ಬ್ರೇಕಿಂಗ್ ನ್ಯೂಸ್
01-09-26 02:58 pm HK News Staffer ಕ್ರೈಂ
ಧಾರವಾಡ , ಸೆಪ್ಟೆಂಬರ್ 1: ಮುಂದಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಯುವಕರು ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದಲ್ಲಿ ದಾವಣಗೆರೆ ಮೂಲದ ವಿನಾಯಕ್ (25), ಮಂಜುನಾಥ್ (29) ಹಾಗೂ ಬಸವರಾಜ (34) ಮೃತಪಟ್ಟಿದ್ದಾರೆ. ಅಭಿಷೇಕ್, ಅಜಯ್ ಹಾಗೂ ಬಸನಗೌಡ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ಕಡೆಯಿಂದ ಧಾರವಾಡದತ್ತ ಬರುತ್ತಿದ್ದ ಕಾರು, ಮುಂದಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ ವೇಳೆ ನಿಯಂತ್ರಣ ಕಳೆದುಕೊಂಡಿದೆ. ಈ ವೇಳೆ ಕಾರು ಡಿವೈಡರ್‌ಗೆ ರಭಸವಾಗಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅಪಘಾತಕ್ಕೀಡಾದ ಕಾರು ಬೆಳಗಾವಿ ಕಡೆಯಿಂದ ದಾವಣಗೆರೆಯತ್ತ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಗರಗ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ ಗಂಗೋಳ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಹಾಗೂ ವಾಹನಗಳ ಚಲನವಲನದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm