ಬ್ರೇಕಿಂಗ್ ನ್ಯೂಸ್
18-08-26 10:06 pm HK News Staffer ಕ್ರೈಂ
ವಿಜಯಪುರ, ಆ 18: ಆಸ್ತಿ ವಿವಾದ ಹಾಗೂ ವಿವಾಹೇತರ ಸಂಬಂಧ ವಿರೋಧ ವ್ಯಕ್ತಪಡಿಸಿದ ತಂದೆಯನ್ನು ಸ್ವಂತ ಪುತ್ರಿಯೇ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಇಂಡಿ ತಾಲೂಕಿನ ಚೌಡಿಹಾಳ್ ರಸ್ತೆಯ ಪೂಜಾರಿ ವಸ್ತಿ ತೋಟದ ಬಳಿ ನಡೆದಿದೆ. ನಿವೃತ್ತ ಶಿಕ್ಷಕರಾಗಿರುವ ಸಿದ್ದಪ್ಪ ಅಂಜುಟಗಿ(62) ಕೊಲೆಯಾದವರು. ಘಟನೆ ಸಂಬಂಧ ಪುತ್ರಿ ಪ್ರಿಯಾಂಕಾ, ಆಕೆಯ ಪ್ರಿಯಕರ ಸಂತೋಷನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಗುರುರಾಜ ಬಿರಾದಾರ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಚೌಡಿಹಾಳ ರಸ್ತೆಯಲ್ಲಿ ಸಿದ್ದಪ್ಪ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಮೃತ ಸಿದ್ದಪ್ಪ ಅವರ ಹಿರಿಯ ಪುತ್ರಿ ನಿಖಿತಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದಾಗ ಪುತ್ರಿಯೇ ತನ್ನ ಪ್ರಿಯಕರನ ಜೊತೆ ಹತ್ಯೆ ಮಾಡಿರುವ ವಿಷಯ ಬಯಲಾಗಿದೆ.
ಕಳೆದ ಎರಡು ವರ್ಷಗಳ ಹಿಂದೆ ಸಿದ್ದಪ್ಪ ನಿವೃತ್ತಿಯಾಗಿದ್ದರು. ಈ ವೇಳೆ ಅವರಿಗೆ ನಿವೃತ್ತಿ ಹಣ ಬಂದಿತ್ತು. ಇದರ ಜೊತೆಗೆ ಊರಲ್ಲಿ ಸ್ವಲ್ಪ ಆಸ್ತಿ ಇತ್ತು. ಈ ಆಸ್ತಿ ವಿಚಾರಕ್ಕೆ ತಂದೆ, ಮಗಳ ನಡುವೆ ಗಲಾಟೆ ನಡೆಯುತ್ತಿತ್ತು. ಪ್ರಿಯಾಂಕಾ ಪತಿ ಸುರೇಶ ಮಸಳಿ ಕೊರೊನಾ ಸಾಂಕ್ರಾಮಿಕದ ವೇಳೆ ಮೃತಪಟ್ಟಿದ್ದರು. ಇದರಿಂದ ಕೆಲಕಾಲ ವಿಜಯಪುರದಲ್ಲಿ ವಾಸವಿದ್ದ ಪ್ರಿಯಾಂಕಾಗೆ ಆಟೋ ಚಾಲಕ ಸಂತೋಷ ಸಿಂಧೆ ಜೊತೆಗೆ ಸಂಬಂಧ ಬೆಳೆದಿತ್ತು. ಈ ಅಕ್ರಮ ಸಂಬಂಧಕ್ಕೆ ತಂದೆ ವಿರೋಧ ವ್ಯಕ್ತಪಡಿಸಿ, ಆಸ್ತಿಯಲ್ಲಿ ಪಾಲು ನೀಡೋದಿಲ್ಲ ಎಂದಿದ್ದರು. ಇದು ಪ್ರಿಯಾಂಕಾಳ ಕೋಪಕ್ಕೆ ಕಾರಣವಾಗಿತ್ತು. ಆಸ್ತಿ ವಿಚಾರದಲ್ಲಿ ತಂದೆಯೊಂದಿಗೆ ಆಗಸ್ಟ್ 15 ರಂದು ಪ್ರಿಯಾಂಕಾ ಗಲಾಟೆ ಮಾಡಿದ್ದಾಳೆ. ಗಲಾಟೆ ವಿಕೋಪಕ್ಕೆ ಹೋಗಿದೆ. ಈ ವೇಳೆ ಪ್ರಿಯಾಂಕಾ ತನ್ನ ಪ್ರಿಯಕರ ಸಂತೋಷನಿಗೆ ಮನೆಗೆ ಬರಲು ಹೇಳಿದ್ದಾಳೆ. ರಾತ್ರಿ ಪ್ರಿಯಾಂಕಾ ಮನೆಗೆ ಹೋದ ಸಂತೋಷ ಹಾಗೂ ಆತನ ಸ್ನೇಹಿತ ಮೊದಲು ಸಿದ್ದಪ್ಪನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ದೊಡ್ಡ ಕಲ್ಲಿನಿಂದ ಜಜ್ಜಿದ್ದಾರೆ. ನಂತರ ಮೃತದೇಹವನ್ನು ರಸ್ತೆ ಪಕ್ಕದಲ್ಲಿ ಎಸೆದು ಪರಾರಿಯಾಗಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm