ಬ್ರೇಕಿಂಗ್ ನ್ಯೂಸ್
22-08-26 12:43 pm HK News Staffer ಕ್ರೈಂ
ಬೆಳ್ತಂಗಡಿ, ಆ.21: ಒಂಬತ್ತನೇ ಕ್ಲಾಸ್ ಕಲಿಯುತ್ತಿರುವ 14 ವರ್ಷದ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಹೆತ್ತವರನ್ನು ಕೊಲ್ಲುತ್ತೇನೆಂದು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಆಟೋ ರಿಕ್ಷಾ ಚಾಲಕ ಜಮಾಲುದ್ದೀನ್ ಎಂಬಾತನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.
ವೇಣೂರು ನಿವಾಸಿ ಆರೋಪಿ ಜಮಾಲುದ್ದೀನ್ ತನ್ನ ಆಟೋ ರಿಕ್ಷಾದಲ್ಲಿ 14 ವರ್ಷದ ಬಾಲಕಿಯನ್ನು ಕಳೆದ ಕೆಲವು ತಿಂಗಳುಗಳಿಂದ ಶಾಲೆಗೆ ಕರೆದೊಯ್ಯುತ್ತಿದ್ದ. ಈ ವೇಳೆ ಆಕೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪಿಯನ್ನು ಬಾಲಕಿ ವಿರೋಧಿಸಿದಾಗ, ಜೀವ ಬೆದರಿಕೆ ಒಡ್ಡುತ್ತಿದ್ದ. ಇದರಿಂದ ಭೀತಿಗೆೊಳಗಾಗಿದ್ದ ಬಾಲಕಿ ಈ ವಿಷಯವನ್ನು ಯಾರಿಗೂ ತಿಳಿಸಿರಲಿಲ್ಲ.
ಇತ್ತೀಚೆಗೆ ಆಗಸ್ಟ್ 13ರಂದು ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಮನೆಗೆ ಅಕ್ರಮವಾಗಿ ನುಗ್ಗಿದ ಆರೋಪಿ ಜಮಾಲುದ್ದೀನ್, ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಸಂತ್ರಸ್ತ ಬಾಲಕಿ ಆಗಸ್ಟ್ 15ರಂದು ನೀಡಿದ ದೂರಿನ ಮೇರೆಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS 2023) ಕಲಂ 75(2), 64(1), 65(1), 351(3) ಹಾಗೂ ಪೋಕ್ಸೋ ಕಾಯ್ದೆ (POCSO Act 2012) ಕಲಂ 4(2), 8, 12 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm