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಿದ್ದು ಬಳಿಕ ಇಬ್ಬರೂ ಸೇರಿ ಮನೆಯಲ್ಲಿದ್ದ ದೊಡ್ಡ ಸೌಟ್‌ನಿಂದ ಅಭಿನಂದನ್ ತಲೆಗೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಈ ವೇಳೆ ಪುತ್ರ ಯದುವೀರ್ ಘಟನೆಯನ್ನು ನೋಡಿದ್ದು, ಮುಂದೆ ತಮಗೆ ತೊಂದರೆಯಾಗಬಹುದು ಎಂದು ಭಾವಿಸಿದ ಹರಿಣಿ ಹಾಗೂ ವಿನಯ್, ಮಗುವನ್ನು ತಲೆದಿಂಬಿನಲ್ಲಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ.
ಮನೆಯೊಳಗೆ ರಕ್ತದ ಕಲೆಗಳಿದ್ದುದರಿಂದ ಸಾಕ್ಷ್ಯ ನಾಶಪಡಿಸಲು ಹರಿಣಿ ಎಲ್ಲ ರಕ್ತದ ಕಲೆಗಳನ್ನು ತೊಳೆದಿದ್ದಾಳೆ. ಅಭಿನಂದನ್ ಮೈಮೇಲಿದ್ದ ರಕ್ತದ ಕಲೆಗಳು ಬಿದ್ದಿದ್ದ ಬಟ್ಟೆಗಳನ್ನು ಬದಲಿಸಿ, ಅವುಗಳನ್ನು ರಾತ್ರೋರಾತ್ರಿ ತೊಳೆದು ಹಾಕಿದ್ದಳು. ನಂತರ ಮಗುವನ್ನು ಮೇಲೆ ಮಲಗಿಸಿ ಉಸಿರುಗಟ್ಟಿಸಿ ಸಾಯಿಸಿದ್ದಾನೆ ಎಂಬಂತೆ ಬಿಂಬಿಸಲು ಯತ್ನಿಸಿದ್ದಳು. ಸೋಮವಾರ ಬೆಳಗ್ಗೆ ಪೊಲೀಸರು ಸ್ಥಳಕ್ಕೆ ತೆರಳಿದಾಗ, ತಂದೆ, ಮಗು ಮಾತ್ರ ಬೆಡ್ ರೂಮಿನಲ್ಲಿ ಸಾವನ್ನಪ್ಪಿದ್ದು ಕಂಡುಬಂದಿತ್ತು.
ಮೊದಲೇ ಯೋಜಿಸಿದಂತೆ, ಕೊಲೆ ನಡೆಸಿದ ಬಳಿಕ ವಿನಯ್ ಅಲ್ಲಿಂದ ಪರಾರಿಯಾಗಿದ್ದ. ಪತ್ನಿ ಹರಿಣಿ ಮಾತ್ರ ತಂದೆಯೇ ಮಗನನ್ನು ಕೊಂದು ಸಾವನ್ನಪ್ಪಿದ್ದಾನೆಂದು ಬಿಂಬಿಸಲು ಯತ್ನಿಸಿದ್ದಳು. ಹರಿಣಿ ಮೂರು ತಿಂಗಳ ಹಿಂದೆ ಪ್ರಿಯಕರನ ಜೊತೆಗೆ ಪರಾರಿಯಾಗಿದ್ದಳು. ಆನಂತರ, ಸಂಬಂಧಿಕರು ಸೇರಿ ಪತಿ- ಪತ್ನಿಯನ್ನು ಸಮಾಧಾನಪಡಿಸಿ ಮತ್ತೆ ಒಂದು ಮಾಡಿದ್ದರು. ಗಂಡ ಅಭಿನಂದನ್, ಪತ್ನಿಯನ್ನು ಸ್ವೀಕರಿಸಿ ಮನೆಯಲ್ಲಿಯೇ ಜೊತೆಗಿದ್ದರು. ಆದರೆ ಪ್ರಿಯಕರ ವಿನಯ್ ಆಕೆಯೊಂದಿಗೆ ಸೇರಿಕೊಂಡು ಕಿರಾತಕ ಬುದ್ಧಿ ತೋರಿಸಿದ್ದಾನೆ. ಗಂಡ ಮತ್ತು ಮಗುವನ್ನು ಕೊಲ್ಲಿಸಿ ತಾವು ಸುಖವಾಗಿರಬಹುದು ಎಂದು ಪ್ಲಾನ್ ಹಾಕಿದ್ದು ಈಗ ಜೈಲು ಕಂಬಿ ಎಣಿಸುವಂತೆ ಮಾಡಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm