ಬ್ರೇಕಿಂಗ್ ನ್ಯೂಸ್
26-08-26 11:26 am HK News Staffer ಕ್ರೈಂ
ತೆಲಂಗಾಣ , ಆಗಸ್ಟ್ 26: ಕಂಟೇನರ್ ಟ್ರಕ್‌ಗೆ ಖಾಸಗಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಮೃತಪಟ್ಟಿದ್ದು, ಸುಮಾರು 20 ಮಂದಿ ಗಾಯಗೊಂಡಿರುವ ಘಟನೆ ಸೂರ್ಯಪೇಟೆ ಜಿಲ್ಲೆಯ ಕೋಡಾಡ್ ಬಳಿ ನಡೆದಿದೆ.
ಕೋಡಾಡ್ ತಾಲೂಕಿನ ದೋರಕುಂಟಾದಲ್ಲಿ ಇಂದು ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಹೈದರಾಬಾದ್‌ನಿಂದ ಆಂಧ್ರಪ್ರದೇಶದ ಎಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಮುಂದೆ ಸಾಗುತ್ತಿದ್ದ ಕಂಟೇನರ್ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಐವರು ಮಹಿಳೆಯರು ಹಾಗೂ ಓರ್ವ ಪುರುಷ ಮೃತಪಟ್ಟಿದ್ದಾರೆ. ಮೃತರಲ್ಲಿ ಯಸರಪು ಚಿನ್ನಿ (32), ಬೊಳ್ಳಿಪೊಂಗು ಮೇರಿ ಜೋಶ್ನಾ (29) ಹಾಗೂ ಚೆನ್ನಕೇಶವುಲ ನಾಗೇಂದ್ರ ಬಾಬು (21) ಅವರ ಗುರುತು ಪತ್ತೆಯಾಗಿದ್ದು, ಇತರ ಮೂವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಗಾಯಾಳುಗಳನ್ನು ಪೊಲೀಸರು ಹಾಗೂ ಹೆದ್ದಾರಿ ಗಸ್ತು ಸಿಬ್ಬಂದಿ ತಕ್ಷಣ ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಸೂರ್ಯಪೇಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನರಸಿಂಹ ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಮತ್ತು ಹೆದ್ದಾರಿ ಗಸ್ತು ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದ್ದು, ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ. ಎಸ್‌ಪಿ ನರಸಿಂಹ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಂತಾಪ ;
ಭೀಕರ ಅಪಘಾತಕ್ಕೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಅಗತ್ಯವಿರುವ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm