ಬ್ರೇಕಿಂಗ್ ನ್ಯೂಸ್
24-08-26 02:35 pm HK News Staffer ಕ್ರೈಂ
ಚಿಕ್ಕಮಗಳೂರು, ಆ.24: ಆಗಸ್ಟ್ 26 ರಂದು ನಡೆಯಲಿರುವ ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಬೃಹತ್ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಿದ್ದಲ್ಲದೆ, ಪಾಕಿಸ್ತಾನ ಪರವಾದ ಮುಜಾಹಿದ್ ಗುಣಗಾನದ ವಿಡಿಯೋ ಹಾಕಿ ಯುವಕರು ಕುಣಿದಿದ್ದು ರೀಲ್ಸ್ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಟಿಪ್ಪು ರೀತಿಯ ಕಟೌಟ್ ಹಾಕಿ ಪಾಕ್ ಸೇನೆಯ ಮುಜಾಹಿದ್ ಹಾಡು ಬಳಸಿ ರೀಲ್ಸ್ ಮಾಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮುಸ್ಲಿಂ ಯುವಕರು ವಿಡಿಯೋ ಹಂಚಿಕೊಂಡಿದ್ದು ಇನ್ನೊಂದು ಕೋಮನ್ನು ಅಣಕಿಸುವ ಯತ್ನ ಮಾಡಿದ್ದಾರೆ.
ಟಿಪ್ಪು ಚಿತ್ರದ ಜೊತೆಗೆ ಪಾಕಿಸ್ತಾನದ ಮುಜಾಹಿದ್ ಸಂಬಂಧಿಸಿದ ಹಾಡನ್ನು ಬಳಸಿರೋದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಧನರಾಜ್ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಸ್ವಯಂ ದೂರು ದಾಖಲಿಸಿದ್ದಾರೆ.
ಕೋಮು ಸೌಹಾರ್ದ ಕದಡುವ ರೀತಿ ಹಾಡು ಬಳಕೆ ಮಾಡಿ, ಧಾರ್ಮಿಕ ನಂಬಿಕೆಗೆ ಅಪಮಾನ ಮಾಡಲು ಯತ್ನಿಸಿದ್ದಾರೆ. ಪಾಕಿಸ್ತಾನದ ಸೈನಿಕರು ಎಂದು ಇರುವ ಹಾಡನ್ನ ಬಳಸಿದ್ದು ಉದ್ದೇಶಪೂರ್ವಕ ದ್ವೇಷ ಹರಡುವ ಇಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪಿಎಸ್ಐ ದೂರಿನಂತೆ ಪ್ರಕರಣ ದಾಖಲಾಗಿದೆ.
ಕೋಮು ಪ್ರಚೋದಕ ಕೃತ್ಯ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಇನ್ಸ್ಟಾ ಪೇಜ್ ವಿರುದ್ಧ ದೇಶ ವಿರೋಧಿ ಕೃತ್ಯ ಹಾಗೂ ಕೋಮು ಪ್ರಚೋದನೆ (BNS 196, 299) ಅಡಿಯಲ್ಲಿ ಸುಮೋಟೋ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆಯೂ ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಇಂತಹದ್ದೇ ಕೃತ್ಯ ಕೋಮು ದ್ವೇಷದ ಅಹಿತಕರ ಘಟನೆಗಳಿಗೆ ಕಾರಣವಾಗಿದ್ದವು.
ಚಿಕ್ಕಮಗಳೂರಿನಲ್ಲಿ ದೇಶವಿರೋಧಿ ಪ್ರಚೋದನೆ ನಡೆಯುತ್ತಿದ್ದರೂ ಕಾಂಗ್ರೆಸ್ ಸರ್ಕಾರ ನಿದ್ದೆಯಲ್ಲಿದೆಯೇ?
— Dr. Ravi C. T 🇮🇳 ಡಾ. ರವಿ ಸಿ. ಟಿ (@CTRavi_BJP) August 24, 2026
ಟಿಪ್ಪು ನಗರದಲ್ಲಿ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಹಾಕಿ ಪಾಕಿಸ್ತಾನದ ಮುಜಾಹಿದ್ ಸಂಬಂಧಿತ ಹಾಡನ್ನು ಬಳಸಿರುವುದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಎಸೆದ ಬಹಿರಂಗ ಸವಾಲು.
ಮುಜಾಹಿದ್ ಬೆಂಬಲಿತ ಹಾಡನ್ನು ಬಳಸಿ, ಆ… pic.twitter.com/hg5xI98kmg
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm