ಬ್ರೇಕಿಂಗ್ ನ್ಯೂಸ್
02-09-26 07:18 pm HK News Staffer ಕ್ರೈಂ
ಕಾರ್ಕಳ, ಸೆ. 2: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ರಾಜ್ಯ ಸಚಿವರಾಗಿದ್ದ ನಾಗೇಂದ್ರ ಅವರ ರಾಜೀನಾಮೆ ವಿಚಾರವನ್ನು ಮುಂದಿಟ್ಟುಕೊಂಡು, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪೋಸ್ಟರ್ ಅಭಿಯಾನಕ್ಕೆ ಪೊಲೀಸರು ತಡೆ ನೀಡಿದ್ದಾರೆ. ಪೋಸ್ಟರ್ ಅಂಟಿಸಲು ತೆರಳುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ನೀಟ್ ಪರೀಕ್ಷೆಯಲ್ಲಿನ ಅಕ್ರಮ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ರಾಜ್ಯ ಸಚಿವರಾಗಿದ್ದ ನಾಗೇಂದ್ರ ರಾಜೀನಾಮೆ ನೀಡಿರುವುದನ್ನು ಕಾಂಗ್ರೆಸ್ ಉಲ್ಲೇಖಿಸಿದೆ. ಇದೇ ಮಾದರಿಯಲ್ಲಿ ನಕಲಿ ಪರಶುರಾಮನ ಮೂರ್ತಿ ನಿರ್ಮಾಣ ಹಾಗೂ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿ ಶಾಸಕ ಸುನಿಲ್ ಕುಮಾರ್ ಕೂಡ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಪೋಸ್ಟರ್ ಅಂಟಿಸಲು ತೆರಳುತ್ತಿದ್ದವರಿಗೆ ತಡೆ
ಇಂದು ಬೆಳಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು. ಬಳಿಕ ಶಾಸಕರ ಮನೆಗೆ ಪೋಸ್ಟರ್ ಅಂಟಿಸಲು ತೆರಳುತ್ತಿದ್ದ ವೇಳೆ ಸರ್ವಜ್ಞ ವೃತ್ತದ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ವಶಕ್ಕೆ ಪಡೆದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ‘ಸುನಿಲ್ ಕುಮಾರ್ ರಾಜೀನಾಮೆ ನೀಡಲೇಬೇಕು’ ಎಂದು ಘೋಷಣೆ ಕೂಗಿ ರಸ್ತೆಯಲ್ಲೇ ಪ್ರತಿಭಟನೆ ನಡೆಸಿದರು.
ಪೋಸ್ಟರ್ ಅಭಿಯಾನವನ್ನು ಇಂದು ಅಥವಾ ನಾಳೆಗೆ ಮಾತ್ರ ಸೀಮಿತಗೊಳಿಸುವುದಿಲ್ಲ. ಮುಂದಿನ ದಿನಗಳಲ್ಲಿಯೂ ಅಭಿಯಾನ ಮುಂದುವರಿಸಿ ಶಾಸಕರ ಮನೆಗೆ ಪೋಸ್ಟರ್ ಅಂಟಿಸುವುದಾಗಿ ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದ್ದಾರೆ.
ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿ ಪ್ರತಿರೋಧ;
ಕಾಂಗ್ರೆಸ್‌ನ ಪೋಸ್ಟರ್ ಅಭಿಯಾನಕ್ಕೆ ಬಿಜೆಪಿ ಕಾರ್ಯಕರ್ತರು ಪ್ರತಿರೋಧ ವ್ಯಕ್ತಪಡಿಸಿದ್ದು, ಶಾಸಕರ ಮನೆ, ಕಚೇರಿ ಹಾಗೂ ಬಿಜೆಪಿ ಕಚೇರಿ ಬಳಿ ಜಮಾಯಿಸಿದ್ದಾರೆ. ಕಾರ್ಕಳದ ವಿವಿಧ ಭಾಗಗಳಿಂದ ಬಿಜೆಪಿ ಕಾರ್ಯಕರ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪೊಲೀಸರ ಸರ್ಪಗಾವಲು
ಪೋಸ್ಟರ್ ಅಭಿಯಾನಕ್ಕೆ ತಡೆ ನೀಡುವ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm