ಬ್ರೇಕಿಂಗ್ ನ್ಯೂಸ್
28-08-26 09:03 pm HK News Staffer ಕ್ರೈಂ
ಬೆಂಗಳೂರು, ಆ.28: ಡೇಟಿಂಗ್ ಆ್ಯಪ್‌ನಲ್ಲಿ ಪರಿಚಯವಾಗಿದ್ದ ಹುಡುಗಿಯನ್ನು ನೀಲಾದ್ರಿ ರಸ್ತೆಯ ಪಬ್‌ನಲ್ಲಿ ಭೇಟಿಯಾಗಲು ಹೋಗಿದ್ದ ಕೇರಳದ 33 ವರ್ಷದ ವ್ಯಕ್ತಿಯನ್ನು ಅಪಹರಿಸಿದ ತಂಡವೊಂದು ಸುಮಾರು 3.75 ಲಕ್ಷ ರೂ.ಗಳನ್ನು ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ಹೊಸೂರು ಮುಖ್ಯ ರಸ್ತೆಯ ಟೆರಾಕಾನ್ ಲೇಔಟ್ ನಿವಾಸಿಯನ್ನು ಆಗಸ್ಟ್ 19ರಂದು ಭೇಟಿಯಾಗಿದ್ದ ಹುಡುಗಿ ರಾತ್ರಿ 10 ಗಂಟೆ ಸುಮಾರಿಗೆ ತನ್ನ ಕಾರಿನಲ್ಲಿ ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದು ಅಲ್ಲಿ ವಿಶ್ರಾಂತಿ ಪಡೆಯೋಣ ಎಂದು ಕಾರು ನಿಲ್ಲಿಸಿದ್ದಳು. ಈ ಮಧ್ಯೆ, ಅಲ್ಲಿಗೆ ಬಂದ ಅವಳ ನಾಲ್ವರು ಸ್ನೇಹಿತರು ಖಾಸಗಿ ಕಂಪನಿ ಉದ್ಯೋಗಿಯಾಗಿದ್ದ ಯುವಕನನ್ನು ತಮ್ಮ ಕಾರಿನಲ್ಲಿ ಎಳೆದೊಯ್ದಿದ್ದರು. ಅಲ್ಲಿಂದ ಬೇರೊಂದು ಸ್ಥಳಕ್ಕೆ ಕರೆದೊಯ್ದು ಅವನ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿ ಎಟಿಎಂ ಕೇಂದ್ರಗಳಿಂದ ಹಣವನ್ನು ವಸೂಲಿ ಮಾಡಿದ್ದಾರೆ.
ಮರುದಿನ ಬೆಳಗ್ಗೆ 10 ಗಂಟೆ ಸುಮಾರಿಗೆ ಎಲೆಕ್ಟ್ರಾನಿಕ್ಸ್ ಸಿಟಿ ಮೆಟ್ರೋ ನಿಲ್ದಾಣದ ಬಳಿ ಯುವಕನನ್ನು ಇಳಿಸಿದ ನಂತರ ಆರೋಪಿಗಳು ಪರಾರಿಯಾಗಿದ್ದಾರೆ. ಈ ಬಗ್ಗೆ ಯುವಕ, ಪೂನಮ್ ಎಂದು ಪರಿಚಯಿಸಿಕೊಂಡಿದ್ದ ಹುಡುಗಿ ಮತ್ತು ಅವಳ ನಾಲ್ವರು ಅಪರಿಚಿತ ಸಹಚರರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.
ಎಲೆಕ್ಟ್ರಾನಿಕ್ಸ್ ಸಿಟಿ ನಿವಾಸಿ ಎಂದು ಹೇಳಿಕೊಂಡಿದ್ದ ಹುಡುಗಿ, ಯುವಕನಿಗೆ ಕರೆ ಮಾಡಿ ನೀಲಾದ್ರಿ ರಸ್ತೆಯಲ್ಲಿರುವ ಪಬ್‌ನಲ್ಲಿ ಭೇಟಿಯಾಗಲು ಕೇಳಿಕೊಂಡಿದ್ದಳು. ಆಕೆಯ ನಿಗೂಢ ಜಾಲದ ಅರಿವಿಲ್ಲದೇ ರಾತ್ರಿ 9.45 ರ ಸುಮಾರಿಗೆ ಆತ ಪಬ್‌ಗೆ ಹೋಗಿದ್ದ. ಬಿಳಿ ಕಾರಿನಲ್ಲಿ ಬಂದಿದ್ದ ಹುಡುಗಿ, ತಾನು ಪೆಟ್ರೋಲ್ ಬಂಕ್‌ಗೆ ಹೋಗಬೇಕೆಂದು ಹೇಳಿ ಯುವಕನನ್ನು ಕರೆದುಕೊಂಡು ಹೋಗಿದ್ದಳು. ಆದರೆ ಆಕೆಯೊಂದಿಗೆ ತೆರಳಿದ ಯುವಕನನ್ನು ಸಹಚರರು ಸೇರಿ ಅಪಹರಿಸಿ ಹಣ ವಸೂಲಿ ಮಾಡಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಅಪಹರಣ, ಸುಲಿಗೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಾಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm