ಬ್ರೇಕಿಂಗ್ ನ್ಯೂಸ್
29-08-26 11:40 am HK News Staffer ಕ್ರೈಂ
ತುಮಕೂರು, ಆಗಸ್ಟ್ 29: ಓವರ್ಟೇಕ್ ಮಾಡುವ ವೇಳೆ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ ನಡೆದಿದೆ.
ಚಿಕ್ಕನಾಯಕನಹಳ್ಳಿ ಕಡೆಯಿಂದ ಬರುತ್ತಿದ್ದ ವೋಕ್ಸ್ವ್ಯಾಗನ್ ಕಾರು ಹಾಗೂ ತುರುವೇಕೆರೆ ಕಡೆಯಿಂದ ಬರುತ್ತಿದ್ದ ಕಿಯಾ ಸಾನೆಟ್ ಕಾರು ನಡುವೆ ಅಪಘಾತ ಸಂಭವಿಸಿದೆ. ವೋಕ್ಸ್ವ್ಯಾಗನ್ ಕಾರು ಓವರ್ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕಿಯಾ ಸಾನೆಟ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದ ರಭಸಕ್ಕೆ ಎರಡೂ ಕಾರುಗಳು ಜಖಂಗೊಂಡಿದ್ದು, ಎರಡೂ ವಾಹನಗಳಲ್ಲಿದ್ದ ತಲಾ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ದಾವುದ್ ಪಾಷ (38), ಆನಂ (3), ಅನಿಲ್ (32) ಹಾಗೂ ವಿವೇಕ್ (31) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಯಾಸ್ಮಿನತಾಬ್ (21), ಸೀಮಾ (64), ಆಸ್ಮ (38) ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತಕ್ಕೂ ಮುನ್ನ ಚಿಕ್ಕನಾಯಕನಹಳ್ಳಿ ಕಡೆಯಿಂದ ಬರುತ್ತಿದ್ದ ವೋಕ್ಸ್ವ್ಯಾಗನ್ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಮತ್ತೊಂದೆಡೆ ತುರುವೇಕೆರೆ ಕಡೆಯಿಂದ ಬರುತ್ತಿದ್ದ ಕಿಯಾ ಸಾನೆಟ್ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ನಾಲ್ವರು ಜೀವ ಕಳೆದುಕೊಂಡಿದ್ದು, ಕುಟುಂಬಸ್ಥರಲ್ಲಿ ತೀವ್ರ ಆಕ್ರಂದನ ಮನೆ ಮಾಡಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm