ಬ್ರೇಕಿಂಗ್ ನ್ಯೂಸ್
20-08-26 05:33 pm HK News Staffer ಕ್ರೈಂ
ಮಂಗಳೂರು, ಆ.20: ಲೈನ್ ಸೇಲ್ ಸಂಗ್ರಹದ ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಹಿಂಬದಿಯಿಂದ ಬೈಕಿನಲ್ಲಿ ಬಂದ ಇಬ್ಬರು ಆಗಂತುಕರು ಡಿಕ್ಕಿ ಹೊಡೆಸಿ ಕಣ್ಣಿಗೆ ಮೆಣಸಿನ ಪುಡಿ ಎರಚಿ ಎಂಟೂವರೆ ಲಕ್ಷ ರೂ. ದರೋಡೆ ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಣಿನಾಲ್ಕೂರು ಎಂಬಲ್ಲಿ ನಡೆದಿದೆ.
ಮಂಗಳೂರಿನ ಪಡೀಲ್ - ಕಣ್ಣೂರಿನಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಎಂಬವರು, ಸದ್ರಿ ಸಂಸ್ಥೆಯ ವ್ಯವಹಾರದ ಹಣವನ್ನು ವಿವಿಧ ಅಂಗಡಿಗಳಿಂದ ಸಂಗ್ರಹಿಸಿಕೊಂಡು ಬರುತ್ತಿದ್ದಾಗ ಇಂದು ಮಧ್ಯಾಹ್ನ ದರೋಡೆ ನಡೆಸಲಾಗಿದೆ. ಪಡೀಲಿನಲ್ಲಿ ಬೃಹತ್ ಹೋಲ್ ಸೇಲ್ ಅಂಗಡಿಯಿದ್ದು ಜಿಲ್ಲೆಯ ವಿವಿಧ ಕಡೆಗಳಿಗೆ ವಾಹನದಲ್ಲಿ ಸಾಮಗ್ರಿಗಳನ್ನು ಪೂರೈಸಲಾಗುತ್ತದೆ. ಆನಂತರ, ವಾರದ ಬಳಿಕ ಮಯ್ಯದಿ ಹಣದ ಸಂಗ್ರಹಕ್ಕಾಗಿ ಬೈಕಿನಲ್ಲಿ ಬರುತ್ತಿದ್ದರು.
ಗುರುವಾರ ಬೈಕ್ ನಲ್ಲಿ ತೆರಳಿದ್ದು, ಹಲವು ಅಂಗಡಿಗಳಿಂದ ನಗದು ಹಣವನ್ನು ಸಂಗ್ರಹಿಸಿ, ಬಂಟ್ವಾಳ ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಬೈಕ್ ನಲ್ಲಿ ಬರುತ್ತಿದ್ದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಂಟ್ವಾಳ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬಲ್ಲಿ ತಲುಪಿದಾಗ, ಎರಡು ಬೈಕ್ ನಲ್ಲಿ ಬಂದ ನಾಲ್ಕು ಜನ ಅಪರಿಚಿತರು, ಮಯ್ಯದಿ ಅವರಿಗೆ ತಲವಾರು ತೋರಿಸಿ, ಬೆದರಿಸಿ ಅವರ ಬಳಿಯಿದ್ದ 8,52,000 ರೂ. ನಗದು ಹಣವನ್ನು ಸುಲಿಗೆ ನಡೆಸಿ ಪರಾರಿಯಾಗಿದ್ದಾರೆ.



ನಗದು ರೂಪದ ಹಣವಲ್ಲದೆ, ಕೆಲವು ಕಡೆ ಚೆಕ್, ಡಿಡಿಗಳನ್ನು ನೀಡುತ್ತಾರೆ. ಎಲ್ಲವನ್ನೂ ಬ್ಯಾಗಿನಲ್ಲಿ ಕಟ್ಟಿಕೊಂಡು ಬರುವುದು ರೂಢಿಯಾಗಿತ್ತು. ಮಯ್ಯದಿ ಇಂದು ಮಧ್ಯಾಹ್ನ ಮಣಿ ನಾಲ್ಕೂರು ಗ್ರಾಮದಿಂದ ಮಣಿಹಳ್ಳಕ್ಕೆ ಬರುವ ನಿರ್ಜನ ಪ್ರದೇಶದಲ್ಲಿ ಬೈಕಿನಲ್ಲಿ ಬಂದವರು ಹಿಂದಿನಿಂದ ಡಿಕ್ಕಿ ಹೊಡೆಸಿದ್ದಾರೆ. ಈ ವೇಳೆ, ಮತ್ತೊಂದು ಬೈಕಿನಲ್ಲಿದ್ದವರು ಮಯ್ಯದಿ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕೈಯಲ್ಲಿದ್ದ ಹಣದ ಚೀಲವನ್ನು ಎಗರಿಸಿ ಪರಾರಿಯಾಗಿದ್ದಾರೆ. ನಗದು ಹಣವಲ್ಲದೆ, ಎಷ್ಟು ಮೊತ್ತದ ಚೆಕ್, ಡಿಡಿಗಳಿದ್ದವು ಎಂಬ ಬಗ್ಗೆ ಮಾಹಿತಿ ಗೊತ್ತಾಗಿಲ್ಲ. ಹಣ ಹಿಡಿದುಕೊಂಡು ಬರುತ್ತಿದ್ದ ಇವರ ಬಗ್ಗೆ ತಿಳಿದವರೇ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm