ಬ್ರೇಕಿಂಗ್ ನ್ಯೂಸ್
03-09-26 05:21 pm HK News Staffer ಕ್ರೈಂ
ಬೆಂಗಳೂರು, ಸೆ.3: ಇತ್ತೀಚೆಗೆ ಬೆಳಗಾವಿಯ ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ ಮೂಲಕ ರಾಜ್ಯಾದ್ಯಂತ ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ ಐ ಜಯಶ್ರೀ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಹಿಂಡಲಗಾ ಜೈಲಿನಲ್ಲಿದ್ದ ರೌಡಿಶೀಟರ್ ಜೊತೆಗೆ ಅಕ್ರಮ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಜಯಶ್ರೀ ಅವರನ್ನು ಇಲಾಖಾ ವಿಚಾರಣೆ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. ಆಂತರಿಕ ಭದ್ರತಾ ವಿಭಾಗದ ಐಜಿಪಿ ಕೆ. ತ್ಯಾಗರಾಜನ್ ಅಮಾನತು ಆದೇಶ ಹೊರಡಿಸಿದ್ದಾರೆ
ತುಮಕೂರಿನ ಕುಣಿಗಲ್ ಮೂಲದ, ಬೆಳಗಾವಿ ಜೈಲಿನಲ್ಲಿದ್ದ ವಿಚಾರಣಾಧೀನ ಕೈದಿ ಸಾಯಿಕುಮಾರ್ ಅಲಿಯಾಸ್ ಸುರೇಶ್ ಎಂಬಾತನೊಂದಿಗೆ ಪಿಎಸ್ಐ ಜಯಶ್ರೀ ಅವರು ವೀಡಿಯೋ ಕಾಲ್ ಹಾಗೂ ಅಕ್ರಮ ಸಂಪರ್ಕ ಹೊಂದಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಜೈಲಿನಲ್ಲಿದ್ದ ಕೈದಿಗೆ ಮೊಬೈಲ್ ಒದಗಿಸಿ, ಆತನೊಂದಿಗೆ ವೀಡಿಯೋ ಕಾಲ್ ಮೂಲಕ ಅಶ್ಲೀಲವಾಗಿ ವರ್ತಿಸಿರುವ ವೀಡಿಯೋಗಳು ಮತ್ತು ಆಡಿಯೋ ಕ್ಲಿಪ್‌ಗಳು ಇತ್ತೀಚೆಗೆ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕೈದಿಯ ಬ್ಯಾಂಕ್ ಖಾತೆ ಹಾಗೂ ಆತನ ತಾಯಿಯ ಮೂಲಕ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ಮತ್ತು ಕೈದಿಗೆ ಸೇರಿದ ಸ್ಕೂಟರ್ ಹಾಗೂ ಸ್ವಿಫ್ಟ್ ಕಾರನ್ನು ಜಯಶ್ರೀ ತನ್ನ ಹೆಸರಿಗೆ ಮಾಡಿಸಿಕೊಂಡಿರುವ ಚಾಟ್‌ಗಳು ಪತ್ತೆಯಾಗಿದ್ದವು. ಸಚಿವ ಪ್ರಿಯಾಂಕ್ ಖರ್ಗೆ ಅವರ ಸೂಚನೆ ಮೇರೆಗೆ ಇಲಾಖೆಯಿಂದ ಆಂತರಿಕ ತನಿಖೆ ನಡೆಸಿದ್ದು ಮೇಲ್ನೋಟಕ್ಕೆ ಕರ್ತವ್ಯ ಲೋಪ, ಅಶಿಸ್ತು ಮತ್ತು ಅಧಿಕಾರ ದುರುಪಯೋಗ ಸಾಬೀತಾದ ಹಿನ್ನೆಲೆಯಲ್ಲಿ ಅಮಾನತು ಕ್ರಮ ಕೈಗೊಳ್ಳಲಾಗಿದೆ.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 08:05 pm
HK News Staffer
ಸೌಜನ್ಯ ಪ್ರಕರಣದ ಮರು ತನಿಖೆ ; ಹಿಂದಿನ ತನಿಖಾ ಲೋಪಗಳ...
26-09-26 03:35 pm
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm