ಬ್ರೇಕಿಂಗ್ ನ್ಯೂಸ್
31-08-26 09:50 pm HK News Staffer ಕ್ರೈಂ
ಬೆಂಗಳೂರು, ಆ.31: ನಿರ್ಮಾಣ ಹಂತದ ಮನೆಯೊಂದರಲ್ಲಿ ಅಕ್ರಮವಾಗಿ ಖೋಟಾ ನೋಟುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಅಂತರ ಜಿಲ್ಲಾ ಖದೀಮರ ಜಾಲವನ್ನು ರಾಮನಗರ ಜಿಲ್ಲೆಯ ಐಜೂರು ಪೊಲೀಸರು ಬಯಲಿಗೆಳೆದಿದ್ದು, ಏಳು ಮಂದಿಯನ್ನು ಬಂಧಿಸಿದ್ದಾರೆ.
ರಾಮನಗರದ ಶಾಂತಿಲಾಲ್ ಲೇಔಟ್ನಲ್ಲಿರುವ ಸಂತೋಷ್ ಎಂಬವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದಲ್ಲಿ ಅಕ್ರಮ ದಂಧೆ ನಡೆಯುತ್ತಿತ್ತು. ಯಾರಿಗೂ ಸಂಶಯ ಬಾರದಂತೆ ಖಾಲಿ ಕಟ್ಟಡವನ್ನು ಅಡ್ಡೆ ಮಾಡಿಕೊಂಡಿದ್ದ ಗ್ಯಾಂಗ್, ನೋಟು ಮುದ್ರಣ ಮಾಡುತ್ತಿದ್ದರು. ಖಚಿತ ಮಾಹಿತಿ ಬೆನ್ನತ್ತಿದ ಐಜೂರು ಪೊಲೀಸರು ದಿಢೀರ್ ದಾಳಿ ನಡೆಸಿ ಜಾಲವನ್ನು ಭೇದಿಸಿದ್ದಾರೆ. ಬಂಧಿತರನ್ನು ಸಂತೋಷ್, ಸಂಪತ್, ಗೋವಿಂದರಾಜ್, ರೇಣುಕಾರಾಜ್, ರಾಜೇಶ್, ಶಿವರಾಜ್ ಮತ್ತು ಸತೀಶ್ ಎಂದು ಗುರುತಿಸಲಾಗಿದೆ.
ಹೊರಗಿನಿಂದ ಕಾಗದದ ಶೀಟ್ಗಳನ್ನು ತರಿಸಿ, ಅವುಗಳಿಗೆ ನಿರ್ದಿಷ್ಟ ಕೆಮಿಕಲ್ ಲೇಪಿಸಿ ಅಸಲಿ ನೋಟಿನಂತೆ ಕಾಣುವ 200 ಹಾಗೂ 500 ರೂ. ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಲಾಗುತ್ತಿತ್ತು. ಮುದ್ರಿತ ಶೀಟ್ಗಳನ್ನು ಅಚ್ಚುಕಟ್ಟಾಗಿ ಕತ್ತರಿಸಿ, ಬಂಡಲ್ಗಳನ್ನಾಗಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದರು. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಮತ್ತು ಬೆರಳಚ್ಚು ತಜ್ಞರನ್ನೊಳಗೊಂಡ ತಂಡ ಭೇಟಿ ನೀಡಿ, ನೋಟು ಮುದ್ರಣಕ್ಕೆ ಬಳಸಿದ್ದ ರಾಸಾಯನಿಕ, ಕಾಗದ ಹಾಗೂ ಇತರೆ ಮಹತ್ವದ ಸಾಕ್ಷ್ಯಗಳನ್ನು ವಶಕ್ಕೆ ಪಡೆದಿದೆ.
ಕರಾವಳಿಯಲ್ಲಿ ನಕಲಿ ನೋಟು ತಯಾರು ಜಾಲ ಪತ್ತೆ
ಇನ್ನು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿ ನಕಲಿ ನೋಟು ತಯಾರಿಸಲಾಗುತ್ತಿತ್ತು ಎಂಬ ಶಾಕಿಂಗ್ ವಿಚಾರ ಬಯಲಾಗಿತ್ತು. ಮಹಮ್ಮದ್ ಇದ್ರೀಸ್ ಎಂಬಾತನ ನೂತನ ಕಟ್ಟಡದಲ್ಲಿ ಈ ನಕಲಿ ಖೋಟಾ ನೋಟು ದಂಧೆ ನಡೆಯುತ್ತಿತ್ತು. ಮಾಹಿತಿ ತಿಳಿದ ಉಪ್ಪಿನಂಗಡಿ ಪೊಲೀಸರು ಸುಮಾರು ಮಧ್ಯರಾತ್ರಿ 1 ಗಂಟೆಗೆ ದಾಳಿ ನಡೆಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am