ಬ್ರೇಕಿಂಗ್ ನ್ಯೂಸ್
25-08-26 11:38 am HK News Staffer ಕ್ರೈಂ
ಉಡುಪಿ, ಆ. 25: ಉದ್ಯಮಿ ಡೇವಿಡ್ ಡಿಸೋಜ ಶೂಟ್‌ಔಟ್ ಪ್ರಕರಣದಲ್ಲಿ ಮಹತ್ತರ ತಿರುವು ಲಭಿಸಿದ್ದು ಅದಾನಿ ಯುಪಿಸಿಎಲ್ ಕಂಪೆನಿಯ ಕೋಟ್ಯಂತರ ಮೌಲ್ಯದ ಗುತ್ತಿಗೆ ಕೈತಪ್ಪಿದ ಆಕ್ರೋಶದಲ್ಲಿ ಉಚ್ಚಿಲದ ಗುತ್ತಿಗೆದಾರ ಕಿಶೋರ್ ರಾಮ ಪೂಜಾರಿ ತನ್ನ ಸಹೋದರ, ಭೂಗತ ಪಾತಕಿ ಹೇಮಂತ್ ಪೂಜಾರಿ ಮೂಲಕ ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಯುಪಿಸಿಎಲ್ ಪೈಪ್‌ಲೈನ್ ಮತ್ತು ಕಾಂಕ್ರೀಟ್ ರಸ್ತೆ ಕಾಮಗಾರಿ ತನ್ನ ಬದಲಿಗೆ ಡೇವಿಡ್ ಡಿಸೋಜಗೆ ದಕ್ಕಿದ್ದರಿಂದ ಸಿಟ್ಟಿಗೆದ್ದ ಕಿಶೋರ್ ಪೂಜಾರಿ, ಡೇವಿಡ್ ಹತ್ಯೆಗೆ 10 ಲಕ್ಷ ರೂ. ಸುಪಾರಿ ನೀಡಿದ್ದ. ಪ್ರಕರಣದಲ್ಲಿ ಭಾಗಿಯಾದ ರಾಜು, ಅನ್ಮೋಲ್, ಜಿಯಾಹುಲ್ ಸೇರಿದಂತೆ ಹಣಕಾಸಿನ ನೆರವು ನೀಡಿದ ಮೊಹಮ್ಮದ್ ಇರ್ಷಾದ್, ಚಿರಾಗ್ ಹಾಗೂ ಸದಾನಂದ ಎಂಬವರನ್ನು ಬಂಧಿಸಲಾಗಿದೆ. ಬಿಹಾರದ ಸೂರಜ್ ನೀಡಿದ ಸುಳಿವು ಆಧರಿಸಿ, ಮುಂಬೈನ ಶೂಟರ್‌ಗಳನ್ನು ವ್ಯವಸ್ಥೆ ಮಾಡಿದ್ದ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ನನ್ನು ಬೆಳಗಾವಿಯ ನಿಪ್ಪಾಣಿಯಲ್ಲಿ ಬಂಧಿಸಲಾಗಿದೆ.

ಬಂಧಿತ ಮುಖ್ಯ ಆರೋಪಿ ಅನುಜ್ ಪಾಟೀಲ್‌ನನ್ನು ಉಡುಪಿಗೆ ಕರೆತರುವಾಗ ಹೆಬ್ರಿ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕೊಲ್ಲೂರು ಎಸ್‌ಐ ಅವರ ಆಯುಧ ಕಸಿದು ಫೈರಿಂಗ್ ಮಾಡಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಕುಂದಾಪುರ ಎಸ್‌ಐ ನಂಜ ನಾಯ್ಕ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದು, ಗಾಯಾಳು ಅನುಜ್‌ನನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ. ಈತನ ವಿರುದ್ಧ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ 11ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿವೆ ಎಂದು ಎಸ್ಪಿ ಹರಿರಾಮ್ ಶಂಕರ್ ವಿವರಿಸಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm